ವೃದ್ಧೆಯನ್ನು ತಿಂದು ಹಾಕಿದ ಬೀದಿ ನಾಯಿಗಳು
Team Udayavani, Mar 28, 2017, 11:07 AM IST
ಮರಾಜ್ಗಡ್ (ಮ.ಪ್ರ): ಹಸುಗೂಸುಗಳನ್ನು ನಾಯಿಗಳು ತಿನ್ನುವುದು ಗೊತ್ತು. ಅಂಥದ್ದೇ ಒಂದು ಪ್ರಕರಣ ಮಧ್ಯಪ್ರದೇಶದ ರಾಜಗಢದಲ್ಲಿ ನಡೆದಿದೆ. ಆದರೆ ಇಲ್ಲಿ ನಾಯಿಗಳಿಗೆ ತುತ್ತಾಗಿರುವುದು 80 ವರ್ಷ ವಯಸ್ಸಿನ ವೃದ್ಧೆ. ಕೆಲ ದಿನಗಳ ಹಿಂದೆ ಬಿಸ್ಮಿಲ್ಲಾ ಎಂಬ ಮಹಿಳೆ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದರು. ಅದನ್ನು ನೋಡಿದ್ದ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಮಾ.19ರಿಂದ ನಾಪತ್ತೆಯಾಗಿದ್ದರು. ಇದು ಯಾರ ಗಮನಕ್ಕೂ ಬಂದಿರಲಿಲ್ಲ. ಅವರ ಮೃತದೇಹ ಭಾನುವಾರ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಪತ್ತೆಯಾಗಿದೆ.
ಹೊರಭಾಗದಿಂದ ಶವದ ವಾಸನೆ ಬರುತ್ತಿದೆ ಎಂದು ರೋಗಿಗಳು ಆಡಳಿತ ಮಂಡಳಿಗೆ ಮಾಹಿತಿ ನೀಡಿದ ಬಳಿಕ ಮಹಿಳೆಯ ಶೋಧಕ್ಕೆ ಕ್ರಮ ಕೈಗೊಳ್ಳಲಾಯಿತು. ಸುತ್ತಮುತ್ತ ಹುಡುಕಿದಾಗ ಬೀದಿ ನಾಯಿಗಳು ತಿಂದು ಉಳಿದ ದೇಹದ ಭಾಗ ಪತ್ತೆಯಾಯಿತು ಎಂದು ಮುಖ್ಯ ವೈದ್ಯಾಧಿಕಾರಿ ಡಾ.ಎಸ್.ಎಸ್.ಗುಪ್ತಾ ಹೇಳಿದ್ದಾರೆ. ಆಸ್ಪತ್ರೆಯಿಂದ ಮಹಿಳೆ ಹೊರಕ್ಕೆ ಬಂದಿದ್ದ ವೇಳೆ ನಾಯಿಗಳು ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಮಹಿಳೆ ನಾಪತ್ತೆಯಾಗಿರುವ ಬಗ್ಗೆ ಠಾಣೆಯಲ್ಲಿ ಕೇಸು ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.