ಅನುಕಂಪದ ನೌಕರಿ ನೀಡುವಂತೆ ಮೃತ ಲೋಕಾ ಎಸ್ಪಿ ಪತ್ನಿ ಮನವಿ
Team Udayavani, Mar 25, 2017, 11:26 AM IST
ಬೆಂಗಳೂರು: ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಮೈಸೂರು ಲೋಕಾಯುಕ್ತ ಎಸ್ಪಿ ಎಸ್. ರವಿಕುಮಾರ್, ಪತ್ನಿ ಅನಿತಾ ಶುಕ್ರವಾರ ಲೋಕಾಯುಕ್ತರನ್ನು ಭೇಟಿ ಮಾಡಿ ಅನುಕಂಪದ ಉದ್ಯೋಗಕ್ಕಾಗಿ ಮನವಿ ಮಾಡಿದರು.
ಒಂದು ತಿಂಗಳ ಹಸುಗೂಸಿನೊಂದಿಗೆ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದ ಅನಿತಾ, ಲೋಕಾಯುಕ್ತ ಪಿ. ವಿಶ್ವನಾಥ ಶೆಟ್ಟಿ, ಇಬ್ಬರು ಉಪಲೋಕಾಯುಕ್ತರು, ರಿಜಿಸ್ಟ್ರಾರ್, ಲೋಕಾಯುಕ್ತ, ಎಡಿಜಿಪಿ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಪತಿಯ ಸಾವಿನ ಹಿನ್ನೆಲೆ ತಮಗೆ ಆನುಕಂಪದ ಆಧಾರದಲ್ಲಿ ಉದ್ಯೋಗ ಕೊಡುವ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಕೋರಿದರು.
“ಉದಯವಾಣಿ’ ಜತೆ ಮಾತನಾಡಿದ ರವಿಕುಮಾರ್ ಅವರ ಸಹೋದರ ಉಮೇಶ್ ಕುಮಾರ್, ಸಹೋದರ ರವಿಕುಮಾರ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಳಿಕ ಅವರ ಪತ್ನಿ ಅನಿತಾ ಅವರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವ ಬಗ್ಗೆ ಶಿಫಾರಸು ಪ್ರಕ್ರಿಯೆಗಳ ಬಗ್ಗೆ ಲೋಕಾಯುಕ್ತ ಸಂಸ್ಥೆಯ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಲೋಕಾಯುಕ್ತರಾದ ಪಿ. ವಿಶ್ವನಾಥ ಶೆಟ್ಟಿ , ಅನುಕಂಪದ ಆಧಾರದಲ್ಲಿ ಅನಿತಾ ಅವರಿಗೆ ಉದ್ಯೋಗ ಕೊಡಿಸಲು ಸಂಸ್ಥೆ ವತಿಯಿಂದ ಬೇಕಾದ ಎಲ್ಲ ಪ್ರಕ್ರಿಯೆಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಜತೆಗೆ ಸಂಸ್ಥೆ ವತಿಯಿಂದ ಸಿಗಬೇಕಾಗಿರುವ ಸೌಲಭ್ಯಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.