ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ


Team Udayavani, Mar 21, 2017, 4:52 PM IST

gul4.jpg

ಚಿಂಚೋಳಿ: ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ತಾಲೂಕಿನ ಎಲ್ಲ ಹಳ್ಳಿ ಮತ್ತು ತಾಂಡಾದಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಮತ್ತು ಪಿಡಿಒ ಮತ್ತು ಅಧ್ಯಕ್ಷ, ಉಪಾಧ್ಯಕ್ಷರು, ಗ್ರಾಪಂ ಸದಸ್ಯರು ಹೆಚ್ಚಿನ ಜವಾಬ್ದಾರಿಯಿಂದ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಂಸದೀಯ ಕಾರ್ಯದರ್ಶಿ ಡಾ| ಉಮೆಶ ಜಾಧವ ಹೇಳಿದರು.

ಪಟ್ಟಣದ ಚಂದಾಪುರ ಸಿ.ಬಿ. ಪಾಟೀಲ ಪದವಿ ಮಹಾವಿದ್ಯಾಲಯದಲ್ಲಿ ತಾಲೂಕಿನ 17 ಗ್ರಾಪಂ ಅಭಿವೃದ್ದಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಗ್ರಾಪಂ ಸದಸ್ಯರಿಗಾಗಿ ಏರ್ಪಡಿಸಲಾಗಿದ್ದ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕಿನ ಚಂದನಕೇರಾ, ಗಡಿಲಿಂಗದಳ್ಳಿ ಹಾಗೂ ಹೂವಿನಬಾವಿ ಬಹುಗ್ರಾಮ ಯೋಜನೆ ಬೇಗನೆ ಪೂರ್ಣಗೊಳಿಸಿ ಗ್ರಾಮ ಮತ್ತು ತಾಂಡಾದ ಜನರಿಗೆ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಆಗಬೇಕು. 

ಕೆಟ್ಟಿರುವ ಕೊಳವೆಬಾವಿ ದುರಸ್ತಿಗೊಳಿಸಬೇಕು ಮತ್ತು ಸೋರಿಕೆಯಾಗುತ್ತಿರುವ ನೀರಿನ ಪೈಪ್‌ ಬದಲಾಯಿಸಬೇಕು. ಇಲ್ಲವೇ ದುರಸ್ತಿಗೊಳಿಸಬೇಕು ಎಂದು ಸೂಚಿಸಿದರು. ತಾಲೂಕಿನಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ನೀರಿನ ತಳವåಟ್ಟ ಕುಸಿಯುತ್ತಿದೆ. ನೀರು ಸಿಗುವ ಸ್ಥಳಗಳಲ್ಲಿ ಕೊಳವೆಬಾವಿ ಕೊರೆಯಿಸಬೇಕು. ಅದಕ್ಕೆ ಬೇಕಾಗುವ ಹಣ ಸರಕಾರದಿಂದ ಕೊಡಿಸಲಾಗುವುದು ಎಂದು ಹೇಳಿದರು. 

ತಾಲೂಕಿನ ಖಾನಾಪುರ, ಗೌಡಪ್ಪ ಗುಡಿತಾಂಡಾ, ಚಂದನಕೇರಾ, ಹೇಮಲಾ ನಾಯಕ  ತಾಂಡಾ, ಪತ್ತು ನಾಯಕ ತಾಂಡಾಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಡೋಣಿ ತಾಂಡಾ ಮತ್ತು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಕೊಳ್ಳಬೇಕು ಎಂದು ಎಇಇ ಶಿವಾಜಿ ಅವರಿಗೆ ಸೂಚಿಸಿದರು.  ತಾಪಂ ಅಧಿಕಾರಿ ಅನೀಲಕುಮಾರ ರಾಠೊಡ ಮಾತನಾಡಿ, ಪಿಡಿಒ ಮತ್ತು ಪಂಪ್‌ ಆಪರೇಟರ್‌ ಗಳು ಕೇಂದ್ರ ಸ್ಥಾನದಲ್ಲಿದ್ದು ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಬೇಕು.

ಕರ್ತವ್ಯ ನಿರ್ಲಕ್ಷé ಮಾಡಿದರೆ ಜಿಪಂ ಸಿಇಒ ಅವರಿಗೆ ವರದಿ ಸಲ್ಲಿಸಿ ಸೂಕ್ತ ಕ್ರಮ ಕೈಕೊಳ್ಳಲಾಗುವುದು ಎಂದು ಹೇಳಿದರು. ಸಭೆಯಲ್ಲಿ ಒಟ್ಟು 17 ಗ್ರಾಪಂ ವ್ಯಾಪ್ತಿಯ ತಾಂಡಾ ಮತ್ತು ಗ್ರಾಮಗಳ ಕುಡಿಯುವ ನೀರಿನ ಕುರಿತು ಚರ್ಚೆ ನಡೆಸಲಾಯಿತು. ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಹ್ಮದ್‌ ಹುಸೇನ್‌ ನಾಯಕೋಡಿ, ತಾಪಂ ಸದಸ್ಯ ರಾಮರಾವ ರಾಠೊಡ ಇದ್ದರು.  

ಟಾಪ್ ನ್ಯೂಸ್

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

vidhana-soudha

CM office ನವೀಕರಣ: ಮತ್ತೊಂದು ವಿವಾದ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.