ಭೀಮಾ ನೀರು ಅಮರ್ಜಾಕ್ಕೆ ಹರಿಸಬೇಡಿ
Team Udayavani, Mar 25, 2017, 3:06 PM IST
ಅಫಜಲಪುರ: ಕಳೆದ ವರ್ಷ ತಾಲೂಕಿನಲ್ಲಿ ಭೀಕರ ಬರಗಾಲ ಆವರಿಸಿ ಜನ ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ವರ್ಷ ಸ್ವಲ್ಪ ಮಳೆಯಾಗಿ ಭೀಮಾ ಬ್ಯಾರೇಜ್ನಲ್ಲಿ ನೀರು ನಿಲುಗಡೆಯಾಗಿದೆ. ಆ ನೀರನ್ನಿಗ ಆಳಂದ ತಾಲೂಕಿನ ಅಮರ್ಜಾ ಬ್ಯಾರೇಜ್ಗೆ ಬಿಡುತ್ತಿರುವ ಕ್ರಮ ಸರಿಯಲ್ಲ.
ಭೀಮಾ ನೀರನ್ನು ಅಮರ್ಜಾಗೆ ಹರಿಸಬಾರದು ಎಂದು ಮಾಜಿ ಶಾಸಕ ಎಂ.ವೈ. ಪಾಟೀಲ ಒತ್ತಾಯಿಸಿದರು. ತಾಲೂಕಿನ ಚವಡಾಪುರದಲ್ಲಿ ಬಿಜೆಪಿ ತಾಲೂಕು ಘಟಕದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಅವರು, ತಾಲೂಕಿನ ಸೊನ್ನ ಗ್ರಾಮದ ಹತ್ತಿರ ಭೀಮಾ ನದಿಗೆ ಬ್ಯಾರೇಜ್ ನಿರ್ಮಿಸಲಾಗಿದೆ.
ಯೋಜನೆಯಿಂದ ತಾಲೂಕಿನ 60 ಸಾವಿರ ಎಕರೆ ಕೃಷಿ ಭೂಮಿ ನೀರಾವರಿಯಾಗಬೇಕು. ಯೋಜನೆ ಪ್ರಾರಂಭವಾಗಿ 25 ವರ್ಷ ಕಳೆದರೂ ಇಲ್ಲಿವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ. ಯೋಜನೆ ವ್ಯಾಪ್ತಿಯಲ್ಲಿ ಬರುವ 11 ಹಳ್ಳಿಗಳು ಸ್ಥಳಾಂತರವಾಗಿಲ್ಲ. ಡ್ಯಾಂನಲ್ಲಿ ಪೂರ್ಣ ಪ್ರಮಾಣದ ನೀರು ನಿಲ್ಲಿಸಲು ಸಾಧ್ಯವಾಗಿಲ್ಲ.
ಇಂತಹ ಸಂದರ್ಭದಲ್ಲಿ ರಾಜ್ಯ ಸರಕಾರ ಮುಂಗಡ ಪತ್ರದಲ್ಲಿ ಭೀಮಾನದಿಯಿಂದ ಆಳಂದ ತಾಲೂಕಿನ ಅಮರ್ಜಾ ಡ್ಯಾಮ್ಗೆ ನೀರು ಹರಿಸುವ ತೀರ್ಮಾನ ಕೈಗೊಂಡಿದೆ. ಸರಕಾರದ ಈ ಕ್ರಮದಿಂದಾಗಿ ತಾಲೂಕಿನ ರೈತರು ಕಂಗಾಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಕರಜಗಿ-ಹೊಸುರ ರಾಜ್ಯ ಹೆದ್ದಾರಿ ಮಾಡಿದ ವರ್ಷದಲ್ಲಿಯೇ ಕಿತ್ತು ಹೋಗಿದೆ.
ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬಿಜೆಪಿ ತಾಲೂಕಾಧ್ಯಕ್ಷ ಸೂರ್ಯಕಾಂತ ನಾಕೇದಾರ, ಜಿಪಂ ಸದಸ್ಯ ಅರುಣಕುಮಾರ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಜಮಾದಾರ, ಮತೀನ್ ಪಟೇಲ, ಸಿದ್ದು ಶಿರಸಗಿ, ಬಾಷಾ ಪಟೇಲ್ ಹಸರಗುಂಡಿ, ಸಿದ್ದಾರ್ಥ ಬಸರಿಗಿಡ, ಬೀರಣ್ಣ ಕಲ್ಲೂರ, ಶರಣು ಕುಂಬಾರ ಮಾತನಾಡಿದರು.
ತೊಗರಿ ಕೇಂದ್ರಗಳನ್ನು ತೆರೆದು ಅವುಗಳಿಗೆ ತಕ್ಕಂತೆ ಚೀಲಗಳ ಪೂರೈಕೆ ಮಾಡಬೇಕು. ಬಂದರವಾಡ ಗ್ರಾಮದ ಹತ್ತಿರ ಬಿ ಸ್ಕೀಮ್ ಅನ್ವಯ ಏತ ನೀರಾವರಿ ಯೋಜನೆ ಕಾಮಗಾರಿ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ ಮೂಲಕ ರಾಜ್ಯ ಪಾಲರಿಗೆ ಮನವಿಪತ್ರ ಸಲ್ಲಿಸಿದರು.
ಜಿಪಂ ಉಪಾಧ್ಯಕ್ಷೆ ಶೋಭಾ ಶಿರಸಗಿ, ಮುಖಂಡರಾದ ಶಿವಾನಂದ ಗಾಡಿಸಾಹುಕಾರ, ಸುಭಾಷ ರೂಗಿ, ಮಲ್ಲಿಕಾರ್ಜುನ ನಿಂಗದಳ್ಳಿ, ಚಂದಮ್ಮ ಪಾಟೀಲ, ಸಂತೋಷ ವಾಗರಗಿ, ಚಂದು ಕರಜಗಿ ಹಾಗೂ ಪಕ್ಷದ ವಿವಿಧ ಮೋರ್ಚಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.