ಸಂಸದರ ವೇತನ ನಿಗದಿ ಸಂಸತ್ತಿನ ಪರಮಾಧಿಕಾರ
Team Udayavani, Mar 25, 2017, 3:50 AM IST
ಹೊಸದಿಲ್ಲಿ: ಸಂಸದರ ವೇತನ ಮತ್ತು ಪಿಂಚಣಿ ಕುರಿತು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ ಅಭಿಪ್ರಾಯವು ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವಿನ ಸಂಘರ್ಷಕ್ಕೆ ಕಾರಣವಾಗುವ ಎಲ್ಲ ಲಕ್ಷಣಗಳು ಗೋಚರಿಸಿವೆ. ಸಂಸದರಿಗೆ ವೇತನ ಮತ್ತು ಪಿಂಚಣಿ ನಿಗದಿ ಮಾಡುವುದು ಸಂಸತ್ತಿನ ಪರಮಾಧಿಕಾರ. ಸುಪ್ರೀಂ ಕೋರ್ಟ್ ಈ ವಿಚಾರವನ್ನು ಕೈಬಿಟ್ಟು ಬೇರೆ ವಿಷಯಗಳ ಕಡೆ ಗಮನ ಹರಿಸುವುದು ಒಳಿತು ಎಂಬ ಪರೋಕ್ಷ ಸಂದೇಶವನ್ನು ಸಂಸದರು ರವಾನಿಸಿದ್ದಾರೆ.
ಇದು ಪೂರ್ಣ ಸಂಸತ್ತಿಗೆ ಒಳಪಡುವ ವಿಚಾರವಾಗಿದ್ದು, ಸಂಸದರ ವೇತನ ಮತ್ತು ಪಿಂಚಣಿಯನ್ನು ನಿರ್ಧರಿಸುವ ಎಲ್ಲ ಹಕ್ಕು ಇರುವುದು ಸಂಸತ್‌ಗೆ ಮಾತ್ರ ಎಂದು ಶುಕ್ರವಾರ ಲೋಕಸಭೆಯಲ್ಲಿ ಸಚಿವ ಅನಂತ್ ಕುಮಾರ್ ಹೇಳಿದರು. ದೇಶದಲ್ಲಿನ ಶೇ. 80ರಷ್ಟು ಚುನಾಯಿತ ಪ್ರತಿನಿಧಿಗಳು ಕೋಟ್ಯಧಿಪತಿಗಳು ಎಂದು ಸುಪ್ರೀಂ ಕೋರ್ಟ್ ಅಭಿ ಪ್ರಾಯ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸಚಿವರು ಸದನದಲ್ಲಿ ಈ ಸ್ಪಷ್ಟನೆ ನೀಡಿದ್ದಾರೆ.
ಶೂನ್ಯವೇಳೆ ಟಿಎಂಸಿ ನಾಯಕ ಸುಗತ ರಾಯ್ ಕೂಡ ಇದಕ್ಕೆ ಧ್ವನಿ ಗೂಡಿಸಿದ್ದು, ಸಂಸತ್ ನಿರ್ಧಾರ ಮಾಡಬೇಕಾದ ವಿಷಯವನ್ನು ಕೋರ್ಟ್ ಮಾಡಲು ಹೊರಟು ಸಂಸತ್ತಿನ ಹಕ್ಕನ್ನು ಕಸಿಯುತ್ತಿದೆ ಎಂದು ಆರೋಪಿಸಿದ್ದಾರೆ. ಸಂಸತ್ತೇನೂ “ನಿವೃತ್ತ ಜಡ್ಜ್ಗಳಿಗೆ ಪಿಂಚಣಿಯನ್ನೇಕೆ ನೀಡುತ್ತೀರಿ’ ಎಂದು ಪ್ರಶ್ನಿಸಲಿಲ್ಲ ತಾನೇ? ನೀವೇಕೆ ಸಂಸದರ ವಿಚಾರದಲ್ಲಿ ಪ್ರಶ್ನಿಸುತ್ತೀರಿ ಎಂದೂ ಕೇಳಿದ್ದಾರೆ ರಾಯ್. ಗುರುವಾರವಷ್ಟೇ ರಾಜ್ಯಸಭೆಯಲ್ಲಿ ಸಚಿವ ಜೇಟ್ಲಿ ಅವರೂ ಸುಪ್ರೀಂ ನಿಲುವಿನ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.