ಕಾಳಧನಿಕರೇ, ಮಾ.31ರೊಳಗೆ ಶುದ್ಧಹಸ್ತರಾಗಿ; ಕಾದಿದೆ ಶೇ.137 ತೆರಿಗೆ

Team Udayavani, Mar 24, 2017, 12:28 PM IST

Blackmoney-700.jpg

ಹೊಸದಿಲ್ಲಿ : “ನಿಮ್ಮ ಅಕ್ರಮ ಠೇವಣಿ, ಆಸ್ತಿಪಾಸ್ತಿಗಳ ಬಗ್ಗೆ ನಮಗೆ ಎಲ್ಲ ಮಾಹಿತಿ ಇದೆ. ಮಾರ್ಚ್‌ 31ರಂದು ಪ್ರಧಾನ್‌ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆ ಮುಗಿಯಲಿದೆ. ಅದಕ್ಕೆ ಮೊದಲು ಈ ಯೋಜನೆಯ ಲಾಭ ಪಡೆದು ನೀವು ಶುದ್ಧ ಹಸ್ತರಾಗಬೇಕಾಗಿದೆ’ ಎಂದು ಆದಾಯ ತೆರಿಗೆ ಇಲಾಖೆ ಕಪ್ಪುಹಣ ಹೊಂದಿರುವವರಿಗೆ ಖಡಕ್‌ ಎಚ್ಚರಿಕೆಯನ್ನು ನೀಡಿದೆ.

ಕಪ್ಪು ಹಣ ಘೋಷಿಸಕೊಳ್ಳುವುದಕ್ಕೆ ಕೌಂಟ್‌ಡೌನ್‌ ಆರಂಭವಾಗಿದೆ. ಕಪ್ಪುಹಣ ಹೊಂದಿರುವವರು ಮಾರ್ಚ್‌ 31ರೊಳಗೆ ಪಿಎಂಜಿಕೆವೈ ಯೋಜನೆಯ ಲಾಭ ಪಡೆಯಲು ಈ ಕೂಡಲೇ ಮುಂದಾಗಬೇಕು; ಅನಂತರ ಪಶ್ಚಾತ್ತಾಪ ಪಟ್ಟು ಪ್ರಯೋಜನವಿಲ್ಲ ಎಂದು ಮನವರಿಕೆ ಮಾಡುವ ಜಾಹೀರುತುಗಳನ್ನು ಆದಾಯ ತೆರಿಗೆ ಇಲಾಖೆಯು ಪ್ರಮುಖ ರಾಷ್ಟ್ರೀಯ ದಿನಪತ್ರಿಕೆಗಳಲ್ಲಿ ಪ್ರಕಟಿಸಿದೆ. 

ಪಿಎಂಜಿಕೆವೈ ಯೋಜನೆಯಡಿ ತಮ್ಮ ಕಪ್ಪು ಹಣ ಮತ್ತು ಆಸ್ತಿಪಾಸ್ತಿಯನ್ನು ಘೋಷಿಸಿಕೊಳ್ಳುವವರ ಬಗ್ಗೆ ಸಂಪೂರ್ಣ ಗೌಪ್ಯತೆಯನ್ನು ಕಾಯ್ದುಕೊಳ್ಳಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.

ಮಾರ್ಚ್‌ 31ರ ಬಳಿಕ ಕಪ್ಪುಹಣ, ಆಸ್ತಿ ಪಾಸ್ತಿ ಹೊಂದಿರುವವರ ಸಂಪೂರ್ಣ ವಿವರಗಳನ್ನು ಬೇನಾಮಿ ವ್ಯವಹಾರಗಳ ಕಾಯಿದೆಯ ಪ್ರಕಾರ ಜಾರಿ ನಿರ್ದೇಶನಾಲಯ, ಸಿಬಿಐ ಸಹಿತ ವಿವಿಧ ಕೇಂದ್ರ ತನಿಖಾ ದಳಗಳಿಗೆ ಒದಗಿಸಲಾಗುವುದು ಮತ್ತು ಅತ್ಯಂತ ಕಠಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಸಿದೆ.

ಪ್ರಧಾನ್‌ ಮಂತ್ರಿ ಗರೀಬ್‌ ಕಲ್ಯಾಣ್‌  (ಪಿಎಂಜಿಕೆವೈ) ಯೋಜನೆಯಡಿ ಕಾಳಧನಿಕರು ತಮ್ಮಲ್ಲಿನ ಕಪ್ಪು ಹಣದ ಮೇಲೆ ಶೇ.49.9 ತೆರಿಗೆ ಪಾವತಿಸಬೇಕಾಗುವುದು. ಇಲ್ಲದಿದ್ದಲ್ಲಿ ಅನಂತರದಲ್ಲಿ ಅವರು ತಮ್ಮ ಆದಾಯ ತೆರಿಗೆ ರಿಟರ್ನ್ ನಲ್ಲಿ  ಶೇ.77.25ರ ದಂಡ ತೆರಿಗೆಯನ್ನು ಪಾವತಿಸಬೇಕಾಗುವುದು. ಒಂದು ವೇಳೆ ಅದನ್ನೂ ಮಾಡದೇ ಸಿಕ್ಕಿಬಿದ್ದಲ್ಲಿ ಅವರ ಮೇಲೆ ಶೇ.83.25ರ ತೆರಿಗೆಯನ್ನು ವಿಧಿಸಲಾಗುವುದು. 

ಇವ್ಯಾವುದನ್ನೂ ಮಾಡದೇ ದಾಳಿಗೆ ಗುರಿಯಾಗುವವರು ಶೇ.107.25ರ ತೆರಿಗೆ ಮತ್ತು ದಂಡವನ್ನು ಎದುರಿಸಬೇಕಾಗುವುದು. ದಾಳಿಯ ವೇಳೆಯೂ ತಮ್ಮ ಅಕ್ರಮ ಕಪ್ಪು ಹಣ, ಆಸ್ತಿ ಪಾಸ್ತಿಯನ್ನು ಮುಚ್ಚಿಟ್ಟವರು ಶೇ.137.25ರ ತೆರಿಗೆ, ದಂಡವನ್ನು ಎದುರಿಸಬೇಕಾಗುವುದು ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. 

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.