ಬಿಜೆಪಿಗರಿಗೆ 10 ರೂ. ತರೋ ತಾಕತ್ತಿಲ್ಲ: ಸಂಸದ ಮಲ್ಲಿಕಾರ್ಜುನ ಖರ್ಗೆ


Team Udayavani, Mar 19, 2017, 2:55 PM IST

gul4.jpg

ಕಲಬುರಗಿ: ಅಲ್ರಿ. ಇವರಿಗೆ(ಬಿಜೆಪಿ) ಬಜೆಟ್‌ ಮೇಲಿನ ಚರ್ಚೆ ಇಂಪಾರ್‌ಟೆಂಟೋ.. ಡೈರಿ..ಒಳಗಿನ ಹೆಸರು ಇಂಪಾರಟೆಂಟೋ.. ಯಾವುದಕ್ಕೆ ಆದ್ಯತೆ ಕೊಡಬೇಕು ಎನ್ನುವುದೂ ತಿಳಿಯೋದಿಲ್ಲ.. ಕೇಂದ್ರದಿಂದ 10 ರೂ. ತರುವ  ತಾಕತ್ತು ಇಲ್ಲ. ಅಂತಹವರು ರಾಜ್ಯ ಬಜೆಟ್‌ ಕುರಿತು ಟೀಕೆಮಾಡುವುದು ಸರಿಯಲ್ಲ ಎಂದು ಲೋಕಸಭೆ ಕಾಂಗ್ರೆಸ್‌ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ನಾಯಕರ ನಡೆಯನ್ನು ಟೀಕಿಸಿದರು. 

ನಗರದ ಗುವಿವಿಯಲ್ಲಿ ಶನಿವಾರ ನಡೆದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅಧ್ಯಯನ ಪೀಠದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.ಅಭಿವೃದ್ಧಿ ಸಹಿಸದೇ ಹೊಟ್ಟೆಕಿಚ್ಚು ಪಡುವವರಿಗೆ ಏನು ಮಾಡಲು ಆಗೋದಿಲ್ಲ. 371ನೇ (ಜೆ) ಕಲಂ ಜಾರಿಗೆ ಬಂದಾಗಿನಿಂದಲೂ ಹೈಕದಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ. ಕಳೆದ ಮೂರು ವರ್ಷಗಳಲ್ಲಿ 890 ಕೋಟಿ ರೂ.ಗಳಷ್ಟು ಕೆಲಸಗಳಾಗಿವೆ. ಈ ಬಾರಿ 1500 ಕೋಟಿ.ರೂ.ಗಳನ್ನು ನೀಡಲಾಗಿದೆ.

ಬಜೆಟ್‌ನಲ್ಲಿ ಈ ಭಾಗದ ಮೂಲಭೂತ ಸೌಕರ್ಯಕ್ಕಾಗಿ ಹಣ ಮೀಸಲಿಡಲಾಗಿದೆ. ಉದ್ಯೋಗ, ಶಿಕ್ಷಣ, ಮೆಡಿಕಲ್‌, ಇಂಜಿನಿಯರಿಂಗ್‌ ಸೀಟುಗಳಲ್ಲಿ ಹೆಚ್ಚಳ ಎಲ್ಲವನ್ನು ಮಾಡಲಾಗಿದೆ. ಆಷ್ಟಿದ್ದರೂ ಏನು ಮಾಡಿಲ್ಲ ಎನ್ನುವವರಿಗೆ ಏನೆನ್ನಬೇಕು ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಅವರು ಉತ್ತಮ ಬಜೆಟ್‌ ನೀಡಿದ ಬಳಿಕೂ ಅದರ ಕುರಿತು ಸಾಧಕ ಬಾಧಕಗಳನ್ನು ಚರ್ಚೆ ಮಾಡಬೇಕಾದ ವಿರೋಧ ಪಕ್ಷದವರು ಸದನದಲ್ಲಿ ನಮ್ಮ ಡೈರಿ.. ನಿಮ್ಮ ಡೈರಿ ಎಂದು ಕಾಲ ಹರಣ ಮಾಡುತ್ತಿದ್ದಾರೆ.

ಅವರ ಬಳಿಯಲ್ಲಿ ಬಜೆಟ್‌ ಕುರಿತು ಮಾತನಾಡಲು ಏನು ಇಲ್ಲ. ಇದರಿಂದಲೇ ಗೊತ್ತಾಗುತ್ತದೆ ಸಿದ್ದು ಬಜೆಟ್‌ ಎಂತಹದ್ದು ಎಂದು ಶ್ಲಾಘಿಸಿದರು. ಗುವಿವಿಯಲ್ಲಿ ಹಲವು ಅಭಿವೃದ್ಧಿ ಕಾರ್ಯ ಕೈಗೊಳ್ಳಲು 35 ಕೋಟಿ ರೂ,ಗಳ ಬೇಡಿಕೆ ಇಡಲಾಗಿದೆ. ಮುಖ್ಯಮಂತ್ರಿಗಳು ಅರ್ಧ ಕೊಡಲಿ. ನಾವು ಎಚ್‌ಕೆಡಿಬಿಯಿಂದ ಅರ್ಧ ಕೊಡುತ್ತೇವೆ ಎಂದು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರಡ್ಡಿ,

ಮುಂದಿನ ನಮ್ಮ ಪೀಳಿಗೆಗೆ ಹಲವು ಸಂತರ, ದಾರ್ಶನಿಕರ, ಶರಣ ಚಿಂತನೆಗಳು, ವಿಚಾರಗಳು  ತಲುಪಲು ಎನ್ನುವ ಕಾರಣಕ್ಕೆ ಅಧ್ಯಯನ ಪೀಠಗಳನ್ನು ವಿವಿಗಳಲ್ಲಿ ಆರಂಭಿಸಲಾಗುತ್ತಿದೆ. ಇವುಗಳು ಕೇವಲ ಒಂದು ಜಾತಿಗೆ ಸಿಮೀತವಾಗದಂತೆ ನೋಡಿಕೊಳ್ಳುವುದು ಕೂಡ ನಮ್ಮ ಕೆಲಸವಾಗಬೇಕು. ನಿರಂತರ ಅಧ್ಯಯನಗಳು ನಡೆಯಬೇಕು. 

ಬೆಳಗಾವಿ ರಾಣಿ ಚನ್ನಮ್ಮ ವಿವಿಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಸಂಗೊಳ್ಳಿ ರಾಯಣ್ಣ ಅಧ್ಯಯನ ಪೀಠ ಮತ್ತು 1 ಕೋಟಿ ರೂ. ವೆಚ್ಚದಲ್ಲಿ ಚನಮ್ಮನ ಅಧ್ಯಯನ ಪೀಠವನ್ನು ಆರಂಭಿಸಲಾಗುತ್ತಿದೆ. ಅಲ್ಲದೆ, ಶಿಕ್ಷಣಕ್ಕಾಗಿ ಸಿದ್ದರಾಮಯ್ಯ ಅವರು 24 ಸಾವಿರ ಕೋಟಿ.ಗಳನ್ನು ಘೋಷಣೆ ಮಾಡಿದ್ದಾರೆ. ಅದರಂತೆ ಪ್ರಾಥಮಿಕ ಹಾಗೂ ಪ್ರೌಢ, ಕಾಲೇಜು ಸೇರಿ ಒಟ್ಟು 1.50 ಲಕ್ಷ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಲಾಗುತ್ತಿದೆ. 

ಮೊದಲ ಬಾರಿಗೆ ರಾಜ್ಯದಲ್ಲಿ ಪದವಿ ಮಟ್ಟದಲ್ಲಿ ವಸತಿ  ಕಾಲೇಜುಗಳನ್ನು ಆರಂಭಿಸಲು ಕೂಡ ಬಜೆಟ್‌ನಲ್ಲಿ ಹಣವನ್ನುಮೀಸಲಿಡಲಾಗಿದೆ ಎಂದು ಹೇಳಿದರು. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಮಾತನಾಡಿ, ಹೇಮರಡ್ಡಿ ಮಲ್ಲಮ್ಮನ ಸಾಧನೆಗಳನ್ನು ವಿವರಿಸಿದರು. ಮಲ್ಲಮ್ಮನ ಹೆಸರು ಆಂಧ್ರಪ್ರದೇಶದ ನಾಡಗೀತೆಯಲ್ಲಿ ಸ್ಮರಿಸಲಾಗುತ್ತದೆ ಎಂದರೆ ಎಂಥಹ ಪ್ರಭಾವಿ ಶರಣೆಯಾಗಿರಬೇಕು ಎನ್ನುವುದು ಅರ್ಥವಾಗುತ್ತದೆ. 

ಇವತ್ತು ಅಧ್ಯಯನ ಪೀಠಗಳು ಕೇವಲ ಹೆಸರಿಗಷ್ಟೇ  ಸಿಮೀತವಾಗುತ್ತಿರುವುದನ್ನು ವಿಷಾಧಿಸಿದ ಅವರು, ಕೂಡಲೇ ಪೀಠಗಳ ಹೊಣೆ ಹೊತ್ತವರು ಎಚ್ಚೆತ್ತು ಕೆಲಸ ಮಾಡಬೇಕು ಎಂದು ಹೇಳಿದರು.  ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಧರಂಸಿಂಗ್‌, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ| ಆರ್‌.ಬಿ. ಪಾಟೀಲ, ಸಚಿವರಾದ ಡಾ| ಶರಣ ಪ್ರಕಾಶ ಪಾಟೀಲ, ಮಾಜಿ ಸಚಿವರಾದ ಖಮರುಲ್‌ ಇಸ್ಲಾಂ, ಬಾಬುರಾವ ಚಿಂಚನಸೂರ, 

ಹಾಲಿ ಶಾಸಕರು, ಮಾಜಿ ಶಾಸಕರು, ಮಹಾಪೌರ ಸೈಯ್ಯದ್‌ ಅಹ್ಮದ್‌, ಹಿರಿಯ ಬಂಡಾಯ ಸಾಹಿತಿ ಡಾ| ಚನ್ನಣ್ಣ ವಾಲಿಕಾರ, ಸಿಂಡಿಕೇಟ್‌, ವಿದ್ಯಾವಿಷಯಕ ಪರಿಷತ್‌ ಸದಸ್ಯರು, ಹಿರಿಯ ಕಾಂಗ್ರೆಸ್‌ ಮುಖಂಡರು, ಶೈಕ್ಷಣಿಕ ಚಿಂತಕರು, ಗುವಿವಿ  ಕುಲಸಚಿವ ಪ್ರೊ| ಸಿ.ಎಸ್‌. ಪಾಟೀಲ. ಹೇಮರಡ್ಡಿ ಮಲ್ಲಮ್ಮ ಪೀಠದ ಸಂಯೋಜಕ ಪ್ರೊ| ಎಸ್‌.ಎಂ. ಹಿರೇಮಠ ಇದ್ದರು. ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ| ಎಚ್‌.ಟಿ. ಪೋತೆ ಕಾರ್ಯಕ್ರಮ ನಿರೂಪಿಸಿದರು. ಕುಲಸಚಿವ ಡಾ| ದಯಾನಂದ ಅಗಸರ್‌ ವಂದಿಸಿದರು.  

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.