ಜಲಮೂಲ ರಕ್ಷಣೆಗೆ ತಿಮ್ಮಕ್ಕ ಮನವಿ
Team Udayavani, Mar 27, 2017, 12:12 PM IST
ಮಹದೇವಪುರ: ಸಮಾಜದ ಸುಸ್ಥಿರ ಸಮಗ್ರ ಅಭಿವೃದ್ಧಿಗೆ ನೀರು ಅತ್ಯಾವಶ್ಯಕ. ಆದ್ದರಿಂದ ಜಲ ಸಂಪನ್ಮೂಲದ ಸಂರಕ್ಷಣೆ ಹಾಗೂ ಪೋಷಣೆ ಅತಿ ಮುಖ್ಯ ಎಂದು ಸಾಲು ಮರದ ತಿಮ್ಮಕ್ಕ ಹೇಳಿದರು.
ವಿಶ್ವ ನೀರಿನ ದಿನಾಚರಣೆಯ ಅಂಗವಾಗಿ “ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್’, “ವಾಟರ್ ಏಡ್ ಇಂಡಿಯಾ’, “ಮಿಡಿತ ಪೌಂಡೇಷನ್’ ಸಂಯುಕ್ತಾಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದ ಅವರು, “ನೀರಿನ ಮಿತ ಬಳಕೆ ಮತ್ತು ತ್ಯಾಜ್ಯ ನೀರಿನ ಮರುಬಳಕೆ ನಮ್ಮೆಲ್ಲರ ಹೊಣೆಯಾಗಿದೆ. ಇದನ್ನು ಪ್ರತಿಯೊಬ್ಬರೂ ಪಾಲಿಸಬೇಕು,” ಎಂದರು.
“ನೀರಿನ ಅಸಮರ್ಪಕ ಬಳಕೆ ಹಾಗೂ ಅಂತರ್ಜಲದ ದುರ್ಬಳಕೆಯಿಂದಾಗಿ ûಾಮ ತಲೆದೋರಿದೆ. ಆದ್ದರಿಂದ ನೀರನ್ನು ಅತ್ಯಂತ ಜಾಗರೂಕವಾಗಿ, ಮಿತವಾಗಿ ಬಳಸಿ ಮುಂದಿನ ಪೀಳಿಗೆಗೆ ಉಳಿಸಬೇಕು,” ಎಂದು ಸಲಹೆ ನೀಡಿದರು. “ಬೆಂಗಳೂರಿನ ಕೆರೆಗಳು ಕಲುಷಿತ ನೀರಿನಿಂದ ಮಲಿನಗೊಂಡಿವೆ. ಸರ್ಕಾರ ಈ ಬಗ್ಗೆ ಕೂಡಲೇ ಎಚ್ಚೆತ್ತುಕೊಳ್ಳಬೇಕು,” ಎಂದು ಕಿವಿಮಾತು ಹೇಳಿದರು.
ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಸಂಸ್ಥಾಪಕ ಡಾ.ಡೆನ್ನಿಸ್, ವಾಟರ್ ಏಡ್ ಇಂಡಿಯಾದ ಸದಸ್ಯೆ ತೇಜಸ್ವಿ, ವನಶ್ರೀ ಪ್ರಶಸ್ತಿ ಪುರಸ್ಕೃತ ಉಮೇಶ್, ಸಮಾಜ ಸೇವಕ ಜಯಪ್ರಕಾಶ್, ಮಿಡಿತ ಪೌಂಡೇಶನ್‌ನ ಸಂಸ್ಥಾಪಕ ಪರಿಸರ ಮಂಜುನಾಥ್, ಕೆರೆ ಹೋರಾಟಗಾರ ವೆಂಕಟೇಶ್, ವಿಷ್ಣು ಸೇನಾ ಸಂಘಟನೆಯ ಸದಸ್ಯರು ಸೇರಿದಂತೆ ಹಲವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್’
Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ
Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ
Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ
Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್
MUST WATCH
ಹೊಸ ಸೇರ್ಪಡೆ
Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!
Udupi: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
25 ಬಿಲಿಯನ್ ಕಿ.ಮೀ ದೂರದ ಅಂತರತಾರಾ ಬಾಹ್ಯಾಕಾಶದಲ್ಲಿ ಸಮಸ್ಯೆಗೆ ಸಿಲುಕಿದ ವೊಯೇಜರ್ 1
Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್’
Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.