ರಾಜ್ಯದಲ್ಲಿ 40 ಡಿಗ್ರಿ ಸೆ. ದಾಟಿದ ಉಷ್ಣತೆ
Team Udayavani, Mar 27, 2017, 2:30 AM IST
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತಾಪಮಾನ 40 ಡಿ.ಸೆ. ದಾಟಿದೆ. ರವಿವಾರ ಕಲಬುರಗಿಯಲ್ಲಿ 40.7 ಡಿ.ಸೆ. ಉಷ್ಣತೆ ದಾಖಲಾಗಿದ್ದು, ಇದು ರಾಜ್ಯದಲ್ಲಿಯೇ ಗರಿಷ್ಠವಾಗಿದೆ. ಶನಿವಾರ ಇಲ್ಲಿ 40.3 ಡಿ.ಸೆ. ದಾಖಲಾಗಿತ್ತು. ತಾಪಮಾನ ಇನ್ನೂ ಕೆಲವು ದಿನ ಏರುಗತಿಯಲ್ಲಿಯೇ ಇರಲಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಬೆಂಗಳೂರು ಹಾಗೂ ಹಾಸನದಲ್ಲಿ ಕ್ರಮವಾಗಿ 37.2 ಡಿಗ್ರಿ ಸೆಲ್ಸಿಯಸ್ ಹಾಗೂ 36.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಕಳೆದೆರಡು ದಶಕಗಳಲ್ಲಿ ಮಾರ್ಚ್‌ನಲ್ಲಿ ದಾಖಲಾದ ಗರಿಷ್ಠ ತಾಪಮಾನವಾಗಿದೆ. ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್ ಮತ್ತು ಹಾಸನದಲ್ಲಿ 4 ಡಿಗ್ರಿ ಸೆಲ್ಸಿಯಸ್ ಹೆಚ್ಚು ಉಷ್ಣಾಂಶ ದಾಖಲಾಗಿದೆ. 1996ರ ಮಾ. 29 ಹಾಗೂ 30ರಂದು ಬೆಂಗಳೂರಿನಲ್ಲಿ 37.3 ಡಿಗ್ರಿ ಸೆಲ್ಸಿಯಸ್ ಹಾಗೂ ಹಾಸನದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇತ್ತು. ಇದು ಮಾರ್ಚ್ ತಿಂಗಳ ಸಾರ್ವಕಾಲಿಕ ದಾಖಲೆಯಾಗಿದೆ. ತಿಂಗಳಾಂತ್ಯಕ್ಕೆ ಇನ್ನೂ ಐದು ದಿನಗಳು ಬಾಕಿ ಇದ್ದು, ಬಿಸಿಲೂ ಏರುಗತಿಯಲ್ಲಿ ಸಾಗಿದ್ದರಿಂದ ಈ ದಾಖಲೆ ಸರಿಗಟ್ಟುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಹೆಚ್ಚುತ್ತಿರುವ ವಾಹನಗಳ ದಟ್ಟಣೆ, ಕಾರ್ಖಾನೆಗಳು ಉಗುಳುವ ಹೊಗೆ, ಕಾಂಕ್ರೀಟ್ ಕಾಡು ಮತ್ತಿತರ ಕಾರಣಗಳು ಹಾಗೂ ಮಳೆ ಬಿದ್ದ ಅವಧಿಯಲ್ಲಿ ಸಾಕಷ್ಟು ಅಂತರ ಇವೆಲ್ಲದರಿಂದ ವರ್ಷದಿಂದ ವರ್ಷಕ್ಕೆ ದಾಖಲೆ ಪ್ರಮಾಣದ ಉಷ್ಣಾಂಶ ಕಂಡುಬರುತ್ತಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸಮುದ್ರದ ಕಡೆಯಿಂದ ಗಾಳಿ ಬೀಸಬೇಕಿತ್ತು. ಆದರೆ, ಗಾಳಿ ಬರುತ್ತಿಲ್ಲ. ಬಂದರೂ ನಗರದ ಒಳಗೆ ಬರಲು ಕಟ್ಟಡಗಳು, ಹೊಗೆ ತಡೆಯೊಡ್ಡುತ್ತಿವೆ. ಈ ಮಧ್ಯೆ ಬೇಸಗೆ ಕಾಲವಾಗಿದ್ದರಿಂದ ಬಿಸಿಲಿನ ಧಗೆ ಹೆಚ್ಚುತ್ತಿದೆ. ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಹೆಚ್ಚು – ಕಡಿಮೆ ಇದ್ದರೆ ಅಷ್ಟೇನೂ ಸಮಸ್ಯಾತ್ಮಕವಲ್ಲ. ಆದರೆ, ಬೆಂಗಳೂರು ಸಹಿತ ರಾಜ್ಯದಲ್ಲಿ ಉಷ್ಣಾಂಶ ವಿಪರೀತಕ್ಕೆ ಹೋಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಎಸ್.ಎಂ. ಮೆಟ್ರಿ ಹೇಳುತ್ತಾರೆ. ಉಷ್ಣಾಂಶ ಹೆಚ್ಚು ದಾಖಲಾಗುವುದಕ್ಕೆ ಬರೀ ಬಿಸಿಲು ಮಾತ್ರ ಪರಿಗಣನೆಗೆ ಬರುವುದಿಲ್ಲ. ಯಾವ ಭಾಗದಲ್ಲಿ ಮೋಡಗಳಿವೆ? ಗಾಳಿ ಯಾವ ದಿಕ್ಕಿನಿಂದ ಬೀಸುತ್ತಿದೆ? ವಾತಾವರಣದಲ್ಲಿ ತೇವಾಂಶ ಇಲ್ಲದಿರುವುದೂ ಮುಖ್ಯವಾಗುತ್ತದೆ. ಸಮುದ್ರದ ಕಡೆಯಿಂದ ಗಾಳಿ ಬೀಸಿದರೆ, ವಾತಾವರಣದಲ್ಲಿ ತೇವಾಂಶ ಇರುತ್ತದೆ. ಆದರೆ, ಆ ಸೂಚನೆಗಳು ಕಾಣಿಸುತ್ತಿಲ್ಲ ಎಂದು ಹವಾಮಾನ ಇಲಾಖೆಯ ನಿವೃತ್ತ ನಿರ್ದೇಶಕ ಪುಟ್ಟಣ್ಣ ಅಭಿಪ್ರಾಯಪಡುತ್ತಾರೆ.
ಕರಾವಳಿಯಲ್ಲಿಯೂ ಏರುತ್ತಿದೆ ತಾಪಮಾನ
ರಾಜ್ಯದ ಇತರೆಡೆಯಂತೆ ಕರಾವಳಿಯಲ್ಲಿಯೂ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದೆ. ಗಾಳಿ ಕಡಿಮೆ ಇರುವುದರಿಂದ ವಿಪರೀತ ಸೆಕೆ ಇದೆ. ರಾತ್ರಿ ವೇಳೆ ಮೋಡ ಕಾಣಿಸಿಕೊಂಡರೂ ಉಷ್ಣತೆಯಲ್ಲಿ ಹೆಚ್ಚು ಇಳಿಕೆಯಾಗುತ್ತಿಲ್ಲ. ರವಿವಾರ ಮಂಗಳೂರಿನಲ್ಲಿ 35.9 ಡಿ.ಸೆ. ತಾಪಮಾನ ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 3 ಡಿ.ಸೆ. ಹೆಚ್ಚಾಗಿದೆ. ಕನಿಷ್ಠ ತಾಪಮಾನ 25.2 ಡಿ.ಸೆ. ದಾಖಲಾಗಿದ್ದು, ಇದೂ ಸಾಮಾನ್ಯಕ್ಕಿಂತ 2 ಡಿ.ಸೆ. ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.