ಶಿರೂರು: 94 ಸಿ ಹಕ್ಕು ಪತ್ರಕ್ಕೆ ಆಗ್ರಹಿಸಿ ಸಮಾವೇಶ
Team Udayavani, Mar 19, 2017, 4:14 PM IST
ಕುಂದಾಪುರ: ಸರಕಾರಿ ನಿವೇಶನ ಸ್ಥಳ ಜನತಾ ಕಾಲನಿಯಲ್ಲಿ ಭೂಮಿ ಪಡೆದುಕೊಂಡು ಇನ್ನೂ ಮನೆ ಕಟ್ಟದೆ ಸ್ಥಳ ಖಾಲಿ ಬಿಟ್ಟು ಅಥವಾ ಇತರರಿಗೆ ವಹಿಸಿಕೊಟ್ಟ ಪ್ರಕರಣ ಇದೆ. ಜಿಲ್ಲಾಧಿಧಿಕಾರಿ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ವಾಸ ಇರುವವರಿಗೆ ಭೂಮಿಯನ್ನು ಹಸ್ತಾಂತರಿಸಲು ಕ್ರಮವಹಿಸಬೇಕು. ಭೂಮಿ ನೀಡಿದ 2 ವರ್ಷದೊಳಗೆ ಮನೆ ಕಟ್ಟಿಕೊಳ್ಳಬೇಕು ಎಂಬ ಷರತ್ತು ಇದೆ. ಅದನ್ನು ಮೀರಿ ಇತರರಿಗೆ ವಹಿಸಿಕೊಟ್ಟಲ್ಲಿ ಅವರಿಗೆ ಹಸ್ತಾಂತರಿಸಬೇಕು ಎಂದು ಶಿರೂರಿನ ನಿವೇಶನ ರಹಿತರ ಹೋರಾಟ ಸಮಿತಿಯ ಮುಖಂಡ ಶೋಯೆಬ್ ಅರೆಹೊಳೆ ಹೇಳಿದರು.
ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತ ಹಾಗೂ 94 ಸಿ ಅರ್ಜಿದಾರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಮಾತನಾಡುತ್ತಾ ಶಿರೂರು ಗ್ರಾಮದ ಮೊದೀನತಾರ ಮತ್ತು ನ್ಯೂಕಾಲನಿಯಲ್ಲಿ ಸರಕಾರಿ ಜಾಗದ ನಿವಾಸಿಗಳಿಗೆ ಹಕ್ಕು ಪತ್ರ ಮಂಜೂರು ಮಾಡಬೇಕು ಎಂದು ಸರಕಾರವನ್ನು ಆಗ್ರಹಿಸಿದರು.
ಎ. 18ರಂದು ಬೈಂದೂರು ಶಾಸಕರ ಮನೆ ಚಲೋ ಹೋರಾಟ ಯಶಸ್ವಿಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಮನೆ ನಿವೇಶನ ರಹಿತರಿಗೆ ನಿವೇಶನ ಸ್ಥಳ 94ಸಿ ಕಲಂಗೆ ಸೂಕ್ತ ಕಾನೂನು ತಿದ್ದುಪಡಿಗೆ ಕ್ರಮವಹಿಸಲು ಸಮಾವೇಶದಲ್ಲಿ ನಿರ್ಣಯಿಸಲಾಯಿತು. ಕೃಷಿ ಕೂಲಿಕಾರರ ಸಂಘದ ಮುಖಂಡರಾದ ಶೀಲಾವತಿ, ಯು. ದಾಸಭಂಡಾರಿ, ರಾಜೀವ ಪಡುಕೋಣೆ, ನಾಗರತ್ನ ನಾಡ, ಅಜಮುತ್ತಲ್ಲ ಶಿರೂರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Udupi: ಸಿಎನ್ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.