ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಗ್ರಾ.ಪಂ. ನೌಕರರ ಮುಷ್ಕರ


Team Udayavani, Mar 21, 2017, 12:36 PM IST

grama-panchayat.jpg

ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾ.ಪಂ. ನೌಕರರು ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಪ್ರತಿಭಟನ ಸ್ಥಳಕ್ಕೆ ಭೇಟಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

ಗ್ರಾ.ಪಂ. ನೌಕರರ ಭಡ್ತಿಗೆ ಸಂಬಂಧಿಸಿದಂತೆ ಶೀಘ್ರ ಅಗತ್ಯ ಕ್ರಮ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಸಂಘ, ಪಂ. ಕಾರ್ಯದರ್ಶಿಗಳ ಸಂಘ, ದ್ವಿತೀಯ ದರ್ಜೆ ಲೆಕ್ಕಸಹಾಯಕರ ಸಂಘ ಹಾಗೂ ಪಂಚಾಯತ್‌ ನೌಕರರ ಸಂಘದ ಸದಸ್ಯರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಅನಗತ್ಯ ಒತ್ತಡ
ಜಿಲ್ಲಾ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಸಿದ್ದೇಶ್‌ ಮಾತನಾಡಿ, ವಸತಿ ಯೋಜನೆ ಸೇರಿದಂತೆ ಸರಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಅನಗತ್ಯ ಒತ್ತಡ ಹೇರಲಾಗುತ್ತಿದೆ. ಅಲ್ಲದೆ ತಾಂತ್ರಿಕವಾಗಿ ಸಮರ್ಪಕವಾಗಿಲ್ಲದ ಹಲವು ಸಮಸ್ಯೆಗಳಿರುವ ಆ್ಯಪ್‌ಗ್ಳನ್ನು ಅಳವಡಿಸಿ ಗುರಿ ನಿಗದಿಪಡಿಸಿ ಒತ್ತಡ ಹಾಕಲಾಗುತ್ತಿದೆ. ಇದರಿಂದ ಪಂಚಾಯತ್‌ನ ಇತರ ಕಾರ್ಯಗಳಿಗೆ ಅಪಾರ ತೊಡಕಾಗುತ್ತಿದೆ ಎಂದು ದೂರಿದರು.

ಅನಗತ್ಯ ತಂತ್ರಾಂಶ (ಆ್ಯಪ್‌)ಗಳ ಮೂಲಕ ಜಿಪಿಎಸ್‌ ಅಳವಡಿಸುವ ಪ್ರಕ್ರಿಯೆಯಿಂದಾಗಿ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆಯಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು, ಸರಳ, ಉಪಯೋಗಿಸಲು ಪೂರಕ, ಅಧಿಕೃತವಾದ ಒಂದೇ ತಂತ್ರಾಂಶದಲ್ಲಿ ಕಾರ್ಯನಿರ್ವಹಿಸುವ ವ್ಯವಸ್ಥೆಯನ್ನು ಅಳವಡಿಸುವ ಅಗತ್ಯವಿದೆ. ಬಾಪೂಜಿ ಸೇವಾ ಕೇಂದ್ರಗಳಿಗೆ ಮಾನವ ಸಂಪದ ಹಾಗೂ ತಾಂತ್ರಿಕ ಪರಿಕರಗಳನ್ನು ಶೀಘ್ರ ಒದಗಿಸಬೇಕು. ಪಂಚಾಯತ್‌ ಸಿಬಂದಿಯ ಭಡ್ತಿ ಪ್ರಕ್ರಿಯೆಗೆ ಶೀಘ್ರ ಕ್ರಮ ಕೈಗೊಳ್ಳಬೇಕು. ಪಿ.ಎಫ್. ಮತ್ತು ಇಎಸ್‌ಐ ಮತ್ತಿತರ ಸೌಲಭ್ಯಗಳನ್ನು ನಿರ್ದಿಷ್ಟ ಕಾಲಮಿತಿಯೊಳಗೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಪಂಚಾಯತ್‌ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ಬೀಜಾಡಿ ಮಾತನಾಡಿ, ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುತ್ತಿರುವ ಎಲ್ಲ ಗ್ರಾ.ಪಂ. ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಪಂ. ನೌಕರರ ವೇತನ ಭತ್ತೆ ಮತ್ತು ಇನ್ನಿತರ ಸೌಲಭ್ಯಗಳನ್ನು ಸಕಾಲ ಯೋಜನೆಯಡಿ ನಿಗದಿತ ಕಾಲಾವಧಿಯೊಳಗೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪಂ. ಅಭಿವೃದ್ಧಿ ಅಧಿಕಾರಿಗಳ ಸಂಘದ ಕಾರ್ಯದರ್ಶಿ ಮಹೇಶ್‌, ಮಹಿಳಾ ಉಪಾಧ್ಯಕ್ಷೆ ಪ್ರಮೀಳಾ ನಾಯಕ್‌, ದ್ವಿತೀಯ ದರ್ಜೆ ಲೆಕ್ಕಸಹಾಯಕರ ಸಂಘದ ಅಧ್ಯಕ್ಷ ಶಿವರಾಜ್‌, ಕಾರ್ಯದರ್ಶಿ ಬೆಟ್ಟಸ್ವಾಮಿ, ಪಂ. ನೌಕರರ ಸಂಘದ ಕಾರ್ಯದರ್ಶಿ ನರೇಶ್‌ ನಾಯಕ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agri

State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.