ಟ್ರಾಫಿಕ್‌ಗೆ “ಜೀರೋ ಟಾಲರೆನ್ಸ್‌’ ಲಗಾಮು

Team Udayavani, Mar 28, 2017, 12:41 PM IST

compost.jpg

ಬೆಂಗಳೂರು: ನಗರದಲ್ಲಿ ದಿನೇ ದಿನೆ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆ, ಅಪಘಾತಗಳನ್ನು ತಡೆಗಟ್ಟಲು ಸಂಚಾರ ಪೊಲೀಸರು ನಗರದ ಪ್ರಮುಖ ವೃತ್ತಗಳನ್ನು “ಜೀರೋ ಟಾಲರೆನ್ಸ್‌’ ಜಂಕ್ಷನ್‌ಗಳನ್ನಾಗಿ ಪರಿವರ್ತಿಸುತ್ತಿದ್ದಾರೆ.

ಈಗಾಗಲೇ ಪೂರ್ವ ಸಂಚಾರ ವಿಭಾಗದಲ್ಲಿ 11 ಕಡೆಗಳಲ್ಲಿ ಜೀರೋ ಟಾಲೆರೆನ್ಸ್‌ ಜಂಕ್ಷನ್‌ಗಳನ್ನು ರೂಪಿಸಲಾಗಿದ್ದು, ನಿತ್ಯ ಒಂದೂವರೆ ಸಾವಿರದಂತೆ ಇದುವರೆಗೂ (ಜನವರಿಯಿಂದ) ಸಂಚಾರ ನಿಯಮ ಉಲ್ಲಂ ಸಿದ 75 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಹಾಗೆಯೇ ಪಶ್ಚಿಮ ಸಂಚಾರ ವಿಭಾಗದಲ್ಲಿ 10 ಮತ್ತು ಮತ್ತು ಉತ್ತರ ಸಂಚಾರ ವಿಭಾಗದಲ್ಲಿ 5 ಜಂಕ್ಷನ್‌ಗಳನ್ನು ಗುರುತಿಸಲಾಗಿದ್ದು, ಇದಕ್ಕಾಗಿ ಕಾಮಗಾರಿ ಕೂಡ ನಡೆಯುತ್ತಿದೆ.

ಈ ಎರಡು ವಿಭಾಗಗಳಲ್ಲಿ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ನಿತ್ಯ ಸಾವಿರಾರು ಸಂಚಾರ ನಿಯಮ ಉಲ್ಲಂಘಟನೆ ಪ್ರಕರಣಗಳನ್ನು ದಾಖಲಿಸುತ್ತಿ­ದ್ದಾರೆ. ಈ ಮೂಲಕ ನಿಯಮ ಉಲ್ಲಂಘನೆ ಮಾಡುವವರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಪೂರ್ವ ಮತ್ತು ಪಶ್ಚಿಮ ವಿಭಾಗಗದಲ್ಲಿ ಈಗಾಗಲೇ 75 ಲಕ್ಷ  ಮೊತ್ತ ರೂಪಾಯಿ ದಂಡ ವಿಧಿಸಿದ್ದು, ಉತ್ತರ ವಿಭಾಗದ ಪೊಲೀಸರು ಕಳೆದೊಂದು ವಾರದಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಡಿಸಿಪಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಜೀರೋ ಟಾಲರೆನ್ಸ್‌ ಅಂದ್ರೆ ಏನು?: ನಗರದಲ್ಲಿ ಅತಿ ಹೆಚ್ಚು ದಟ್ಟಣೆ ಇರುವ ಜಂಕ್ಷನ್‌ಗಳನ್ನು ಇದಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ.  ಆ ವೃತ್ತಗಳಲ್ಲಿ ಜೀಬ್ರಾ ಕ್ರಾಸಿಂಗ್‌ ಮಾದರಿಯಲ್ಲೇ ಅರಶಿನ ಬಣ್ಣದ ಚೌಕಾಕೃತಿಗಳನ್ನು ಚಿತ್ರಿಸಲಾಗುತ್ತದೆ. ಈ ಚೌಕಗಳ ಮೇಲೆ ಯಾವುದೇ ವಾಹನಗಳೂ ನಿಲ್ಲುವಂತಿಲ್ಲ. ನಿಂತರೆ ದಂಡ ವಿಧಿಸಲಾಗುತ್ತದೆ.

ಉದಾಹರಣೆಗೆ ನಾವು ಒಂದು ಮಾರ್ಗದಲ್ಲಿ ವಾಹನದಲ್ಲಿ ಚಲಿಸುತ್ತಿರುತ್ತೇವೆ. ರೆಡ್‌ ಸಿಗ್ನಲ್‌ ಬಂದ ಕೂಡಲೇ ವಾಹನ ನಿಲ್ಲಿಸುತ್ತೇವೆ. ನಂಬರ್‌ ಕೌಂಟಿಂಗ್‌ ಪೂರ್ಣಗೊಂಡು ಇನ್ನೇನು ಗ್ರೀನ್‌ ಸಿಗ್ನಲ್‌ ಬೀಳುತ್ತದೆ. ಆದರೆ, ಮುಂದೆ ಸಾಗಬೇಕಾದ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿರುತ್ತದೆ. ಈ ಸಂದರ್ಭದಲ್ಲಿ ಗ್ರೀನ್‌ ಸಿಗ್ನಲ್‌ ಬಂದರೂ ನಾವು ಮುಂದೆ ಹೋಗುವಂತಿಲ್ಲ. ಒಂದು ವೇಳೆ ಮುಂದೆ ಹೋಗಿ, ಅಲ್ಲಿರುವ ಅರಿಶಿಣದ ಪಟ್ಟಿ ಮೇಲೆ ವಾಹನ ನಿಂತರೆ ದಂಡ ಖಚಿತ.

ನಿಯಮ ಉಲ್ಲಂ ಸುವವರನ್ನು ಹಿಡಿಯಲೆಂದೇ ಪ್ರತಿ ಜೀರೋ ಟಾಲರೆನ್ಸ್‌ ಜಂಕ್ಷನ್‌ಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದ್ದು, ಸಂಚಾರ ನಿಯಮ ಉಲ್ಲಂ ಸಿದ ವಾಹನಗಳ ವಿರುದ್ಧ  ದಂಡ ವಿಧಿಸಲಿದ್ದಾರೆ. ಅಷ್ಟೇ ಅಲ್ಲ ಈ ದೃಶ್ಯ ಅಲ್ಲಿನ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗುತ್ತದೆ.

ಎಲ್ಲೆಲ್ಲಿ  ಜೀರೋ ಟಾಲರೆನ್ಸ್‌ ?
ಕೆ.ಆರ್‌.ರಸ್ತೆ, ಕಬ್ಬನ್‌ ರಸ್ತೆ, 110 ಅಡಿ ರಸ್ತೆ , ಹಳೇ ಮದ್ರಾಸ್‌ ರಸ್ತೆ, ಟ್ರಿನಿಟಿ ಜಂಕ್ಷನ್‌, ಬಸವೇಶ್ವರ ವೃತ್ತ, ಸದಾಶಿವನಗರ ಪೊಲೀಸ್‌ ಠಾಣಾ ವ್ಯಾಪ್ತಿ, ಶಿವಾನಂದ ವೃತ್ತ, ಎನ್‌.ಆರ್‌.ಜಂಕ್ಷನ್‌, ಕಾವೇರಿ ಆರ್ಟ್ಸ್ ಮತ್ತು ಕ್ರಾಫ್ಟ್ ಜಂಕ್ಷನ್‌, ಊರ್ವಶಿ ಜಂಕ್ಷನ್‌, ಸೋನಿ ವರ್ಲ, ಇಸ್ರೋ ಜಂಕ್ಷನ್‌. ಮೈಸೂರು ಬ್ಯಾಂಕ್‌ ವೃತ್ತ, ಸುಮ್ಮನಹಳ್ಳಿ, ಯಶವಂತಪುರ, ತುಮಕೂರು ರಸ್ತೆ,

ಆರ್‌.ಟಿ.ನಗರ ಠಾಣೆ, ಹೆಬ್ಟಾಳ ವೃತ್ತ, ಯಲಹಂಕ ಠಾಣೆ, ಚಿಕ್ಕಜಾಲ ನಾರಾಯಣಪುರ ವೃತ್ತ ಮತ್ತು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ವಿಜಯಪುರ ಜಂಕ್ಷನ್‌. ಹೀಗೆ ಪ್ರತಿ ಜಂಕ್ಷನ್‌ ನಿರ್ಮಿಸಲು 1 ಲಕ್ಷಕ್ಕೂ ಅಧಿಕ ವೆಚ್ಚ ವ್ಯಯಿಸಲಾಗುತ್ತಿದೆ. ಪೂರ್ವ ವಲಯದ 11 ಜಂಕ್ಷನ್‌ಗಳಿಗೆ 18 ಲಕ್ಷ ವೆಚ್ಚವಾಗಿದೆ ಎಂದು ಸಂಚಾರ ವಿಭಾಗದ ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ವಿಶೇಷ ತಂಡ
ಸದ್ಯ ಪೂರ್ವ ವಲಯ ಸಂಚಾರ ವಿಭಾಗದ 11 ಜಂಕ್ಷನ್‌ಗಳಲ್ಲಿಯೂ ವಿಶೇಷ ತಂಡ ಕಾರ್ಯಾಚರಣೆ ನಡೆಸುತ್ತಿದ್ದು, ಈ ತಂಡವನ್ನು ಬೇರೆ ಯಾವುದೇ ಕೆಲಸಕ್ಕೆ ನಿಯೋಜಿಸುವುದಿಲ್ಲ. ಒಬ್ಬ ಎಎಸ್‌ಐ, ಪಿಎಸ್‌ಐ ಮತ್ತು ಕಾನ್‌ಸ್ಟೆàಬಲ್‌ ಸೇರಿ ಒಟ್ಟು ಮೂರು ಮಂದಿ ತಂಡದಲ್ಲಿದ್ದಾರೆ. ಈ ತಂಡ ಖಾಯಂ ಆಗಿ ನಿಗದಿತ ಜಂಕ್ಷನ್‌ಲ್ಲಿ ಕರ್ತವ್ಯ ನಿರ್ವಹಿಸಬೇಕು. ಸಂಚಾರ ನಿಯಮ ಉಲ್ಲಂ ಸಿದ ವಾಹನಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.

ಜೀರೋ ಟಾಲರೆನ್ಸ್‌ ಜಂಕ್ಷನ್‌ ನಿರ್ಮಿಸುವುದರಿಂದ ವಾಹನ ಸವಾರರಲ್ಲಿ ಜಾಗೃತಿ ಮೂಡುತ್ತದೆ. ಜತೆಗೆ ನಗರದ ಸಂಚಾರ ವ್ಯವಸ್ಥೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಬಿಂಬಿಸುವ ಉದ್ದೇಶ ಹೊಂದಿದ್ದೇವೆ. ಸದ್ಯ ಮೂರು ವಲಯಗಳ ಕೆಲವೆಡೆ ಮಾತ್ರ ಜಂಕ್ಷನ್‌ ನಿರ್ಮಿಸಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಪ್ರಮುಖ ವೃತ್ತಗಳಲ್ಲೂ ಈ ವ್ಯವಸ್ಥೆ ಬರಲಿದೆ.
– ಹಿತೇಂದ್ರ, ಹೆಚ್ಚುವರಿ ಪೊಲೀಸ್‌ ಆಯುಕ್ತ (ಸಂಚಾರ ವಿಭಾಗ)

ಟಾಪ್ ನ್ಯೂಸ್

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.