ನಗರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ತಾರತಮ್ಯ
Team Udayavani, Mar 25, 2017, 3:45 AM IST
ವಿಧಾನಸಭೆ:ನಗರ ಸ್ಥಳೀಯ ಸಂಸ್ಥೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಬಿಜೆಪಿಯ ಬಸವರಾಜ್ ಬೊಮ್ಮಾಯಿ ಆರೋಪಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ಪೌರಾಡಳಿತ ವಿವಿಧ ನಗರ ಮತ್ತು ಪಟ್ಟಣಗಳಿಗೆ ಎಸ್‌ಎಫ್ಸಿ ಯೋಜನೆಯಡಿ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿದ್ದು, ಹಾವೇರಿ ಜಿಲ್ಲೆಯಲ್ಲಿ ಬ್ಯಾಡಗಿ ಪಟ್ಟಣಕ್ಕೆ ಮಾತ್ರ ಅನುದಾನ ನೀಡಿದ್ದು ಉಳಿದ ನಗರಗಳಿಗೆ ಯಾವುದೇ ಅನುದಾನ ನೀಡಿಲ್ಲ. ಡಾ. ಡಿ.ಎಂ. ನಂಜುಂಡಪ್ಪ ವರದಿ ಅನ್ವಯ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಹಣ ನೀಡಬೇಕಾಗುತ್ತದೆ. ಆದರೆ, ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ದೂರಿದರು.
ಇದಕ್ಕೆ ಧ್ವನಿಗೂಡಿಸಿದ ಜೆಡಿಎಸ್‌ನ ಸಿಎನ್ ಬಾಲಕೃಷ್ಣ , ಶೇಕಡಾ 15 ರಷ್ಟು ಅನುದಾನವನ್ನು ಕಡಿತ ಮಾಡಲಾಗಿದೆ. ಇದರಿಂದ ನಗರ ಪ್ರದೇಶಗಳಲ್ಲಿ ಒಳ ಚರಂಡಿ, ರಸ್ತೆ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ಜೆಡಿಎಸ್‌ನ ಮತ್ತೂಬ್ಬ ಸದಸ್ಯ ಮಂಜುನಾಥಗೌಡ ಅವರು ಕೋಲಾರ ಜಿಲ್ಲೆಯಲ್ಲಿ ಬಿಡುಗಡೆ ಮಾಡಿರುವ ಹಣದಲ್ಲಿ ಶೇಕಡಾ 85 ರಷ್ಟು ಕುಡಿಯುವ ನೀರಿಗೆ ಬಳಸುವಂತೆ ಆದೇಶ ಮಾಡಲಾಗಿದೆ ಇದರಿಂದ ಬೇರೆ ಕಾಮಗಾರಿ ಕೈಗೊಳ್ಳಲು ಹಣಕಾಸಿನ ಕೊರತೆಯುಂಟಾಗಿದೆ ಎಂದು ಹೇಳಿದರು.
ಸಚಿವ ಈಶ್ವರ ಖಂಡ್ರೆ ಮಾತನಾಡಿ, ನಗರೋತ್ಥಾನ 3 ರಲ್ಲಿ ಪಟ್ಟಣಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ನಗರೋತ್ಥಾನ 1 ಮತ್ತು 2 ರಲ್ಲಿ ಕೆಲವು ಲೋಪದೋಷಗಳಿದ್ದವು ಅವುಗಳನ್ನು ಸರಿಪಡಿಸಿ, ಕಾರ್ಯಕ್ರಮ ರೂಪಿಸಲಾಗುತ್ತಿದೆ. 2 ನೇ ಹಂತದ ನಗರೋತ್ಥಾನ ಯೋಜನೆಯಲ್ಲಿ ಈಗಾಗಲೇ ಶೇಕಡಾ 80 ರಷ್ಟು ಕಾಮಗಾರಿ ಮುಕ್ತಾಯವಾಗಿದೆ. ಯಾವುದೇ ನಗರ ಸ್ಥಳೀಯ ಸಂಸ್ಥೆಗಳಿಗೂ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿಲ್ಲ. ಆ ರೀತಿಯ ಗೊಂದಲಗಳಿದ್ದರೆ, ಸರಿಪಡಿಸಲಾಗುವುದು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.