ಉಮೇದುವಾರ್ ಶುರು; ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರಿಂದ ಕಲ್ಲು ತೂರಾಟ
Team Udayavani, Mar 21, 2017, 3:45 AM IST
ಗುಂಡ್ಲುಪೇಟೆ: ಸಚಿವ ಮಹದೇವಪ್ರಸಾದ್‌ರವರ ನಿಧನದಿಂದ ತೆರವಾಗಿರುವ ಗುಂಡ್ಲುಪೇಟೆ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಯಾದ ಮೊದಲು ದಿನವೇ ಹಿಂಸಾರಂಭ ಪಡೆದುಕೊಂಡಿದೆ. ನಾಮಪತ್ರ ಸಲ್ಲಿಕೆ ವೇಳೆ ತಾಲೂಕು ಕಚೇರಿ ಮುಂಭಾಗದಲ್ಲಿ ನೆರೆದಿದ್ದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿದರು. ಪರಿಣಾಮವಾಗಿ ಮೂವರು ಪೊಲೀಸರು ಸೇರಿ ಏಳು ಮಂದಿ ಗಾಯಗೊಂಡಿದ್ದಾರೆ.
ಬೆಳಗ್ಗೆ 11 ಗಂಟೆಗೆ ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನಕುಮಾರ್ ಮತ್ತು ಮಧ್ಯಾಹ್ನ 12.30ಕ್ಕೆ ಕಾಂಗ್ರೆಸ್ ಅಭ್ಯರ್ಥಿ ಡಾ.ಗೀತಾ ಮಹದೇವಪ್ರಸಾದ್‌ರಿಗೆ ನಾಮಪತ್ರ ಸಲ್ಲಿಸಲು ಸಮಯ ನಿಗದಿಯಾಗಿತ್ತು. ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಮೆರವಣಿಗೆ ನಡೆಸಿ ಬಹಿರಂಗ ಸಭೆ ಮುಗಿಸಿಕೊಂಡು ತಾಲೂಕು ಕಚೇರಿಗೆ ಬರುವ ವೇಳೆಗೆ 12.10 ಆಗಿತ್ತು. ಈ ಸಮಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಡಾ|ಗೀತಾ ಮಹದೇವಪ್ರಸಾದ್ ನಾಮಪತ್ರ ಸಲ್ಲಿಸಲು ತಾಲೂಕು ಕಚೇರಿ ಕಡೆಗೆ ಸಾಗುತ್ತಿರುವ ಮಾಹಿತಿ ಬಂದಿತು. ಆಗ ಬಿಜೆಪಿ ಮುಖಂಡರು ತಾಲೂಕು ಕಚೇರಿಗೆ ಹೋಗಿ ನಾಮಪತ್ರ ಸಲ್ಲಿಸಿ ಹೊರಬಂದರು. ಅದೇ ಸಮಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೀತಾರವರು ತಮ್ಮ ಅಪಾರ ಬೆಂಬಲಿಗರೊಂದಿಗೆ ತಾಲೂಕು ಕಚೇರಿ ಹತ್ತಿರ ಬಂದಿದ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ತಾಲೂಕು ಕಚೇರಿ ಎದುರು ಮುಖಾಮುಖೀಯಾದರು.
ಈ ಸಮಯದನ್ನು ದುರುಪಯೋಗಪಡಿಸಿಕೊಂಡ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಿದ್ದಾರೆ. ಇದರಿಂದ ವ್ಯಗ್ರಗೊಂಡ ಎರಡೂ ಪಕ್ಷದ ಕಾರ್ಯಕರ್ತರು ಪರಸ್ಪರ ಕಲ್ಲು, ಚಪ್ಪಲಿ ತೂರಿದರು. ಇದನ್ನು ಕಂಡ ಪೊಲೀಸರು ಮೊದಲು ಶಾಂತಿಯುತವಾಗಿ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸಿದರಾದರೂ ಉದ್ರಿಕ್ತರು ನಿಯಂತ್ರಣಕ್ಕೆ ಬರಲಿಲ್ಲ. ಆಗ ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದರು. ಈ ಮಧ್ಯೆ ಪೊಲೀಸರು ಕಡೆಗೂ ದುಷ್ಕರ್ಮಿಗಳು ಕಲ್ಲು ತೂರಿದರು. ಪರಿಣಾಮ ಎಎಸ್‌ಐ ನಾಗರಾಜು, ಪೇದೆಗಳಾದ ಮಂಜುನಾಥಸ್ವಾಮಿ, ನಾಗರಾಜು ಗಾಯಗೊಂಡುರು. ಪರಿಸ್ಥಿತಿ ಕೈಮೀರುವುದನ್ನು ಅರಿತ ಪೊಲೀಸರು ಲಾಠಿಪ್ರಹಾರ ನಡೆಸಿ ಜನರನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತರೆನ್ನಲಾದ ನಾಲ್ವರು ಗಾಯಗೊಂಡಿದ್ದು, ಇವರನ್ನು ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.