ಜಯರಾಮ್ ಶೆಟ್ಟಿ ದಂಪತಿಗೆ ಸಮ್ಮಾನ
Team Udayavani, Mar 28, 2017, 4:22 PM IST
ಕೋಟ: ಯಕ್ಷಗಾನ ಹಾಸ್ಯ ಕಲಾವಿದ ಹಳ್ಳಾಡಿ ಜಯರಾಮ್ ಶೆಟ್ಟಿಯವರು ಯಕ್ಷರಂಗದಲ್ಲಿ 50 ವರ್ಷಗಳ ಕಾಲ ಸೇವೆ ಸಲ್ಲಿಸಿ ವೃತ್ತಿ ಮೇಳದ ತಿರುಗಾಟದಿಂದ ನಿವೃತ್ತರಾದ ಪ್ರಯುಕ್ತ “ಹಳ್ಳಾಡಿಗೆ 60, ರಂಗಕ್ಕೆ 50′ ಎನ್ನುವ ಕಾರ್ಯಕ್ರಮ ಮಾ. 25ರಂದು ಕುಂದಾಪುರ ಆರ್.ಎನ್.ಶೆಟ್ಟಿ ಸಭಾಭವನದ ಆವರಣದಲ್ಲಿ ನಡೆಯಿತು.
ಈ ಸಂದರ್ಭ ಯುವ ಬಂಟರ ಸಂಘಟನೆ ಕುಂದಾಪುರ ನೇತೃತ್ವದಲ್ಲಿ, ಹಳ್ಳಾಡಿ ಅಭಿಮಾನಿ ಬಳಗ ಸಾೖಬ್ರಕಟ್ಟೆ, ಅಭಿಮಾನಿ ಬಳಗ ಗಾವಳಿ ಹಾಗೂ ಹಟ್ಟಿಯಂಗಡಿ ಯಕ್ಷಗಾನ ಮೇಳ ಮತ್ತು ಅಭಿಮಾನಿಗಳು, ಹಿತೈಷಿಗಳ ವತಿಯಿಂದ ಹಳ್ಳಾಡಿಯವರನ್ನು ಸಮ್ಮಾನಿಸಿ, ಗೌರವಿಸಲಾಯಿತು.
ಸಮ್ಮಾನ ಸ್ವೀಕರಿಸಿ ಮಾತನಾಡಿದ ಹಳ್ಳಾಡಿಯವರು, ಯಕ್ಷರಂಗ ತನಗೆ ಎಲ್ಲವನ್ನು ಕೊಟ್ಟಿದೆ. ಜಾತಿ-ಮತ ಭೇದವಿಲ್ಲದೆ ತನಗೆ ಅಭಿಮಾನಿಗಳಿದ್ದಾರೆ. ಈ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಸಮರ್ಪಿಸುವುದಾಗಿ ತಿಳಿಸಿದರು.
ಯಕ್ಷಗಾನ ವಿಮರ್ಶಕ ಎಸ್. ವಿ. ಉದಯ ಕುಮಾರ್ ಶೆಟ್ಟಿ ಮಾತನಾಡಿ, ಯಕ್ಷರಂಗದಲ್ಲಿ 50 ವರ್ಷಗಳ ಕಾಲ ಸೇವೆ ಸಲ್ಲಿಸಿದ ಹಳ್ಳಾಡಿಯವರಿಗೆ ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಬೇಕಿದೆ ಎಂದರು.
ಕುಂದಾಪುರ ಯುವಬಂಟರ ಸಂಘದ ಅಧ್ಯಕ್ಷ ಸುಕೇಶ ಶೆಟ್ಟಿ ಹೊಸಮಠ, ಸಾಲಿಗ್ರಾಮ ಮೇಳದ ಯಜಮಾನ ಪಿ. ಕಿಶನ್ ಹೆಗ್ಡೆ, ಬಂಟರ ಸಂಘದ ಸಂಪಿಗೆಹಾಡಿ ಸಂಜೀವ ಶೆಟ್ಟಿ, ಕೊಲ್ಲೂರು ಮೂಕಾಂಬಿಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಧರ್ಮದರ್ಶಿ ಕೃಷ್ಣ ಪ್ರಸಾದ್ ಅಡ್ಯಂತಾಯ, ಉದ್ಯಮಿ ಕೃಷ್ಣಮೂರ್ತಿ ಮಂಜ, ಸುಜಯ ಶೆಟ್ಟಿ ತೆಕ್ಕಟ್ಟೆ, ಬೆಳ್ವೆ ಗಣೇಶ ಕಿಣಿ ಹಾಗೂ ಕುಂದಾಪುರ ಯುವ ಬಂಟರ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.