ಕೇಂದ್ರ ಪಠ್ಯಕ್ರಮ, ಖಾಸಗಿ ಶಾಲೆಗಳಿಗೆ ಕಡಿವಾಣ
Team Udayavani, Mar 28, 2017, 3:45 AM IST
ವಿಧಾನಸಭೆ: ರಾಜ್ಯದಲ್ಲಿರುವ ಸಿಬಿಎಸ್‌ಸಿ ಸಚಿವ ಮತ್ತು ಐಸಿಎಸ್‌ಇ ಶಾಲೆಗಳನ್ನು ಸರ್ಕಾರದ ನಿಯಂತ್ರಣಕ್ಕೆ ತರುವ ಹಾಗೂ ಖಾಸಗಿ ಶಾಲೆಗಳ ಶುಲ್ಕ ನಿಗದಿಗೆ ಕಡಿವಾಣ ಹಾಕುವ ಉದ್ದೇಶದಿಂದ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರಿಗಳನ್ನು ರಚಿಸಲು ಕರ್ನಾಟಕ ಶಿಕ್ಷಣ (ಎರಡನೇ ತಿದ್ದುಪಡಿ) ವಿಧೇಯಕ-2017ನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಪ್ರಸ್ತುತ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ರಾಜ್ಯ ಸರ್ಕಾರಕ್ಕೆ ಸ್ವಲ್ಪ ಮಟ್ಟಿಗಿನ ಹಿಡಿತವಿದ್ದರೂ ಕೇಂದ್ರ ಪಠ್ಯಕ್ರಮದ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರಕ್ಕೆ ಯಾವುದೇ ಹಿಡಿತ ಇಲ್ಲ. ಹೀಗಾಗಿ ಕರ್ನಾಟಕ ಶಿಕ್ಷಣ ಕಾಯ್ದೆಯಡಿ ಈ ಎರಡೂ ಶಾಲೆಗಳನ್ನು ತರಲು ಮತ್ತು ಸಿಬಿಎಸ್‌ಇ, ಐಸಿಎಸ್‌ಇ ಸೇರಿದಂತೆ ಎಲ್ಲಾ ಖಾಸಗಿ ಶಾಲೆಗಳಲ್ಲಿ ರಾಜ್ಯ ಸರ್ಕಾರ 2016ರಲ್ಲಿ ಜಾರಿಗೆ ತಂದಿರುವ ಮಕ್ಕಳ ಸುರಕ್ಷತಾ ನೀತಿಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ಬಗ್ಗೆ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.
ಬೇಕಾಬಿಟ್ಟಿ ಶುಲ್ಕಕ್ಕೆ ಕಡಿವಾಣ: ಇದಲ್ಲದೆ, ಖಾಸಗಿ ಶಾಲೆಗಳಲ್ಲಿ ಬೇಕಾಬಿಟ್ಟಿ ಶುಲ್ಕ ವಿಧಿಸುವುದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಸರ್ಕಾರ, ಅದಕ್ಕಾಗಿ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ರಚಿಸಲು ಮುಂದಾಗಿದೆ. ನಿಗದಿಗಿಂತ ಹೆಚ್ಚು ಶುಲ್ಕ ವಿಧಿಸಿದ್ದು ಸಾಬೀತಾದರೆ ಅಂತಹ ಶಿಕ್ಷಣ ಸಂಸ್ಥೆಗಳಿಗೆ 10 ಲಕ್ಷ ರೂ.ವರೆಗೆ ದಂಡ ವಿಧಿಸುವ ಮತ್ತು ಹೆಚ್ಚುವರಿ ಶುಲ್ಕವನ್ನು ಮರುಪಾವತಿಸುವಂತೆ ಸೂಚಿಸುವ ಅಧಿಕಾರವನ್ನು ಪ್ರಾಧಿಕಾರಕ್ಕೆ ನೀಡಲಾಗಿದೆ. ಜತೆಗೆ ಖಾಸಗಿ ಶಾಲೆಗಳಲ್ಲಿ ನೇಮಕವಾಗುವ ಶಿಕ್ಷಕರು ಮತ್ತು ಸಿಬ್ಬಂದಿಯ ಶೈಕ್ಷಣಿಕ ಅರ್ಹತೆ, ಅವರಿಗೆ ನೀಡುತ್ತಿರುವ ವೇತನದ ಬಗ್ಗೆಯೂ ಗಮನಹರಿಸಲು ಪ್ರಾಧಿಕಾರಕ್ಕೆ ಅಧಿಕಾರ ನೀಡಿದ್ದು, ನಿಯಮ ಉಲ್ಲಂ ಸಿದ ಶಾಲೆಗಳಿಗೆ 5 ಲಕ್ಷ ರೂ.ವರೆಗೆ ದಂಡ ವಿಧಿಸುವ ಅಧಿಕಾರವನ್ನೂ ಪ್ರಾಧಿಕಾರಕ್ಕೆ ನೀಡುವ ಬಗ್ಗೆ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.