ಪ್ರಚಾರಕ್ಕೆ ಎಸ್‌ಎಂಕೆ ಕರೆತರುವೆ: ಬಿಎಸ್‌ವೈ

Team Udayavani, Mar 24, 2017, 12:40 PM IST

mys3.jpg

ಮೈಸೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಕರೆತರಲು ಪ್ರಯತ್ನಿಸಲಾಗುವುದು ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್‌.ಎಂ.ಕೃಷ್ಣ  ಬಿಜೆಪಿ ಸೇರ್ಪಡೆ ಆಗಿರುವುದರಿಂದ ರಾಜ್ಯದಲ್ಲಿ ಬಿಜೆಪಿಯ ಶಕ್ತಿ ಮತ್ತಷ್ಟು ಹೆಚ್ಚಾಗಿದೆ. ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಸಹಕಾರಿಯಾಗಲಿದೆ ಎಂದರು.

ಪಕ್ಷಕ್ಕೆ ಸೇರ್ಪಡೆಗೊಂಡಿರುವ ಕೃಷ್ಣ ಅವರು ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಭೇಟಿ ಮಾಡಲಿದ್ದು, ಅವರು ಬೆಂಗಳೂರಿಗೆ ಬರುವುದು ಖಚಿತವಾಗುತ್ತಿದ್ದಂತೆ ಖುದ್ದು ತಾವೇ ಬೆಂಗಳೂರಿಗೆ ತೆರಳಿ ಅವರನ್ನು ಪಕ್ಷದ ಕಚೇರಿಗೆ ಬರಮಾಡಿಕೊಳ್ಳುತ್ತೇನೆ.

ಅಲ್ಲದೆ ಮುಂಬರುವ ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರಕ್ಕೆ ಕೃಷ್ಣ ಅವರನ್ನು ಕರೆತರಲು ಪ್ರಯತ್ನಿಸುವುದಾಗಿ ತಿಳಿಸಿದ ಅವರು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಪೂರಕ ವಾತಾವರಣವಿದ್ದು, ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸರ್ಕಾರ ವಿಫ‌ಲ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಕೆಲವು ದಿನಗಳಿಂದ ನಿರಂತರ ಹೋರಾಟದಲ್ಲಿ ತೊಡಗಿರುವ ಅಂಗನವಾಡಿ ಕಾರ್ಯ ಕರ್ತೆಯರ ಸಮಸ್ಯೆ ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ವಿಫ‌ಲವಾಗಿದೆ. ಯಾವುದೇ ಸಮಸ್ಯೆ ಎದುರಾದರೂ ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಲಸವಾಗಿದೆ ಎಂದು ಕಿಡಿಕಾರಿದರು. ಅಲ್ಲದೆ ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಪರಿಸ್ಥಿತಿ ನಿರ್ವಹಣೆಯಲ್ಲೂ ವಿಫ‌ಲವಾಗಿರುವ ರಾಜ್ಯ ಸರ್ಕಾರ, ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಯಾವುದೇ ಸ್ಪಷ್ಟ ನಿಲುವು ತಳೆಯುತ್ತಿಲ್ಲ ಎಂದು ವಾಗ್ಧಾಳಿ ನಡೆಸಿದರು.

ಒಳ್ಳೆ ರೀತಿ ಚಿಂತಿಸಲಿ: ವಿಧಾನಮಂಡಲದ ಅಧಿವೇಶನದಲ್ಲಿ ಮಾಧ್ಯಮಗಳಿಗೆ ಕಡಿವಾಣ ಹಾಕಬೇಕೆಂಬ ಬಗ್ಗೆ ಕೇಳಿ ಬಂದಿರುವ ಒತ್ತಾಯಗಳ ಬಗ್ಗೆ ಸ್ಪಷ್ಟ ಉತ್ತರ ನೀಡಲು ನಿರಾಕರಿಸಿದ ಬಿ.ಎಸ್‌.ವೈ, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮಗಳು ಪ್ರಜಾಪ್ರಭತ್ವದ ನಾಲ್ಕು ಪ್ರಮುಖ ಅಂಗಗಳಾಗಿದ್ದು, ಎಲ್ಲವೂ ಒಂದಕ್ಕೊಂದು ಪೂರಕವಾಗಿ ಸಾಗಬೇಕಿದೆ. ಹೀಗಾಗಿ ಈ ವಿಷಯದಲ್ಲಿ ಮಾಧ್ಯಮಗಳು ಒಳ್ಳೆಯ ರೀತಿ ಚಿಂತಿಸಬೇಕಿದೆ ಎಂದರು.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.