94 ಸಿ ತಿದ್ದುಪಡಿಗೆ ಸರ್ವಾನುಮತದ ಒಪ್ಪಿಗೆ
Team Udayavani, Mar 24, 2017, 3:45 AM IST
ವಿಧಾನಸಭೆ: ನಗರ ಸ್ಥಳೀಯ ಸಂಸ್ಥೆಗಳ ಸುತ್ತ ನಿರ್ದಿಷ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಅಕ್ರಮ ಸಕ್ರಮ ಯೋಜನೆ ಜಾರಿಗೆ ತರುವ 94 ಸಿಸಿಗೆ ತಿದ್ದುಪಡಿ ತರುವ ಕರ್ನಾಟಕ ಭೂಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ-2017 ಸೇರಿದಂತೆ ಮೂರು ವಿಧೇಯಕಕ್ಕೆ ಸರ್ವಾನುಮತದ ಒಪ್ಪಿಗೆ ನೀಡಲಾಯಿತು.
ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಗುರುವಾರ ವಿಧೇಯಕವನ್ನು ಪರ್ಯಾವಲೋಚನೆಗೆ ಮಂಡಿಸಿದರು. ನಗರ ಸ್ಥಳೀಯ ಸಂಸ್ಥೆ ಹಾಗೂ ಪಂಚಾಯತ್‌ರಾಜ್ ಸ್ಥಳೀಯ ಸಂಸ್ಥೆ ವ್ಯಾಪ್ತಿಗೆ ಬಾರದ ಬಿಬಿಎಂಪಿ ಹೊರವಲಯದ 18 ಕಿ.ಮೀ. ವ್ಯಾಪ್ತಿ, ಮಹಾನಗರ ಪಾಲಿಕೆಗಳ ಹೊರವಲಯದ 10 ಕಿಯಮೀ ವ್ಯಾಪ್ತಿ, ನಗರಸಭೆಗಳ ಹೊರಗಿನ 10 ಕಿ.ಮೀ. ವ್ಯಾಪ್ತಿ, ಪುರಸಭೆಗಳ ಹೊರಗಿನ 5 ಕಿ.ಮೀ. ವ್ಯಾಪ್ತಿ ಹಾಗೂ ಪಟ್ಟಣ ಪಂಚಾಯ್ತಿ ಹೊರಗಿನ 3 ಕಿ.ಮೀ. ವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ 30-40 ಅಳತೆಯ ನಿವೇಶನದಲ್ಲಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ವಿಧೇಯಕ ಮಂಡಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆಲವೊಂದು ಆಕ್ಷೇಪಗಳನ್ನು ವ್ಯಕ್ತಪಡಿಸಿದ ಸದಸ್ಯರು, ನಗರ ಪ್ರದೇಶದಲ್ಲಿ ಈಗಾಗಲೇ 20-30 ಅಳತೆಯ ನಿವೇಶನ ಸಕ್ರಮಗೊಳಿಸುವ ಯೋಜನೆ ಜಾರಿಯಲ್ಲಿದೆ. ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚು ಅಳತೆಯ ನಿವೇಶನಗಳ ಸಕ್ರಮಕ್ಕೆ ಅವಕಾಶವಿದೆ. ಇದೀಗ 94 ಸಿಸಿಗೆ ನಿಗದಿಪಡಿಸಿರುವ ಅಂತರದಿಂದ ಗ್ರಾಮೀಣ ಭಾಗದಲ್ಲಿ ಹೆಚ್ಚು ಅಳತೆಯ ನಿವೇಶನ ಸಕ್ರಮಕ್ಕೆ ಅವಕಾಶವಿದ್ದರೂ ಅದನ್ನು 30-40 ಚದರಡಿಗೆ ಸೀಮಿತಗೊಳಿಸಿದರೆ ಜನರಿಗೆ ತೊಂದರೆಯಾಗುತ್ತದೆ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕಾಗೋಡು ತಿಮ್ಮಪ್ಪ, ಈಗಾಗಲೇ ಇರುವ 94 ಸಿ ಮತ್ತು 94 ಸಿಸಿ ವ್ಯಾಪ್ತಿಯ ಮಧ್ಯೆ ಬಫರ್ ಝೋನ್ ಪ್ರದೇಶವಿದೆ. ಈ ಪ್ರದೇಶದಲ್ಲಿರುವ ಜನರಿಗೆ ಮಾತ್ರ ತಿದ್ದುಪಡಿ ಅನ್ವಯವಾಗುತ್ತದೆ ಎಂದು ಹೇಳಿದರು. ಇದಕ್ಕೆ ಒಪ್ಪಿದ ಸದನ ವಿಧೇಯಕವನ್ನು ಧ್ವನಿತಮದಿಂದ ಅಂಗೀಕರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.