ಸಚಿವ ಮಹದೇವಪ್ಪ ಹುಡುಕಿಕೊಡಲು ಬಿಜೆಪಿ ಆಗ್ರಹ


Team Udayavani, Mar 25, 2017, 3:45 AM IST

BJP_symbol.jpg

ವಿಧಾನಸಭೆ: ಲೋಕಪಯೋಗಿ ಸಚಿವ ಎಚ್‌.ಸಿ. ಮಹದೇವಪ್ಪ ಸದನಕ್ಕೆ ಗೈರು ಹಾಜರಾಗಿರುವುದಕ್ಕೆ ಕಾರಣ ಕೇಳಿ ಅವರನ್ನು ಹುಡುಕಿಕೊಡುವಂತೆ ಬಿಜೆಪಿ ಸದಸ್ಯರು ಸ್ಪೀಕರ್‌ ಕೆ.ಬಿ. ಕೋಳಿವಾಡ್‌ ಅವರನ್ನು ಆಗ್ರಹಿಸಿದ ಪ್ರಸಂಗ ನಡೆಯಿತು.

ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಸಿ.ಟಿ. ರವಿ ಅವರು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಪ್ರಶ್ನೆ ಕೇಳಿದ್ದರು. ತಾವು ಕೇಳುವ ಪ್ರಶ್ನೆಗೆ ಉತ್ತರಿಸಲು ಸಂಬಂಧ ಪಟ್ಟ ಸಚಿವರು ಸದನದಲ್ಲಿ ಇಲ್ಲ. ಅವರು ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ  ಸಿಗ್ತಾರೆ ಅಲ್ಲಿಯೇ ಕೇಳುತ್ತೇನೆ ಬಿಡಿ ಎಂದರು.

ಅದಕ್ಕೆ ಸ್ಪೀಕರ್‌ ಕೊಳಿವಾಡ, ಸಚಿವರು ಅನುಮತಿ 2 ದಿನ ಸದನದಕ್ಕೆ ಹಾಜರಾಗದಿರಲು ಅನುಮತಿ ತೆಗೆದುಕೊಂಡಿದ್ದಾರೆ. ಎರಡು ದಿನ ಕಾರ್ಯ ನಿಮಿತ್ತ ಮೈಸೂರಿಗೆ ಹೋಗಬೇಕಿರುವುದರಿಂದ ಸದನಕ್ಕೆ ಬರಲು ಆಗುವುದಿಲ್ಲ ಎಂದು ಪತ್ರ ನೀಡಿದ್ದಾರೆ. ಅದರ ಆಧಾರದ ಮೇಲೆ ಅವರಿಗೆ ಅನುಮತಿ ನೀಡಿದ್ದೇನೆ. ಅವರ ಪರವಾಗಿ ಸರ್ಕಾರ ಉತ್ತರ ನೀಡುತ್ತದೆ ಎಂದು ಹೇಳಿದರು.

ಸ್ಪೀಕರ್‌ ಹೇಳಿಕೆಗೆ ಸಮಾಧಾನಗೊಳ್ಳದ ಬಿಜೆಪಿ ಸದಸ್ಯರು, ಮಹದೇವಪ್ಪ ಅವರು ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಪರ ಪ್ರಚಾರ ಮಾಡುತ್ತಿದ್ದಾರೆ. ಅಧಿವೇಶನಕ್ಕಿಂತಲೂ ಅವರಿಗೆ ಉಪ ಚುನಾವಣೆ ಮುಖ್ಯವಾಗಿದೆಯೇ, ನಿಜವಾಗಲೂ ಕಾರ್ಯ ನಿಮಿತ್ತ ಅಂದರೆ, ಯಾವ ಕಾರ್ಯ ನಿಮಿತ್ತ ಹೋಗಿದಾರೆ, ಅವರಿಗೇನಾದರೂ ತೊಂದರೆಯಾಗಿದೆಯೇ, ಸಚಿವರ ಬಗ್ಗೆ ಸದನಕ್ಕೆ ಮಾಹಿತಿ ನೀಡುವಂತೆ ಸುರೇಶ್‌ ಕುಮಾರ್‌ ಆಗ್ರಹಿಸಿದರು. ಅವರಿಗೆ ಬೆಂಬಲವಾಗಿ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್‌ನವರು ಸೋಲಿನ ಭೀತಿಯಿಂದ ಈಗಲೇ ಸಚಿವರನ್ನು ಅಲ್ಲಿ ಠೀಕಾಣಿ ಹೂಡಿಸಿದ್ದಾರೆ. ಸಚಿವರು ಎಲ್ಲಿದ್ದಾರೆ ಎಂಬುದನ್ನ ಸಭಾಧ್ಯಕ್ಷರು ತಕ್ಷಣವೆ ಕರೆಸಬೇಕೆಂದು ಆಗ್ರಹಿಸಿದರು. ಪೊಲಿಸರ ಮೂಲಕ ಅವರನ್ನು ಹುಡುಕಿಸಿ ಕೊಡಬೇಕೆಂದು ಆಗ್ರಹಿಸಿದರು.

ಅದಕ್ಕೆ ಕಾಂಗ್ರೆಸ್‌ನ ಬಂಗಾರಪೇಟೆ ನಾರಾಯಣಸ್ವಾಮಿ, ಸಚಿವರು ಎಲ್ಲಿಯೂ ಓಡಿ ಹೋಗಿಲ್ಲ. ಸ್ಪೀಕರ್‌ ಅನುಮತಿ ಪಡೆದುಕೊಂಡು ಹೋಗಿದ್ದಾರೆ ಎಂದರು. ಸಚಿವರಿಗೆ ಯಾರ ಜೊತೆಯೂ ಓಡಿ ಹೋಗುವ ವಯಸಲ್ಲಾ ಇದು. ಅವರು ಓಡಿ ಹೋಗಿಲ್ಲ ಅನ್ನುವ ನಂಬಿಕೆ ನಮಗೂ ಇದೆ. ಆದರೆ, ಸದನಕ್ಕೆ ಕರೆಸುವಂತೆ ಸ್ಪೀಕರ್‌ಗೆ ಸಿ.ಟಿ.ಆಗ್ರಹಿಸಿದರು.

ಸಚಿವರು ಡೈರಿ ಪ್ರಕರಣಕ್ಕೆ ಹೆದರಿ ಹೋಗಿದ್ದಾರಾ? ಮಗನಿಗೆ ನಂಜನಗೂಡಿನಲ್ಲಿ ಟಿಕೆಟ್‌ ಸಿಗಲಿಲ್ಲ ಅಂತ ಬೇಸರ ಮಾಡಿಕೊಂಡು ಹೋಗಿದಾರಾ ಅಥವಾ ಆರೋಗ್ಯ ಸಮಸ್ಯೆ ಇದೆಯಾ ಎಂದು ಬಿಜೆಪಿಯ ಸುನಿಲ್‌ ಕುಮಾರ್‌ ಪ್ರಶ್ನಿಸಿದರು. ಸಚಿವರಿಗೆ ಸೋಮವಾರ ಮತ್ತು ಮಂಗಳವಾರ ಸದನದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸುವುದಾಗಿ ಸ್ಪೀಕರ್‌ ಕೋಳಿವಾಡ್‌ ಹೇಳಿದ ನಂತರ ಸದನ ತಣ್ಣಗಾಯಿತು.

ಸರ್ಕಾರ ಸತ್ತಿದೆ : ಶೆಟ್ಟರ್‌
*ಪ್ರಶ್ನೋತ್ತರ ಕಲಾಪ ಆರಂಭವಾದಾಗ ವಿಧಾನಸಭೆಯಲ್ಲಿ ಹಾಜರಿರಬೇಕಾದಷ್ಟು ಸಚಿವರು ಹಾಜರಿಲ್ಲದ ಕಾರಣ ಸ್ಪೀಕರ್‌ ಕೆ.ಬಿ. ಕೋಳಿವಾಡ ಹಾಜರಿರಬೇಕಾದ ಸಚಿವರ ಪಟ್ಟಿ ಓದಿದರು. ಪ್ರಶ್ನೆಗಳಿಗೆ ಉತ್ತರಿಸಬೇಕಾದ ಆರು ಜನ ಸಚಿವರಲ್ಲಿ ಕೇವಲ ಇಬ್ಬರು ಮಾತ್ರ ಹಾಜರಿದ್ದರು. ಅಲ್ಲದೇ ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕಾದ ಸಚಿವರಲ್ಲಿ ಜಯಚಂದ್ರ ಮಾತ್ರ ಹಾಜರಿದ್ದು, ಎಂ.ಬಿ. ಪಾಟೀಲ್‌, ರಮೇಶ್‌ ಕುಮಾರ್‌, ಎಚ್‌. ಆಂಜನೇಯ, ರಮಾನಾಥ ರೈ, ರುದ್ರಪ್ಪ ಲಮಾಣಿ, ಡಿ.ಕೆ ಶಿವಕುಮಾರ್‌ ಹಾಜರಿರಲಿಲ್ಲ. ಹೀಗಾಗಿ ಪ್ರತಿಪಕ್ಷದ ನಾಯಕ ಜಗದೀಶ್‌ ಶೆಟ್ಟರ್‌, ಸರ್ಕಾರಕ್ಕೆ ಸದನ ನಡೆಸುವ ಮನಸಿಲ್ಲ. ನಮ್ಮ ಪಕ್ಷದಿಂದಲೂ ಚುನಾವಣೆಗೆ ಹೋಗಬೇಕೆಂಬ ಸೂಚನೆ ಇದೆ. ಆದರೆ, ಅಧಿವೇಶನ ಇರುವುದರಿಂದ ಇದು ಮುಗಿಯುವವರೆಗೂ ನಮಗೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸೂಚನೆ ನೀಡಲಾಗಿದೆ. ಸದನದ ಪರಿಸ್ಥಿತಿಯನ್ನು ನೋಡಿದರೆ, ಸರ್ಕಾರ ಸತ್ತು ಹೋಗಿದೆ ಎನಿಸುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.