ಅಕ್ರಮ ಶಸ್ತ್ರಾಸ್ತ್ರ ಕೇಸು ಸಿಒಡಿಗೆ ವಹಿಸಲು ಆಗ್ರಹ


Team Udayavani, Mar 28, 2017, 12:17 PM IST

agni-sridhar.jpg

ಬೆಂಗಳೂರು: ಅಕ್ರಮ ಶಸ್ತ್ರಾಸ್ತ್ರ ಆರೋಪದಡಿ ತಮ್ಮ ವಿರುದ್ಧ ದಾಖಲಿಸಲಾಗಿರುವ ಪ್ರಕರಣವನ್ನು ರಾಜ್ಯ ಸರಕಾರ ಕೂಡಲೇ ಸಿಓಡಿ ತನಿಖೆಗೆ ವಹಿಸ‌ಬೇಕು ಎಂದು ಪತ್ರಕರ್ತ ಅಗ್ನಿ ಶ್ರೀಧರ್‌ ಒತ್ತಾಯಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಡಬಗೆರೆ ಶ್ರೀನಿವಾಸ್‌ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿಯಲ್ಲಿ ರೋಹಿತ್‌ ಮತ್ತು ಸೈಲೆಂಟ್‌ ಸುನೀಲ್‌ ಶೋಧದ ನೆಪದಲ್ಲಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌ ನೇತೃತ್ವದ ತಂಡ ಏಕಾಏಕಿ ನಮ್ಮ ಮನೆ ಮೇಲೆ ದಾಳಿ ನಡೆಸಿತ್ತು.

ಈ ವೇಳೆ ಸಿಕ್ಕ ಎರಡು ಮಚ್ಚುಗಳು, ನಾಲ್ಕು ಗನ್‌ಗಳು ಮತ್ತು ಎರಡು ಕತ್ತಿಗಳನ್ನು ವಶಪಡಿಸಿಕೊಂಡ ಪೊಲೀಸರು “ಅಕ್ರಮ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದೀರಾ..?’ ಎಂದು  ಪ್ರಶ್ನಿಸಿ ಅನುಚಿತವಾಗಿ ವರ್ತಿಸಿದ್ದರು. ರಕ್ಷಣೆಗಾಗಿ ಪರವಾನಗಿ ಪಡೆದ ರಿವಾಲ್ವಾರ್‌ ಹೊಂದಿದ್ದೇನೆ ಎಂದು ಹೇಳಿದ್ದಕ್ಕೆ, “ನೀವೊಬ್ಬ ರೌಡಿಶೀಟರ್‌. ನಿಮಗೆ ಪರವಾನಗಿ ಕೊಡಲು ಸಾಧ್ಯವೇ ಇಲ್ಲ,’ ಎಂದು ಬಾಯಿಗೆ ಬಂದಂತೆ ನನ್ನ ವಿರುದ್ಧ ಮಾತನಾಡಿದ್ದರು.  

ತಮಸ್ಸು ಚಿತ್ರದ ಚಿತ್ರೀಕರಣಕ್ಕೆ ಬಳಿಸಿದ್ದ ಕತ್ತಿಗಳು: “ಅಂದು ಸಿಕ್ಕ ಕತ್ತಿಗಳೂ ತಮಸ್ಸು ಚಿತ್ರ ಶೂಟಿಂಗ್‌ಗೆ ಬಳಸಿದ್ದಾಗಿದ್ದವು. ರಿವಾಲ್ವಾರ್‌ಗೆ ಪೊಲೀಸ್‌ ಕಮೀಷನರ್‌ ಅವರಿಂದ ಪರವಾನಗಿ ಪಡೆಯಲಾಗಿದೆ. ಅದಕ್ಕೆ ಸಂಬಂಧಪಟ್ಟ ದಾಖಲೆಗಳು ಆ ಕ್ಷಣಕ್ಕೆ ಸಿಗಲಿಲ್ಲ. ಆದರೆ, ನನ್ನ ಮಾತು ಕೇಳುವ ಮನಸ್ಥಿತಿಯಲ್ಲಿ ಹೇಮಂತ ನಿಂಬಾಳ್ಕರ್‌ ಅವರು ಇರಲಿಲ್ಲ. ಡಕಾಯಿತಿ ಉದ್ದೇಶದಿಂದ ಅಕ್ರಮವಾಗಿ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದಾರೆ ಎಂದು ಕೇಸು ದಾಖಲಿಸಿದ್ದಾರೆ,” ಎಂದು ದೂರಿದರು. 

“19 ವರ್ಷಗಳ ಹಿಂದೆಯೇ ಭೂಗತ ಲೋಕದಿಂದ ಹೊರ ಬಂದಿದ್ದೇನೆ. ಈ ವರೆಗೂ ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿಲ್ಲ. ಆಗಿದ್ದರೆ ಸಾಬೀತುಪಡಿಸಲಿ,” ಎಂದು ಸವಾಲು ಹಾಕಿದ ಅಗ್ನಿಶ್ರೀಧರ್‌, “ಸಾರ್ವಜನಿಕ ಜೀವನದಲ್ಲಿ ತೊಡಗಿಕೊಂಡಿರುವ ನನ್ನ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ. ಈ ಸಂಬಂಧ ಸೋಮವಾರ ಪೊಲೀಸ್‌ ಮಹಾನಿರ್ದೇಶಕರನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇನೆ. ರಿವಾಲ್ವರ್‌ಗಿರುವ ಅನುಮತಿ ಪತ್ರಗಳ ದಾಖಲೆ ಕೊಟ್ಟಿದ್ದೇನೆ. ಹತ್ತು ದಿನಗಳ ಒಳಗಾಗಿ ನನ್ನ ಮೇಲಿನ ಕೇಸಗಳನ್ನು ಸಿಓಡಿ ವಹಿಸದಿದ್ದರೆ, ಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತೇನೆ,” ಎಂದು ಎಚ್ಚರಿಸಿದರು. 

ರೌಡಿಗಳಾಗೇ ಸಾಯಬೇಕೇ? 
ಕಳೆದ ಮೂರ್‍ನಾಲ್ಕು ವರ್ಷಗಳಿಂದ ಭೂಗತ ಜಗತ್ತಿನ ನಂಟಿನಿಂದ ದೂರವಾಗಿದ್ದ ರೋಹಿತ್‌, ಸೈಲೆಂಟ್‌ ಸುನೀಲ್‌ರನ್ನು ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದೊಯ್ದು ಕೋಕಾ ಕೇಸ್‌ ದಾಖಲಿಸಲಾಗಿದೆ. ರೌಡಿ ಯಾಗಿದ್ದವರು ರೌಡಿಗಳಾಗಿಯೇ ಸಾಯಬೇಕೇ ಎಂದು ಪ್ರಶ್ನಿಸಿದರು. ಅಲ್ಲದೆ, ಅವರಿಬ್ಬರ ಮೇಲೆ ಕೋಕಾ ಕೇಸು ಹಾಕಿರುವುದು ಸರಿಯಲ್ಲ ಎಂದರು. ನನ್ನ ಹಾಗೂ ನನ್ನ ಸಹಚರರ ಮೇಲೆ ದಾಖಲಾಗಿರುವ ಕೇಸ್‌ಗಳ ಕುರಿತಂತೆ ಸರ್ಕಾರ ಸಿಓಡಿ ತನಿಖೆ ನಡೆಸಬೇಕು. ಪ್ರಕರಣಗಳ ಹಿಂದೆ ಕಾಣದ ಕೈಗಳ ಪಿತೂರಿ ನಡೆದಿರುವುದು ಕಂಡು ಬರುತ್ತಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.