ಕೇಳ್ಳೋರಿಲ್ಲ ನಮ್ಮ ಗೋಳು, ಎಲ್ಲಿದ್ದೀರಿ ನಾಯಕರೇ?


Team Udayavani, Mar 21, 2017, 1:04 PM IST

av-protest-freedi.jpg

ಬೆಂಗಳೂರು: ವೇತನ ಹೆಚ್ಚಳ ಹಾಗೂ ಸೇವಾ ನಿಯಮಗಳ ಸರಳೀಕರಣಕ್ಕೆ ಒತ್ತಾಯಿಸಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯದ  ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೋಳು ಕೇಳುವವರೇ ಇಲ್ಲದ ಸ್ಥಿತಿ ಸೋಮವಾರ ತಡರಾತ್ರಿಯವರೆಗೂ ಕಂಡುಬಂತು. ವರ್ಷವೂ ತುಂಬದ ಮಕ್ಕಳ ಜತೆ ಸ್ವಾತಂತ್ರ್ಯ ಉದ್ಯಾನವನ ಸೇರಿ ಇಕ್ಕೆಲಗಳಲ್ಲಿರುವ ಶೇಷಾದ್ರಿ ರಸ್ತೆ, ಕಾಳಿದಾಸ ರಸ್ತೆಗಳಲ್ಲೇ ಮಲಗಿರುವ ದೃಶ್ಯಗಳು ಎಂಥವರನ್ನೂ ಮನಕಲಕುವಂತಿತ್ತು.

ಕೂಗಳತೆ ದೂರದಲ್ಲಿ ವಿಧಾನಸೌಧ, ಹಿರಿಯ ಸಚಿವರು, ಹಿರಿಯ ಪೊಲೀಸ್‌ ಅಧಿಕಾರಿಗಳ ಕಚೇರಿಗಳು ಇದ್ದರೂ ಯಾರೂ ಭರವಸೆ ಮೂಡಿಸುವಂಥ ಮಾತುಗಳನ್ನೂ ಆಡದೇ ನಿರ್ಲಕ್ಷ್ಯ ಧೋರಣೆ ತಾಳಿರುವುದು ವಿಪರ್ಯಾಸ. ಕಡೇ ಪಕ್ಷ ಪ್ರತಿಭಟಿಸುವ ಹಕ್ಕನ್ನು ಹೊಂದಿರುವ ಜನತೆಗೆ ಕನಿಷ್ಠ ಭದ್ರತೆಯ ಜತೆಗೆ ಕುಡಿಯುವ ನೀರೊದಗಿಸುವ ಕೆಲಸಕ್ಕೂ ಯಾರೂ ಮುಂದಾಗದೇ ಇರುವುದು ಅವರ ಆಕ್ರೋಶ ಉಲಣಿಸಲು ಕಾರಣವಾಗಿದೆ.

ಮಂಗಳವಾರ ಪ್ರತಿಭಟನೆ ಇನ್ನಷ್ಟು ತಾರಕಕ್ಕೆ ಏರುವ ಎಲ್ಲಾ ಲಕ್ಷಣಗಳೂ ಕಾಣಿಸುತ್ತಿದೆ. ಸೋಮವಾರ ಬೆಳಗ್ಗೆಯಿಂದ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆ.ಆರ್‌. ವೃತ್ತ, ನೃಪತುಂಗ ರಸ್ತೆ, ಅಂಬೇಡ್ಕರ್‌ ಬೀದಿ, ಕೆಂಪೇಗೌಡ ರಸ್ತೆ, ರೇಸ್‌ಕೋರ್ಸ್‌ ರಸ್ತೆ, ಅರಮನೆ ರಸ್ತೆ, ಬಸವೇಶ್ವರ ವೃತ್ತದಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ರಸ್ತೆಯಲ್ಲಿ ನಿಲ್ಲುವಂತಾಗಿತ್ತು.

ಇಷ್ಟಾದರೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೋಳು ಕೇಳಿಸಿಕೊಳ್ಳದ ಆಡಳಿತ ಪಕ್ಷದ ನಾಯಕರು, ವಿಪಕ್ಷ ನಾಯಕರಿಗೆ ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಗೆ ಪ್ರಮಾಣಪತ್ರ ಸಲ್ಲಿಸುವ ಪ್ರಕ್ರಿಯೆಯೇ ಮಹತ್ವದ್ದಾಗಿದೆ ಎನ್ನುವ ಟೀಕೆ ಸಾರ್ವಜನಿಕರಿಂದ ಕೇಳಿಬಂದಿದೆ.

ಸಿಎಂ ಭೇಟಿ ನಿಯೋಗಕ್ಕೆ ಪ್ರತಿಫ‌ಲವಿಲ್ಲ! 
ಪ್ರತಿಭಟನೆ ತೀವ್ರಗೊಳಿಸುವ ಮುನ್ನ ರಾಜ್ಯ ಅಂಗನವಾಡಿ ನೌಕರ ಸಂಘದ  ಪದಾಧಿಕಾರಿಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ಬೇರೆ ರಾಜ್ಯಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 10 ರಿಂದ ಹತ್ತೂವರೆ ಸಾವಿರ ರೂ ನೀಡಲಾಗುತ್ತದೆ. ಆದರೆ ರಾಜ್ಯದಲ್ಲಿ 7 ಸಾವಿರಕ್ಕೆ ಸೀಮಿತಗೊಳಿಸಲಾಗಿದೆ. ಹೀಗಾಗಿ ಕೂಡಲೇ ರಾಜ್ಯದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ 10, ಸಾವಿರ ರೂ ನಿಗದಿ ಮಾಡಬೇಕು.

ಸಹಾಯಕಿಯರಿಗೆ ಈಗಿರುವ ವೇತನಕ್ಕಿಂತ  3 ಸಾವಿರ ಹೆಚ್ಚಿಸಬೇಕು ಎಂದು ಮನವಿ ಮಾಡಿದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ನಾನು ಈಗಾಗಲೇ ಬಜೆಟ್‌ನಲ್ಲಿ ಒಂದು ಸಾವಿರ ಹೆಚ್ಚಿಸಿದ್ದೇನೆ.ಅಲ್ಲದೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ನನ್ನ ಮೇಲೆ  ನಂಬಿಕೆಯಿಡಿ. ಪ್ರತಿಭಟನೆ ವಾಪಸ್‌ ಪಡೆಯಿರಿ ಎಂದು ಮನವಿ ಮಾಡಿದ್ದಾರೆ. ಆದರೆ ವೇತನ ಹೆಚ್ಚಳದ ಬಗ್ಗೆ ಪಟ್ಟು ಹಿಡಿದಿದ್ದ ನಿಯೋಗ ಸಿಎಂ ಪ್ರತಿಕ್ರಿಯೆಯಿಂದ ಅಸಮಾಧಾನಗೊಂಡು ವಾಪಸ್‌ ಆಗಿದ್ದಾರೆ.

ಮನವೊಲಿಕೆಗೆ ಸಚಿವೆ ಉಮಾಶ್ರೀ ಯತ್ನ ವಿಫ‌ಲ
ಸೋಮವಾರ ಸಂಜೆ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ, ಫ್ರೀಡಂ ಪಾರ್ಕಿಗೆ ಭೇಟಿ ನೀಡಿ ಪ್ರತಿಭಟನಾನಿರತರನ್ನು ಮನವೊಲಿಸುವ ಪ್ರಯತ್ನ ಮಾಡಿದರು. ರಾಜ್ಯಸರ್ಕಾರದ ಬದಲು ಕೇಂದ್ರಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಬೇಕು. ಈಗಾಗಲೇ ರಾಜ್ಯಸರ್ಕಾರ ತನ್ನ ಇತಿಮಿತಿಯಲ್ಲಿ 5300 ರೂ. ವೇತನ ನೀಡುತ್ತಿದೆ.

ಕೇಂದ್ರ ಸರ್ಕಾರ ಕೇವಲ 1800 ರೂ. ನೀಡುತ್ತಿದೆ. ಹಾಗಾಗಿ  ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿ ಎಂದು ಸಲಹೆ ನೀಡಿದರು. ಇದಕ್ಕೆ ಒಪ್ಪದ ಪ್ರತಿಭಟನಾನಿರತರು ಆಕ್ರೋಶವ್ಯಕ್ತಪಡಿಸಿದಾಗ ಮುಖ್ಯಮಂತ್ರಿಗಳೊಂದಿಗೇ ಚರ್ಚಿಸಿ  ಪರಿಹಾರ ಕಂಡುಕೊಳ್ಳೋಣ ಎಂದು ಹೇಳಿ ನಿಯೋಗಕ್ಕೆ ತಿಳಿಸಿ  ನಿರ್ಗಮಿಸಿದರು.

ರಸ್ತೆಯಲ್ಲೇ ನಿದ್ದೆ ಮಾಡಿದರು
ಫ್ರೀಡಂ ಪಾರ್ಕ್‌ ಸುತ್ತಮುತ್ತ ಇರುವ ರಸ್ತೆಯಲ್ಲಿಯೇ ರಾತ್ರಿ ಕಳೆಯಬೇಕಾದ ಅನಿವಾರ್ಯತೆ ಹೋರಾಟಗಾರರದ್ದು. ಪುಟ್ಟ ಮಕ್ಕಳನ್ನು ತೊಡೆಯಲ್ಲಿ ಮಲಗಿಸಿಕೊಂಡು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದವರ ದೃಶ್ಯ ಎಂಥವರನ್ನೂ ಮನಕಲಕುವಂತಿತ್ತು. ಮಹಿಳೆಯರು ಎಂಬ ಕಾರಣಕ್ಕಾಗಿ ಮಲಗಲು ದಪ್ಪದ ಟಾರ್ಪಲಿನ್‌ ಹಾಸಲಾಗಿದೆ. ಆದರೆ ಕೆಲವರಿಗೆ ಮಾತ್ರ ಈ ಸೌಲಭ್ಯವಿತ್ತು. ಇನ್ನಿತರರು ರಸ್ತೆಯಲ್ಲೇ ಮಲಗಿ ನಿದ್ರಿಸಬೇಕಾದ ದುಃಸ್ಥಿತಿ ಇತ್ತು.

ಇಂದೂ ಟ್ರಾಫಿಕ್‌ ಜಾಮ್‌ ಬಿಸಿ ತಟ್ಟಲಿದೆ!
ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಇಂದು ನಗರದ ಹಲವೆಡೆ ಟ್ರಾಫಿಕ್‌ ಜಾಮ್‌ ಉಂಟಾಗುವ ಸಾಧ್ಯತೆಗಳಿವೆ. ಪ್ರಮುಖವಾಗಿ ಫ್ರೀಡಂ ಪಾರ್ಕ್‌ ಸುತ್ತಲಿನ, ಶೇಷಾದ್ರಿ ರಸ್ತೆ, ಕಾಳಿದಾಸ ರಸ್ತೆ, ಕೆ.ಆರ್‌. ವೃತ್ತ, ನೃಪತುಂಗ ರಸ್ತೆ, ಅಂಬೇಡ್ಕರ್‌ ಬೀದಿ, ಕೆಂಪೇಗೌಡ ರಸ್ತೆ, ರೇಸ್‌ಕೋರ್ಸ್‌ ರಸ್ತೆ, ಅರಮನೆ ರಸ್ತೆ, ಬಸವೇಶ್ವರ ವೃತ್ತದಲ್ಲಿ ಚಾಲುಕ್ಯ ಸರ್ಕಲ್‌, ಮೈಸೂರು ಬ್ಯಾಂಕ್‌, ಕಾರ್ಪೋರೇಶನ್‌ ವõತ್ತದ  ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗಬಹುದು. ಹೀಗಾಗಿ ವಾಹನ ಸವಾರರು ಪರ್ಯಾಯ ಮಾರ್ಗ ಅವಲಂಬಿಸುವುದು ಒಳಿತು. 

ಸ್ಥಳದಲ್ಲಿ ಮಹಿಳಾ ಪೊಲೀಸರ ನಿಯುಕ್ತಿ
ಪ್ರತಿಭಟನೆ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ ಭದ್ರತೆ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮಹಿಳಾ ಪೊಲೀಸ್‌ ಪೇದೆಗಳು ಸೇರಿದಂತೆ ಹೆಚ್ಚುವರಿ ಪೊಲೀಸ್‌ ತುಕಡಿಗಳನ್ನು  ನಿಯೋಜಿಸಲಾಗಿದೆ.ಜತೆಗೆ ಧರಣಿ  ಸುತ್ತಮುತ್ತಲ ಪ್ರದೇಶಗಳಲ್ಲಿ ರಾತ್ರಿಯಿಡೀ ಗಸ್ತು ವಾಹನಗಳು  ತಿರುಗಲಿವೆ ಎಂದು  ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಹೈರಾಣಾದ ವಾಹನ ಸವಾರರು 
ಸೋಮವಾರ ಬೆಳಗ್ಗೆಯೂ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆ.ಆರ್‌. ವೃತ್ತ, ನೃಪತುಂಗ ರಸ್ತೆ, ಅಂಬೇಡ್ಕರ್‌ ಬೀದಿ, ಕೆಂಪೇಗೌಡ ರಸ್ತೆ, ರೇಸ್‌ಕೋರ್ಸ್‌ ರಸ್ತೆ, ಅರಮನೆ ರಸ್ತೆ, ಬಸವೇಶ್ವರ ವೃತ್ತದಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ರಸ್ತೆಯಲ್ಲಿ ನಿಲ್ಲುವಂತಾಗಿತ್ತು. ಜತೆಗೆ ರಾತ್ರಿಯೂ ಅಹೋರಾತ್ರಿ ಧರಣಿ ಮುಂದುವರಿಸಿದ್ದರಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ವಾಹನಗಳ ಸಂಚಾರಕ್ಕೂ  ಇದರ ಬಿಸಿ ತಾಕಿತು. 

ಸೋಮವಾರ ಏನೇನಾಯ್ತು?
* ಬೆಳಗ್ಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಸಂಜೆ ವೇಳೆಗೆ ಸ್ವಾತಂತ್ರ್ಯ ಉದ್ಯಾನವನದ ಬಳಿ ಸೇರಿದ್ದರು.
* ಪ್ರತಿಭಟನಾ ಸ್ಥಳಕ್ಕೆ ಸಚಿವೆ ಉಮಾಶ್ರೀ ಭೇಟಿ ನೀಡಿದ್ದರಾದರೂ ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫ‌ಲರಾದರು. 
* ಸರ್ಕಾರ ಕೊಡಬೇಕಾಗಿರುವುದನ್ನೆಲ್ಲಾ ಕೊಟ್ಟಿದೆ, ಇನ್ನೇನು ಕೊಡಲು ಸಾಧ್ಯವಿಲ್ಲ ಎಂದು ಜಾಗ ಖಾಲಿ ಮಾಡಿದ್ದರು.
* ಸಂಜೆ ವೇಳೆಗಾಗಲೇ ಪ್ರತಿಭಟನಾಕಾರರು ಸ್ಥಳದಲ್ಲೇ ಅಹೋರಾತ್ರಿ ಧರಣಿಗೆ ನಿರ್ಧರಿಸಿದರು.

ಟಾಪ್ ನ್ಯೂಸ್

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.