ಕಳಲೆಗೆ ಅಧಿಕಾರ ಕೊಟ್ರೆ, ಶಾದಿಭಾಗ್ಯ ಕೊಡ್ತೇವೆ


Team Udayavani, Mar 28, 2017, 12:56 PM IST

mys3.jpg

ನಂಜನಗೂಡು: ನಿಮ್ಮೂರಿನ ಪುತ್ರನಿಗೆ ನೀವು ಅಧಿಕಾರದ ಭಾಗ್ಯ ನೀಡಿ ನಾವು ಅವರಿಗೆ ಶಾದಿ ಭಾಗ್ಯ ನೀಡುತ್ತೇವೆ ಎಂದು ಸಚಿವ ಡಾ. ಎಚ್‌.ಸಿ ಮಹದೇವಪ್ಪಹೇಳಿದರು. ಸಂಸದ ಆರ್‌. ಧ್ರುವನಾರಾಯಣ ಹಾಗೂ ಅವರು ಕೈ ಪಕ್ಷದ ಅಭ್ಯರ್ಥಿ ಕೇಶವ ಮೂರ್ತಿ ಪರ ಪ್ರಚಾರಕ್ಕೆ ಬೆಳಗ್ಗೆ ಕಳಲೆಗೆ ಆಗಮಿಸಿದ ಕೇಶವಮೂರ್ತಿ, ಮಹದೇವಪ್ಪ ಹಾಗೂ ಧ್ರುವನಾರಾಯಣ ಲಕ್ಷ್ಮೀಕಾಂತ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ನಂತರ ದೇವಾಲಯದ ಆವರಣದ ಅರಳಿ ಕಟ್ಟೆಯನ್ನೇರಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಮಾತಯಾಚಿಸಿದರು.

ರಾಯಚೂರು, ಕಲಬುರಗಿ ಇದ್ದ ಹಾಗೆ: ಮಹದೇವಪ್ಪ ಮಾತನಾಡಿ, ನಂಜನಗೂಡಿನ ಗ್ರಾಮೀಣ ಭಾಗಗಳನ್ನು ನೋಡಿದರೆ ರಾಜ್ಯದ ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳನ್ನು ಕಂಡ ಹಾಗಿದೆ. ಅಭಿವೃದ್ಧಿಯನ್ನೇ ಕಾಣಲಾಗದ ಈ  ಕ್ಷೇತ್ರದಲ್ಲಿ ಈಗ ಆರು ತಿಂಗಳಿಂದ ಮಾತ್ರ ಅಭಿವೃದ್ಧಿ ಆರಂಭವಾಗಿದೆ ಎಂದರು.

ಈ  ತಾಲೂಕುನ್ನು ಅಭಿವೃದ್ಧಿ ಪಡಿಸ ಬೇಕು ಎಂಬ ಮಹದಾಸೆ ಯೊಂದಿಗೆ ತಾವು ಕಾಮಗಾರಿಗಳನ್ನು ಪ್ರಾರಂಭಿಸಿರುವುದಾಗಿ ಹೇಳಿದ ಅವರು ಆಗ ಪ್ರಸಾದ ಇನ್ನೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿಯೇ ಇರಲಿಲ್ಲ, ಈಗ ಬರಗಾಲದಲ್ಲೂ ಚುನಾವಣೆ ಬಂದಿದೆ ಮಳೆ ಇಲ್ಲದೆ ಜನತೆ  ಸಂಕಷ್ಟಕ್ಕೊಳಗಾಗಿದ್ದಾರೆ ಆದ್ದರಿಂದ ಈಗ ಅನ್ನಭಾಗ್ಯದ ಅಕ್ಕಿ ಹೆಚ್ಚಿಸಲಾಗಿದೆ. ನಮ್ಮ ಸರ್ಕಾರ ಈ ನಿಮ್ಮ ಗ್ರಾಮಕ್ಕೆ ಅನೇಕ ಯೋಜನೆಗಳನ್ನು ಸಿದ್ಧಪಡಿಸಿದ್ದು ಚುನಾವಣೆಯ ನಂತರ ಪ್ರಕಟಿಸ ಲಾಗುವುದು ಎಂದು ತಿಳಿಸಿದರು.

ನಂಜನಗೂಡು ಎಂದು ಕೋಮುವಾದಿ ಗಳಿಗೆ ಮಣೆ ಹಾಕಿಲ್ಲ ಹಾಕು ವುದು ಇಲ್ಲ. ನೀವೆಲ್ಲ ಸೇರಿ ಮತ ಹಾಕಿ ನಿಮ್ಮ ಮನೆ ಮಗನಿಗೆ ಅಧಿಕಾರ ಭಾಗ್ಯ ನೀಡಿ ನಂತರ ನಾವು ಈ ಬ್ರಹ್ಮಚಾರಿಗೆ ಶಾದಿ ಭಾಗ್ಯ (ಮದುವೆ) ಮಾಡಿಸುತ್ತೇವೆ. ಎಂದಾಗ ಗ್ರಾಮದ ಜನತೆ ಹರ್ಷೋದ್ಘಾರ ವ್ಯಕ್ತಪಡಿಸಿದರು .

ಅಭ್ಯರ್ಥಿ ಕಳಲೆ ಮಾತನಾಡಿ, ನಿಮ್ಮವನಾದ ನನಗೆ ಕಾಂಗ್ರೆಸ್‌ ಟಿಕೆಟ್‌ ನೀಡಿ ಕಳಲೆ  ಗ್ರಾಮದ ಹೆಸರನ್ನು ಮುಗಿಲೆತ್ತರಕ್ಕೇರಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
30 ವರ್ಷಗಳಿಂದ ತಾಲೂಕಿನ ಜನತೆಗೆ ತಮ್ಮದೆ ಆದ ರೀತಿಯಲ್ಲೆ ಸೇವೆ ಸಲ್ಲಿಸುತ್ತ ಬಂದಿರುವ ತಮಗೆ ಈ ಬಾರಿ ಶಾಸಕತ್ವ ದೊರಕಲು ಕಾರ ಣರು ನೀವಾಗಿ ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಪುಷ್ಪಾ, ಮಾಜಿ ಅಧ್ಯಕ್ಷ ಧರ್ಮೇಂದ್ರ, ಮಾಜಿ ಉಪಾಧ್ಯಕ್ಷ ಮಡುವಿನ ಹಳ್ಳಿ ಶಂಕರಪ್ಪ, ಮಾಜಿ ಸದಸ್ಯರಾದ ಕೆ.ಬಿ. ಸ್ವಾಮಿ, ಮಾರುತಿ, ಚೋಳರಾಜು ತಾಪಂ ಮಾಜಿ ಅಧ್ಯಕ್ಷ ನಾಗೇಶ ರಾಜು, ಕಡಜೆಟ್ಟಿ ಬಸವರಾಜು ಹಾಡ್ಯ ಶಿವಣ್ಣ ಚಂದ್ರವಾಡಿ ನಾಗಣ್ಣ  ಮತ್ತಿತರರು ಇದ್ದರು.

ಟಾಪ್ ನ್ಯೂಸ್

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

IFFI: ಪಾಪ್‌ ಸಂಗೀತಗಾರ ರಾಬಿ ವಿಲಿಯಮ್ಸ್‌ ಬೆಟರ್‌ ಮ್ಯಾನ್‌ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ

IFFI: ಪಾಪ್‌ ಸಂಗೀತಗಾರ ರಾಬಿ ವಿಲಿಯಮ್ಸ್‌ ಬೆಟರ್‌ ಮ್ಯಾನ್‌ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

5

Sullia: ಆಡುಮರಿಯನ್ನು ಅಮಾನುಷವಾಗಿ ಎಳೆದೊಯ್ದ ಬಗ್ಗೆ ದೂರು

crimebb

Kasaragod ಅಪರಾಧ ವಾರ್ತೆ; ಆನೆಯ ತುಳಿತಕ್ಕೆ ಮಾವುತ ಸಹಿತ ಇಬ್ಬರ ಸಾವು

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Arrest

Kasaragod: ವಂದೇ ಭಾರತ್‌ಗೆ ಕಲ್ಲೆಸೆತ, ಹಳಿಯಲ್ಲಿ ಕಲ್ಲಿರಿಸಿದ ಇಬ್ಬರ ಬಂಧನ

ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.