ಕಾರ್ಕಳ: ಮನೆ ನಿವೇಶನ ರಹಿತರ ಧರಣಿ ಮುಷ್ಕರ
Team Udayavani, Mar 19, 2017, 4:00 PM IST
ಕುಂದಾಪುರ: ನಗರ ಪ್ರದೇಶ ಸೇರಿ, ಸರಕಾರಿ ಮತ್ತು ಅರಣ್ಯ ಭೂಮಿ ಸಾಗುವಳಿಯಲ್ಲಿರುವ ಬಡವರ ಸರ್ವೆ ಮಾಡಿ, ಪಹಣಿಯ ಸಾಗುವಳಿ ಕಾಲಂನಲ್ಲಿ ಹೆಸರು ಸೇರ್ಪಡೆ ಮಾಡಬೇಕು. ರಾಜ್ಯದ ಗ್ರಾಮ ಹಾಗೂ ನಗರಗಳ ಎಲ್ಲ ಬಡವರಿಗೆ ಕನಿಷ್ಠ 10 ಸೆಂಟ್ಸ್ ಹಿತ್ತಲು ಸಹಿತ ಮನೆಯನ್ನು ಉಚಿತವಾಗಿ ಒದಗಿಸಬೇಕು. ಇದಕ್ಕೆ ಬಡವರ ವಸತಿ ಯೋಜನೆಯನ್ನು ಸೂಕ್ತವಾಗಿ ಮಾರ್ಪಡಿಸಬೇಕು. ಈ ಎಲ್ಲಾ ನಿವೇಶನ ರಹಿತರ ಗಣತಿ ನಡೆಸಿ ಫಲಾನುಭವಿ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಅಧ್ಯಕ್ಷ ನಿತ್ಯಾನಂದ ಸ್ವಾಮಿ ಸರಕಾರವನ್ನು ಆಗ್ರಹಿಸಿದರು.
ಕಾರ್ಕಳ ತಾಲೂಕಿನಾದ್ಯಂತ ಬಡ ನಿವೇಶನ ರಹಿತರಿಂದ ಮನೆ ನಿವೇಶನಕ್ಕಾಗಿ ಕೋರಿ ಸಲ್ಲಿಸಿದ ಅರ್ಜಿದಾರರು ಕಾರ್ಕಳ ಪುರಸಭೆ ಕಚೇರಿ ಎದುರು ಆಯೋಜಿ ಸಿದ ಬೃಹತ್ ಪ್ರತಿಭಟನ ಧರಣಿಯ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದರು.ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಯು. ದಾಸ ಭಂಡಾರಿ, ಪ್ರಧಾನ ಕಾರ್ಯದರ್ಶಿ, ವೆಂಕಟೇಶ ಕೋಣಿ, ಕವಿರಾಜ್ ಎಸ್. ಶೇಖರ ಕುಲಾಲ್, ಸುನಿತಾ ಶೆಟ್ಟಿ, ದಾಮೋದರ ಆಚಾರ್, ಜಮೀಲ, ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.