ಕೇಬಲ್ ದೂರು ಕೋಶ ಸ್ಥಾಪನೆ
Team Udayavani, Mar 22, 2017, 11:41 AM IST
ಉಡುಪಿ: ಕೇಬಲ್ ಟೆಲಿವಿಷನ್ ನೆಟ್ವರ್ಕ್ಸ್ (ರೆಗ್ಯುಲೇಶನ್) ಕಾಯಿದೆಯಡಿ ಜಿಲ್ಲಾ ಮಟ್ಟದಲ್ಲಿ ಕಣ್ಗಾವಲು ಸಮಿತಿ ರಚಿಸಲಾಗಿದ್ದು ಸಾರ್ವಜನಿಕರು ಅಹವಾಲು ಸಲ್ಲಿಸಲು ದೂರು ಕೋಶ ಆರಂಭಿಸಲಾಗಿದೆ. ಸ್ಥಳೀಯ ಕೇಬಲ್ಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ಕುರಿತು ದೂರು/ಅಹವಾಲುಗಳು ಇದ್ದರೆ ಸಾರ್ವಜನಿಕರು ವಾರ್ತಾ ಇಲಾಖೆ ಕಚೇರಿಗೆ ಸಲ್ಲಿಸಬಹುದಾಗಿದೆ.
ಜಿಲ್ಲಾ ಮಟ್ಟದ ಕೇಬಲ್ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅನುರಾಧ ಅವರು, ನೋಂದಣಿ ಯಾಗಿರುವ ಎಲ್ಲ ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳು 30 ದಿನಗಳ ಒಳಗೆ ನೋಂದಣಿ ಪತ್ರದ ಪ್ರತಿಯನ್ನು ವಾರ್ತಾ ಇಲಾಖೆಗೆ ಸಲ್ಲಿಸುವಂತೆ ನಿರ್ದೇಶಿಸಿದರು. ಮುಂದಿನ ಹಂತದಲ್ಲಿ ನೋಂದಣಿ ಪತ್ರ ನೀಡದ ಸಂಸ್ಥೆಗಳನ್ನು ಅನಧಿಕೃತ ಎಂದು ಪರಿಗಣಿಸಿ, ನೋಟಿಸ್ ನೀಡಿ ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಕೇಬಲ್ ನಿರ್ವಹಣಾ ಸಮಿತಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಕೆ., ಸದಸ್ಯರಾದ ಎಸ್ಪಿ ಪರವಾಗಿ ಡಿಸಿಆರ್ಬಿ ರಾಮಕೃಷ್ಣ, ಶಿಕ್ಷಣ ತಜ್ಞ ರಾಮಕೃಷ್ಣ ರಾವ್, ಮನಃಶಾಸ್ತ್ರಜ್ಞ ಡಾ| ವಿರೂಪಾಕ್ಷ ದೇವರಮನೆ, ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಬಿ.ಜಗದೀಶ್ ರಾವ್, ಸಮಾಜ ಶಾಸ್ತ್ರಜ್ಞ ದುಗ್ಗಪ್ಪಕಜೆಕಾರ್, ವಿಶ್ವಾಸದ ಮನೆಯ ಪ್ರೇಮಾ ಮಾರ್ಗರೆಟ್ ಕರ್ಕಡ, ಪವರ್ ಸಂಸ್ಥೆಯ ದಿವ್ಯಾರಾಣಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.