ರಾಯಚೂರು ವಿವಿಗೆ ಪ್ರತ್ಯೇಕ ಸಿಬ್ಬಂದಿ ನೇಮಕಾತಿ: ಆಗ್ರಹ
Team Udayavani, Mar 21, 2017, 4:59 PM IST
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದಿಂದ ಬೇರ್ಪಟ್ಟು ರಾಯಚೂರಿನಲ್ಲಿ ನೂತನವಾಗಿ ಉದಯಿಸುತ್ತಿರುವ ವಿವಿಗೆ ಹೊಸ ಹುದ್ದೆ ಸೃಜಿಸಿ ಪ್ರತ್ಯೇಕ ಸಿಬ್ಬಂದಿ ನೇಮಕ ಮಾಡಬೇಕು ಎಂದು ಗುಲಬರ್ಗಾ ವಿವಿ ಶಿಕ್ಷಕೇತರ ನೌಕರರ ಒಕ್ಕೂಟದ ನೇತೃತ್ವದಲ್ಲಿ ಶಿಕ್ಷಕ ಹಾಗೂ ಶಿಕ್ಷಕೇತರ ನೌಕರರ ಎಲ್ಲ ಸಂಘಟನೆಗಳ ವೇದಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿತು.
ಈಚೆಗೆ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳನ್ನು ಭೇಟಿಯಾದ ವೇದಿಕೆ ಸದಸ್ಯರು ನೂತನವಾಗಿ ಸ್ಥಾಪನೆಯಾಗಲಿರುವ ರಾಯಚೂರಿನಲ್ಲಿ ವಿವಿಗೆ ಗುವಿವಿಯಿಂದ ಸಿಬ್ಬಂದಿಯನ್ನು ವರ್ಗಾವಣೆ ಮಾಡಬಾರದು. ರಾಯಚೂರು ವಿವಿಗೆ ಹೊಸ ಹುದ್ದೆಗಳನ್ನು ಸೃಜಿಸಬೇಕು ಎಂದು ಮನವಿ ಸಲ್ಲಿಸಿ ಆಗ್ರಹಿಸಿದರು.
ಅಲ್ಲದೆ, ನಿವೃತ್ತಿ ವೇತನಕ್ಕೆ ವಿಶೇಷ ಅನುದಾನ 371ನೇ (ಜೆ) ವಿಶೇಷ ಕಲಂನ ಅಡಿಯಲ್ಲಿ ಎಲ್ಲ ಶಿಕ್ಷಕ, ಶಿಕ್ಷಕೇತರ ಹುದ್ದೆಗಳನ್ನು ಭರ್ತಿ ಮಾಡಬೇಕು. ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ಪ್ರತಿಶತ 10ರಷ್ಟುನ್ನು ಗುವಿವಿಗೆ ಮಂಜೂರು ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ಗುಲಬರ್ಗಾ ವಿವಿ ಶಿಕ್ಷಕೇತರ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ.ಎಂ. ರುದ್ರವಾಡಿ, ಉಪಾಧ್ಯಕ್ಷ ಪ್ರಕಾಶ ಹದನೂರು, ಆರ್.ಎಸ್. ಹೊಸಮಠ, ಶಂಕರ ವೈದ್ಯ, ಗುವಿವಿ ಸ್ನಾತಕೋತ್ತರ ಶಿಕ್ಷಕರ ಸಂಘದ ಉಪಾಧ್ಯಕ್ಷ ಪ್ರೋ| ಜಗನ್ನಾಥ ಸಿಂಧೆ, ಕೆ.ಎಸ್.ಮಾಲಿಪಾಟೀಲ ಹಾಗೂ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.