ಹಿಂದುಳಿದ ವರ್ಗದವರ ಮಕ್ಕಳಿಗೆ ಶಿಕ್ಷಣ ಕೊಡಿಸಿ

Team Udayavani, Mar 27, 2017, 3:36 PM IST

gul6.jpg

ಚಿಂಚೋಳಿ: ಶೋಷಿತ ಹಿಂದುಳಿದ ವರ್ಗದವರ ಮಕ್ಕಳಿಗೆ ಆಂಧ್ರಪ್ರದೇಶ ಸರಕಾರ ಉಚಿತ ಶಿಕ್ಷಣ ಮತ್ತು ಶಾಲಾ ಶುಲ್ಕ ಭರಿಸುತ್ತಿದೆ. ಹಿಂದುಳಿದ ವರ್ಗದವರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿದರೆ ಕುಟುಂಬ ಮತ್ತು ಸಮಾಜ ಅಭಿವೃದ್ದಿಗೊಳ್ಳಲಿದೆ ಎಂದು ಆಂಧ್ರಪ್ರದೇಶ ತೆಲುಗುದೇಶಂ ಪಕ್ಷದ ಶಾಸಕ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಅಧ್ಯಕ್ಷ ಆರ್‌. ಕೃಷ್ಣಯ್ಯ ಹೇಳಿದರು. 

ತಾಲೂಕಿನ ಸುಲೇಪೇಟ ಗ್ರಾಮದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಆವರಣದಲ್ಲಿ ರವಿವಾರ ತಾಲೂಕು ಡಿ. ದೇವರಾಜ ಅರಸು ಹೋರಾಟ ಸಮಿತಿ ಡಿ. ದೇವರಾಜ ಅರಸು ಜನ್ಮ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಶೋಷಿತ ವರ್ಗಗಳ ಬೃಹತ್‌ ಸಮಾವೇಶದಲ್ಲಿ ಅವರು ಮಾತನಾಡಿದರು. 

ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿ| ಡಿ. ದೇವರಾಜ ಅರಸು ಅವರು 1976-77ರಲ್ಲಿ ಅಂಧ್ರಪ್ರದೇಶಕ್ಕೆ ಭೇಟಿ ನೀಡಿ ಹಿಂದುಳಿದ ವರ್ಗಗಳ ಹೋರಾಟದಲ್ಲಿ ಭಾಗವಹಿಸಿದ್ದರು. ಅವರ ಹೋರಾಟದ ಫಲವಾಗಿ ಈಗ ಆಂಧ್ರಪ್ರದೇಶ ಸರಕಾರ ಹಿಂದುಳಿದ ವರ್ಗದ ಮಕ್ಕಳಿಗೆ 1ನೇ ತರಗತಿಯಿಂದ ಪದವಿ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್‌ ಶಿಕ್ಷಣದಲ್ಲಿ ಅಭ್ಯಸಿಸುವ ವಿದ್ಯಾರ್ಥಿಗಳಿಗೆ 1.20 ಲಕ್ಷ ರೂ. ಶುಲ್ಕ ಭರಿಸುತ್ತಿದೆ. 

ಕರ್ನಾಟಕ ರಾಜ್ಯದಲ್ಲಿ ಬಡತನ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ನೀಡುವುದು ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ವಸತಿ ನಿಲಯ ಪ್ರಾರಂಭಿಸಬೇಕು. ವಿದ್ಯಾರ್ಥಿ ವೇತನ ಹೆಚ್ಚಿಸಬೇಕು ಎಂದು ಹೇಳಿದರು. 

ಹಿಂದುಳಿದ ವರ್ಗದವರಿಗೆ 50 ಲೋಕಸಭೆ ಸ್ಥಾನ ಮೀಸಲಿಡಬೇಕು. ಪ್ರಜಾಪ್ರಭುತ್ವ ಸರಕಾರದಲ್ಲಿ ಎಲ್ಲ ಸಮಾಜದ ಉದ್ಧಾರ ಆಗಬೇಕು. ಜನಸಂಖ್ಯೆಗನುಣವಾಗಿ ಆರ್ಥಿಕ ಸಾಲ ಸೌಲಭ್ಯಗಳು ಸಿಗಬೇಕು. ಡಿ. ದೇವರಾಜ ಅರಸು ಒಬ್ಬ ಆದರ್ಶ ರಾಜಕಾರಣಿಯಾಗಿದ್ದರು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. 

ಸಚಿವ ಡಾ| ಶರಣಪ್ರಕಾಶ ಪಾಟೀಲ, ಸಂಸದೀಯ ಕಾರ್ಯದರ್ಶಿ ಡಾ| ಉಮೇಶ ಜಾಧವ, ತಿಪ್ಪಣ್ಣಪ್ಪ ಕಮಕನೂರ, ಬಸವರಾಜ ಪಾಟೀಲ ಊಡಗಿ, ತೆಲಂಗಾಣದ ಶ್ರೀನಿವಾಸ ಗೌಡ, ಜಿಪಂ ಸದಸ್ಯ ಗೌತಮ ಪಾಟೀಲ, ಶರಣಪ್ಪ ಮಾನೇಗಾರ, ಬಸವರಾಜ ಸುಲೇಪೇಟ, ಶರಣಪ್ಪ ತಳವಾರ, ಬಸವರಾಜ ಸಜ್ಜನಶೆಟ್ಟಿ, ರುದ್ರಶೆಟ್ಟಿ ಪಡಶೆಟ್ಟಿ ಇದ್ದರು. 

ಟಾಪ್ ನ್ಯೂಸ್

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

9–karnataka-50

Kannada Sambrama: ಸುವರ್ಣ ಮಹೋತ್ಸವ ವಿಶೇಷ; 50 ವರ್ಷದ ಹರ್ಷಕ್ಕೆ 50 ಕಾರಣ

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

11-bng

Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.