ಐವರು ರೌಡಿ ಶೀಟರ್‌ಗಳ ವಿರುದ್ಧ ಕೋಕಾ ಕೇಸ್‌


Team Udayavani, Mar 27, 2017, 12:02 PM IST

police-koka-case.jpg

ಬೆಂಗಳೂರು: ಯಲಹಂಕದ ಟಾಟಾ ರಮೇಶ್‌ಗೆ ಬೆದರಿಕೆ ಹಾಕಿದ ಪ್ರಕರಣದ ವಿಚಾರಣೆ ವೇಳೆ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಐವರು ಹಳೇ ರೌಡಿಶೀಟರ್‌ಗಳ ವಿರುದ್ಧ ಬೆಂಗಳೂರು ಪೂರ್ವ ವಲಯದ ಪೊಲೀಸರು ಕೋಕಾ (ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಅಡಿ ಪ್ರಕರಣ ದಾಖಲಿಸಿದ್ದಾರೆ. ಈ ಪೈಕಿ ಇಬ್ಬರು ಇತ್ತೀಚೆಗೆ ಅಗ್ನಿ ಶ್ರೀಧರ್‌ ಮನೆಯಲ್ಲಿ ಬಂಧನಕ್ಕೊಳಗಾಗಿದ್ದರು.

ಮೊಹನ್‌ ಅಲಿಯಾಸ್‌ ಡಬ್ಬಲ್‌ ಮೀಟರ್‌ ಮೋಹನ್‌, ನಾಗರಾಜ್‌ ಅಲಿಯಾಸ್‌ ವಿಲ್ಸನ್‌ ಗಾರ್ಡನ್‌ ನಾಗ, ಸುನೀಲ್‌ ಅಲಿಯಾಸ್‌ ಸೈಲೆಂಟ್‌ ಸುನೀಲ, ರೋಹಿತ್‌ ಅಲಿಯಾಸ್‌ ಒಂಟೆ ಮತ್ತು ಪ್ರಮೋದ್‌ ಅಲಿಯಾಸ್‌ ಕರಿಯಪ್ಪ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೂರ್ವ ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌ ತಿಳಿಸಿದ್ದಾರೆ.

ಟಾಟಾ ರಮೇಶ್‌ಗೆ ಪ್ರಾಣ ಬೆದರಿಕೆ ಆರೋಪದಲ್ಲಿ ವಿಚಾರಣೆಗೊಳಪಡಿಸಿದಾಗ ಆರೋಪಿಗಳು ಮನೆಗಳಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದುದು ಪತ್ತೆಯಾಗಿತ್ತು. ಅಲ್ಲದೆ, ಆರೋಪಿಗಳೆಲ್ಲರೂ ಪರಸ್ಪರ ಪರಿಚಿತ­ರಾಗಿದ್ದು, ಸಂಘಟಿತರಾಗಿ ಅಪರಾಧವೆಸಗಲು ಸಂಚು ರೂಪಿಸಿದ್ದರು. ಆರ್ಥಿಕ ಲಾಭ ಪಡೆಯುವ ಉದ್ದೇಶದಿಂದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದರು.

ಆರೋಪಿಗಳ ವಿರುದ್ಧ ಕೆಲ ವರ್ಷಗಳ ಹಿಂದೆಯೇ ನಗರದ ಕೆಲ ಠಾಣೆಗಳಲ್ಲಿ ರೌಡಿ ಶೀಟರ್‌ ಪಟ್ಟಿ ತೆರೆಯಲಾಗಿದೆ. ಈ ಹಿನ್ನೆಲೆಯಲ್ಲಿ ತಮ್ಮ ಅಧಿಕಾರ ಬಳಸಿ ಅವರ ವಿರುದ್ಧ ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

ಬಂಧಿತರ ಪೈಕಿ ಡಬ್ಬಲ್‌ ಮೀಟರ್‌ ಮೋಹನ್‌ ಹಾಗೂ ವಿಲ್ಸನ್‌ಗಾರ್ಡನ್‌ ನಾಗ ಫೆ.20ರಂದು ಯಲಹಂಕದ ನ್ಯಾಯಾಂಗ ಬಡಾವಣೆಯಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಡಕಾಯಿತಿ ಮಾಡಲು ಸಂಚು ರೂಪಿಸಿದ್ದರು. ಈ ಮಾಹಿತಿ ಆಧಾರಿಸಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇವರಿಂದ ಸ್ವದೇಶಿ ಪಿಸ್ತೂಲು ಮತ್ತು 6 ಗುಂಡುಗಳು ಹಾಗೂ ಚಾಕು ಮತ್ತಿತರ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿತ್ತು. 

ಅಗ್ನಿ ಮನೆಯಲ್ಲಿದ್ದರು: ರೋಹಿತ್‌ ಅಲಿಯಾಸ್‌ ಒಂಟೆ ತನ್ನ ಸಹಚರ ಸತೀಶ್‌ ಮೂಲಕ ಉದ್ಯಮಿ ಟಾಟಾ ರಮೇಶ್‌ಗೆ ಬೆದರಿಕೆ ಹಾಕಿಸಿದ್ದ. ಈ ಕೃತ್ಯಕ್ಕೆ ಸೈಲೆಂಟ್‌ ಸುನೀಲನೇ ಮುಖ್ಯಸ್ಥನಾಗಿದ್ದ. ಈತನ ಸೂಚನೆ ಮೇರೆಗೆ ಆರೋಪಿಗಳು ರಮೇಶ್‌ಗೆ ಪ್ರಾಣ ಬೆದರಿಕೆ ಹಾಕಿದ್ದರು.

5ನೇ ಕೋಕಾ ಪ್ರಕರಣ
ಕೋಕಾ ಕಾಯ್ದೆ ಅಡಿಯಲ್ಲಿ ದಾಖಲಾಗುತ್ತಿರುವ 3ನೇ ಪ್ರಕರಣ ಇದಾಗಿದೆ. ಬನ್ನಂಜೆ ರಾಜನ ಮೇಲೆ ಒಂದು ಕೇಸ್‌, ದಕ್ಷಿಣ ಕನ್ನಡದಲ್ಲಿ ಮತ್ತೂಂದು ಪ್ರಕರಣ, ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್‌ಪಿನ್‌ ಶಿವಕುಮಾರ್‌ ಸೇರಿ ಇತರ ಕೆಲ ಆರೋಪಿಗಳ ವಿರುದ್ಧ, ಕೆ.ಆರ್‌.ಪುರ ಮಾಜಿ ಕಾರ್ಪೊರೇಟರ್‌ ಸುರಪುರ ಶ್ರೀನಿವಾಸ್‌ ಹತ್ಯೆ ಪ್ರಕರಣದ ಹಂತಕರನ್ನೂ ಇದೇ ಕಾಯ್ದೆಯಡಿ ಬಂಧಿಸಲಾಗಿತ್ತು. 

ಟಾಪ್ ನ್ಯೂಸ್

11

Kannada Rajyotsava: ನಿಂತ ನೆಲವೇ ಕರ್ನಾಟಕ!

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

3-raj-b-shetty

Kannada: ಬೆಳೆ ಕನ್ನಡ : ಸರಣಿ-1 ಕನ್ನಡ ಚಿತ್ರರಂಗ; ಬದಲಾದ ಬದುಕೇ ಸಿನೆಮಾ ಭಾಷೆಗೂ ಕುತ್ತು

9

Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ

Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ

Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್

Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್

Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ

Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ

7

Bengaluru: ಬಸ್‌ ಕಂಡಕ್ಟರ್‌, ಡ್ರೈವರ್‌ಗೆ ತೀವ್ರ ಹಲ್ಲೆ: ಇಬ್ಬರು ಆರೋಪಿಗಳ ಬಂಧನ

Bengaluru: ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ಎಸಿ ಮೆಕ್ಯಾನಿಕ್‌ ದುರ್ಮರಣ

Bengaluru: ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ಎಸಿ ಮೆಕ್ಯಾನಿಕ್‌ ದುರ್ಮರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

4

New Delhi: ದೀಪಾವಳಿ ಹಬ್ಬದ ವೇಳೆ ಅಮೆರಿಕ ರಾಯಭಾರಿ ಡ್ಯಾನ್ಸ್‌!

11

Kannada Rajyotsava: ನಿಂತ ನೆಲವೇ ಕರ್ನಾಟಕ!

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

4-editorial

Editorial: ಸುವರ್ಣ ಕರ್ನಾಟಕ: ವಿಕಾಸಕ್ಕೆ ಕಾರ್ಯಸೂಚಿ ಅಗತ್ಯ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.