ಠಾಣೆಯಲ್ಲೇ ವಿಷ ಸೇವಿಸಿದ್ದ ರೈತ ಸಾವು;ಗುಂಡ್ಲುಪೇಟೆಯಲ್ಲಿ ನಿಷೇಧಾಜ್ಞೆ
Team Udayavani, Mar 28, 2017, 9:30 AM IST
ಗುಂಡ್ಲುಪೇಟೆ: ಜಮೀನಿನ ಎಲ್ಲೆ ಗುರುತಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆತಂದಿದ್ದಾಗ ಪೊಲೀಸ್ ಠಾಣೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಉಪ ಚುನಾವಣಾ ಕಣವಾಗಿರುವ ಕ್ಷೇತ್ರದಲ್ಲಿ ರೈತನ ಸಾವು ಖಂಡಿಸಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಲಿರುವ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಮಂಗಳವಾರ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಕಗ್ಗಳದಹುಂಡಿ ಗ್ರಾಮದ ವಾಸಿ ರೈತ ನಾಗೇಶ್ (30) ಎಂಬುವವರೇ ಮೃತರು. ಇವರ ಜಮೀನಿನ ಸಮೀಪ ಚೀನಾ ಮೂಲದ ಚೆಂಡುಮಲ್ಲಿಗೆ ಸಂಸ್ಕರಣಾ ಘಟಕ ನಿರ್ಮಾಣವಾಗುತ್ತಿತ್ತು. ಈ ಸಂಬಂಧ ಎಲ್ಲೆ ಗುರುತಿಸುವವರೆಗೂ ಇಲ್ಲಿಗೆ ತಂತಿ ಬೇಲಿ ಹಾಕಬಾರದು ಎಂದು ಕಂಪನಿಯವರಿಗೆ ನಾಗೇಶ್ ತಿಳಿಸಿದ್ದರು. ಈ ಬಗ್ಗೆ ತಂತಿ ಬೇಲಿಹಾಕಲು ನಾಗೇಶ್ ತೊಂದರೆ ನೀಡುತ್ತಿದ್ದಾರೆಂದು ಚೀನಾ ಕಂಪನಿಯವರು ತೆರಕಣಾಂಬಿ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾ.24ರಂದು ತಾಲೂಕಿನ ತೆರಕಣಾಂಬಿ ಪೊಲೀಸರು ವಿಚಾರಣೆಗೆ ಕರೆದುಕೊಂಡು ಹೋಗಿದ್ದರು. ಇದರಿಂದ ಮನನೊಂದ ನಾಗೇಶ್ ಠಾಣೆಯಲ್ಲೇ ವಿಷ ಸೇವಿಸಿ ಆತ್ಮಹತೆಗೆ ಪ್ರಯತ್ನಿಸಿದ್ದರು.
ಕೂಡಲೇ ಪೊಲೀಸರು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಆದರೆ ಸೋಮವಾರ ಸಂಜೆ 4ರ ಸಮಯದಲ್ಲಿ ಚಿಕಿತೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ತನ್ನ ತಮ್ಮನಿಗೆ ನಿರಂತರ ಮಾನಸಿಕ ಕಿರುಕುಳ ನೀಡುತ್ತಿದ್ದ ಕಾರ್ಖಾನೆಯ ವಿರುದ್ಧ ಸೋದರ ಮಹೇಶ್ ತೆರಕಣಾಂಬಿ ಠಾಣೆಯಲ್ಲಿ ದೂರು ನೀಡಿದ್ದರು.
ಗುಂಡ್ಲುಪೇಟೆಯಲ್ಲಿ ಮುಂಜಾಗೃತ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಎಸ್‌ಪಿ ಪ್ರದೀಪ್ ಕುಮಾರ್ ಜೈನ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.