ಖರ್ಗೆ v/s ಅನಂತ್ : ಲೋಕಸಭೇಲಿ ಪ್ರತಿಧ್ವನಿಸಿದ ಅಂಗನವಾಡಿ ಹೋರಾಟ
Team Udayavani, Mar 23, 2017, 4:39 PM IST
ನವದೆಹಲಿ: ಕನಿಷ್ಠ 10 ಸಾವಿರ ರೂ. ಮಾಸಿಕ ಗೌರವಧನಕ್ಕಾಗಿ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಳೆದ ನಾಲ್ಕು ದಿನಗಳಿಂದ ನಗರದಲ್ಲಿ ನಡೆಸುತ್ತಿದ್ದ ಪ್ರತಿಭಟನೆ ಗುರುವಾರ ಲೋಕಸಭೆಯಲ್ಲೂ ಪ್ರತಿಧ್ವನಿಸಿದ್ದು, ಕಾಂಗ್ರೆಸ್ ಹಿರಿಯ ಮುಖಂಡ, ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಲೋಕಸಭೆಯಲ್ಲಿ ಶೂನ್ಯ ವೇಳೆಯ ಚರ್ಚೆಯ ವೇಳೆ ವಿಷಯ ಪ್ರಸ್ತಾಪಿಸಿ ಗಮನ ಸೆಳೆದರು.
ಕರ್ನಾಟಕದಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೇಂದ್ರ ಸರ್ಕಾರ ಕೂಡಲೇ ಹಿಂದಿನ 90;10 ಅನುಪಾತವನ್ನೇ ಜಾರಿಗೆ ತರಬೇಕು. ಅವರಿಗೆ ಕೊಡುವ ಗೌರವಧನ ಹೆಚ್ಚಿಸಬೇಕು. ಅಲ್ಲದೇ ಕೇಂದ್ರ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಖರ್ಗೆ ಮನವಿ ಮಾಡಿದರು.
ನಾವು ಕನಿಷ್ಠ ವೇತನದ ಬಗ್ಗೆ ಮಾತನಾಡುತ್ತೇವೆ. ಮಕ್ಕಳು ಉಚಿತ ಶಿಕ್ಷಣ ಪಡೆಯಬೇಕೆಂದು ಶಾಲೆಗೆ ಹೋಗುತ್ತಿದ್ದಾರೆ. ಹಾಗಾಗಿ ಅಂಗನವಾಡಿ ಕಾರ್ಯಕರ್ತೆಯರ ಕನಿಷ್ಠ ವೇತನದ ಬಗ್ಗೆ ಗಮನಹರಿಸಿಬೇಕಾಗಿದೆ. ಇದು ಕೇಂದ್ರ ಸರ್ಕಾರದ ಜವಾಬ್ದಾರಿ. ಅನುಪಾತದ ಬದಲಾವಣೆಯಿಂದಾಗಿ ದೇಶಾದ್ಯಂತ ಲಕ್ಷಾಂತರ ಜನರಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.
150 ಕೋಟಿ ರೂಪಾಯಿ ಎಲ್ಲಿ ಹೋಯ್ತು?; ಅನಂತ ಕುಮಾರ್ ತಿರುಗೇಟು
ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿ ವಿಷಯ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉತ್ತರ ನೀಡಿದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಅನಂತ ಕುಮಾರ್, ಅಂಗನವಾಡಿ ಕಾರ್ಯಕರ್ತೆಯರ ವಿಚಾರದಲ್ಲಿ ಬಿಜೆಪಿ ಏನೂ ಮಾಡಿಲ್ಲ ಎಂಬುದು ಸತ್ಯಕ್ಕೆ ದೂರವಾದ ವಿಚಾರ. ಕೇಂದ್ರ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ನೀಡಿದ್ದನ್ನು ರಾಜ್ಯ ಸರ್ಕಾರವೇ ನೀಡಿಲ್ಲ ಎಂದು ತಿರುಗೇಟು ನೀಡಿದರು.
ಖರ್ಗೆಜೀ ಸತ್ಯವನ್ನು ಮರೆಮಾಚಿ ಸದನಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು. ಈ ವಿಚಾರದಲ್ಲಿ ಮೊಸಳೆ ಕಣ್ಣೀರು ಸುರಿಸಬೇಡಿ ಎಂದಾಗ ಕಾಂಗ್ರೆಸ್ ಸಂಸದರು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
65 ಸಾವಿರ ಹುದ್ದೆಗಳನ್ನು ನೀವು ಭರ್ತಿ ಮಾಡಿದ್ದೀರಾ. 2015-16ನೇ ಸಾಲಿನಲ್ಲಿ ಐಸಿಡಿಎಸ್ ನಲ್ಲಿ 162 ಕೋಟಿ ರೂಪಾಯಿ ನೀಡಲಾಗಿತ್ತು. ಇದರಲ್ಲಿ 150 ಕೋಟಿ ರೂಪಾಯಿ ಎಲ್ಲಿಗೆ ಹೋಗಿದೆ?ಹಣ ಹೇಗೆ ನಾಪತ್ತೆಯಾಯಿತೆಂದು ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಸರ್ಕಾರ ಪತ್ರ ಬರೆದಿದೆ. ಆದರೆ 150 ಕೋಟಿ ರೂ. ಎಲ್ಲಿ ಖರ್ಚು ಮಾಡಿದೆ ಎಂಬ ಬಗ್ಗೆ ವಿವರಣೆ ನೀಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.