ಡಿಸಿ ಕಚೇರಿ ಎದುರು ಪ್ರತಿಭಟನೆ
Team Udayavani, Mar 21, 2017, 4:05 PM IST
ಧಾರವಾಡ: ಅಳ್ನಾವರ ತಾಲೂಕು ಘೋಷಣೆ ಬೆನ್ನಲ್ಲೇ ಮತ್ತೆ ವಿವಾದ ಭುಗಿಲೆದ್ದಿದೆ. ಧಾರವಾಡ ಸಮೀಪದಲ್ಲೇ ಇರುವ ನಿಗದಿ ಹಾಗೂ ಸುತ್ತಲಿನ ಗ್ರಾಮಗಳನ್ನು ಧಾರವಾಡ ತಾಲೂಕಿನಲ್ಲೇ ಉಳಿಸುವಂತೆ ಆಗ್ರಹಿಸಿ ಹೋರಾಟ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರಕಾರ ಇದೀಗ ತಾಲೂಕು ವಿಭಜಿಸಿ ನೂತನವಾಗಿ ಅಳ್ನಾವರ ತಾಲೂಕು ರಚಿಸಲು ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ಮುಂದಾಗಿರುವ ಕ್ರಮವನ್ನು ಸ್ವಾಗತಿಸಿರುವ ಸಮಿತಿ, ನಿಗದಿ ಹಾಗೂ ಸುತ್ತಲಿನ ಗ್ರಾಮಗಳನ್ನು ಮಾತ್ರ ಧಾರವಾಡ ತಾಲೂಕಿನಲ್ಲಿಯೇ ಉಳಿಸುವಂತೆ ಡಿಸಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ನಿಗದಿ ಹಾಗೂ ಸುತ್ತಲಿನ ಗ್ರಾಮಗಳು ಧಾರವಾಡದಿಂದ 10-15 ಕಿ.ಮೀ. ವ್ಯಾಪ್ತಿಯಲ್ಲಿವೆ. ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ ಅಳ್ನಾವರ ಪಟ್ಟಣವು ಈ ಗ್ರಾಮಗಳಿಗೆ 40-55 ಕಿ.ಮೀ ಅಂತರದಲ್ಲಿದೆ. ಒಂದು ವೇಳೆ ಈ ಗ್ರಾಮಗಳನ್ನು ನೂತನ ತಾಲೂಕಿಗೆ ಸೇರಿಸಿದರೆ ಆರ್ಥಿಕವಾಗಿ ಅನಾನುಕೂಲ ಮಾತ್ರವಲ್ಲ ಅನಾವಶ್ಯಕವಾಗಿ ಸಮಯ ವ್ಯಯಿಸಬೇಕಾಗುತ್ತದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಹೀಗಾಗಿ ನಿಗದಿ ಹಾಗೂ ಸುತ್ತಲಿನ ಯರಿಕೊಪ್ಪ, ಮನಗುಂಡಿ, ಮನಸೂರ,ಚಿಕ್ಕಮಲ್ಲಿಗವಾಡ, ಹಳ್ಳಿಗೇರಿ, ದೇವರಹುಬ್ಬಳ್ಳಿ, ಕಲಕೇರಿ, ಮಂಡಿಹಾಳ, ಮುಗದ, ಕ್ಯಾರಕೊಪ್ಪ ಗ್ರಾಪಂ ವ್ಯಾಪ್ತಿಯ ಗ್ರಾಮಗಳನ್ನು ಧಾರವಾಡ ತಾಲೂಕಿನಲ್ಲೇ ಮುಂದುವರಿಸಬೇಕು. ಇದರಿಂದ ಈ ಗ್ರಾಮಗಳ ಜನರಿಗೆ ಸಾಕಷ್ಟು ಅನುಕೂಲ ಆಗಲಿದೆ. ಈ ಮನವಿ ಪರಿಗಣಿಸಿ ಬೇಡಿಕೆ ಈಡೇರಿಸದೇ ಇದ್ದರೆ ಉಗ್ರ ಹೋರಾಟ ಅನಿವಾರ್ಯ ಆಗಲಿದೆ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
ಸಮಿತಿ ಅಧ್ಯಕ್ಷ ಮಲ್ಲನಗೌಡ ಪಾಟೀಲ, ಪದಾಧಿಕಾರಿಗಳಾದ ದಶರಥರಾವ್ ದೇಸಾಯಿ, ಕಲ್ಲಪ್ಪ ಹಟ್ಟಿ, ದೇವೇಂದ್ರ ಕಾಳೆ, ಕಲ್ಮೇಶ ಹಾವೇರಿಪೇಟ, ಗಂಗಾಧರ ನಿಸ್ಸಿಮನವರ, ಮಲ್ಲಪ್ಪ ಭಾವಿ, ನಾಗರಾಜ ಕುಂದಗೋಳ, ಎನ್. ಬಿ. ಜೋಡಳ್ಳಿ, ಕರೆಪ್ಪ ಅಮ್ಮಿನಬಾವಿ, ಬಸವರಾಜ ಗುಂಡಗೋವಿ, ಶಿವು ಹಡಪದ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.