ಬೆಂಗಳೂರು-ಹಾಸನ ‘ ಇಂಟರ್ ಸಿಟಿ ‘ರೈಲು ಸಂಚಾರಕ್ಕೆ ಚಾಲನೆ
Team Udayavani, Mar 25, 2017, 3:45 AM IST
ಬೆಂಗಳೂರು: ಸುಮಾರು ಎರಡು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಬೆಂಗಳೂರು-ಹಾಸನ ಮಾರ್ಗದಲ್ಲಿ ವೇಗದ ಪ್ರಯಾಣಕ್ಕೆ ಹೆಸರಾದ ಇಂಟರ್ ಸಿಟಿ ನೂತನ ರೈಲು ಸಂಚಾರದ ಸೇವೆ ಭಾನುವಾರದಿಂದ ಲಭ್ಯವಾಗಲಿದೆ.
ರೈಲ್ವೆ ಸಚಿವ ಸುರೇಶ್ ಪ್ರಭು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾ.26ರಂದು ಬೆಳಗ್ಗೆ 11 ಗಂಟೆಗೆ ನಗರದ ಯಶವಂತಪುರ ರೈಲು ನಿಲ್ದಾಣದಲ್ಲಿ ನೂತನ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ಬೆಂಗಳೂರು-ಹಾಸನ ರೈಲು ಮಾರ್ಗ ನಿರ್ಮಾಣಕ್ಕೆ ಈ ಹಿಂದೆ ಮಂಜೂರಾತಿ ನೀಡಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ. ಸದಾನಂದ ಗೌಡ, ರಮೇಶ್ ಜಿಗಜಿಣಗಿ, ನಿರ್ಮಲಾ ಸೀತಾರಾಮನ್, ರಾಜ್ಯದ ಹಿರಿಯ ಸಚಿವರಾದ ಆರ್.ವಿ. ದೇಶಪಾಂಡೆ, ಕೆ.ಜೆ. ಜಾರ್ಜ್, ಟಿ.ಬಿ. ಜಯಚಂದ್ರ, ಡಿ.ಕೆ. ಶಿವಕುಮಾರ್, ಕೃಷ್ಣ ಬೈರೇಗೌಡ, ಎಂ. ಕೃಷ್ಣಪ್ಪ, ಎ. ಮಂಜು, ಬಿಬಿಎಂಪಿ ಮೇಯರ್ ಜಿ. ಪದ್ಮಾವತಿ ಭಾಗವಹಿಸಲಿದ್ದಾರೆ. ಅಲ್ಲದೆ, ರಾಜ್ಯದ ಸಂಸದರು, ಶಾಸಕರು ಹಾಗೂ ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಒಂದೂವರೆ ತಿಂಗಳ ಹಿಂದೆಯಷ್ಟೇ ಚಿಕ್ಕಬಾಣಾವರದಿಂದ ಹಾಸನವರೆಗಿನ ಸುಮಾರು 167 ಕಿಮೀ. ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ವಿಭಾಗದವರು ಪ್ರಾಯೋಗಿಕ ರೈಲು ಸಂಚಾರ ನಡೆಸಿದ್ದರು. ಬಳಿಕ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿಯು ತನ್ನ ಅನುಮತಿಯನ್ನು ನೀಡಿತ್ತು. ಸದ್ಯಕ್ಕೆ ಬೆಂಗಳೂರು-ಹಾಸನ ಮಾರ್ಗದಲ್ಲಿ ಬೆಂಗಳೂರಿನಿಂದ ಚಿಕ್ಕಬಾಣಾವರ ವರೆಗಿನ ಮಾರ್ಗದಲ್ಲಿ ಬೆಂಗಳೂರು-ನೆಲಮಂಗಲ ಇಂಟರ್ ಸಿಟಿ ರೈಲು ಸಂಚಾರ ನಡೆಯುತ್ತಿದೆ. ಇದೀಗ, ಹಾಸನವರೆಗಿನ ಮಾರ್ಗದ ಕಾಮಗಾರಿ ಪೂರ್ಣಗೊಂಡಿರುವುದರಿಂದ ಬೆಂಗಳೂರು-ಹಾಸನ ನಡುವೆ ನೂತನ ಇಂಟರ್ ಸಿಟಿ ರೈಲು ಸಂಚಾರಕ್ಕೆ ಚಾಲನೆ ನೀಡಲಾಗುತ್ತಿದೆ.
ಕರಾವಳಿ ಜನತೆಗೆ ನಿರಾಸೆ
ಬೆಂಗಳೂರು-ಹಾಸನ ಇಂಟರ್ ಸಿಟಿ ರೈಲು ಸೇವೆ ಜತೆಗೆ ಬೆಂಗಳೂರು-ಮಂಗಳೂರು ನಡುವೆ ಹಾಸನ ಮಾರ್ಗವಾಗಿ ಹೊಸ ಇಂಟರ್ ಸಿಟಿ ರೈಲು ಸಂಚಾರಕ್ಕೂ ಚಾಲನೆ ದೊರೆಯಲಿದೆ ಎನ್ನುವುದು ಕರಾವಳಿ ಭಾಗದ ಜನರ ಬಹುದೊಡ್ಡ ನಿರೀಕ್ಷೆಯಾಗಿತ್ತು. ಈ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ವಲಯ ಕೂಡ ಬೆಂಗಳೂರು-ಹಾಸನದ ಜತೆಗೆ ಬೆಂಗಳೂರು-ಮಂಗಳೂರಿಗೂ ಕುಡ್ಲ ಎಕ್ಸ್‌ಪ್ರೆಸ್ ರೈಲು ಅನ್ನು ಇಂಟರ್ ಸಿಟಿ ರೈಲು ಆಗಿ ಪರಿವರ್ತಿಸಿ ವಾರದಲ್ಲಿ ಮೂರು ದಿನ ಓಡಿಸುವುದಕ್ಕೆ ವೇಳಾಪಟ್ಟಿಯನ್ನೂ ಸಿದ್ಧಪಡಿಸಿ ರೈಲ್ವೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಅಂತಿಮ ಕ್ಷಣದಲ್ಲಿ ಬೆಂಗಳೂರು-ಮಂಗಳೂರು ಇಂಟರ್ ಸಿಟಿ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿ ಅನುಮತಿ ನೀಡದೆ ಕರಾವಳಿ ಭಾಗಕ್ಕೆ ಅನ್ಯಾಯವೆಸಗಿದೆ.
ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದ ರೈಲು ಪ್ರಯಾಣಿಕರು ಇದೀಗ ದಕ್ಷಿಣ ರೈಲ್ವೆ ವಲಯದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಏಕೆಂದರೆ, ಮಂಗಳೂರು ರೈಲು ವಿಭಾಗವು ಕೇರಳದ ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಗೆ ಸೇರಿಕೊಂಡಿದೆ. ಈ ಕಾರಣಕ್ಕೆ ನೈಋತ್ಯ ರೈಲ್ವೆ ವಲಯವು ಬೆಂಗಳೂರು-ಮಂಗಳೂರು ನಡುವೆ ಇಂಟರ್ ಸಿಟಿ ರೈಲು ಸಂಚಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ, ದಕ್ಷಿಣ ರೈಲ್ವೆ ವಲಯ ಅದಕ್ಕೆ ತನ್ನ ಸಮ್ಮತಿ ಸೂಚಿಸಿಲ್ಲ ಎನ್ನಲಾಗಿದೆ. ಈ ರೈಲಿಗೆ ಮಂಗಳೂರು ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಸ್ಥಳಾವಕಾಶದ ಕೊರತೆಯ ಕಾರಣ ನೀಡಲಾಗಿದೆ. ಹೀಗಾಗಿ, ರೈಲ್ವೆ ಮಂಡಳಿಯು ಅಂತಿಮ ಹಂತದಲ್ಲಿ ಬೆಂಗಳೂರು-ಮಂಗಳೂರು ನಡುವೆ ಕುಡ್ಲ ಎಕ್ಸ್‌ಪ್ರೆಸ್ ರೈಲು ಸಂಚಾರ ಪ್ರಾರಂಭಿಸುವುದಕ್ಕೆ ಸದ್ಯಕ್ಕೆ ಅನುಮತಿ ನಿರಾಕರಿಸಿದೆ ಎನ್ನುವುದು ಕರಾವಳಿ ಭಾಗದ ರೈಲು ಪ್ರಯಾಣಿಕರ ಆರೋಪ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.