ಅಕ್ರಮ ಕಸಾಯಿಖಾನೆ; ಯುಪಿ ಆಯ್ತು, ಈಗ BJP ಆಡಳಿತದ 4 ರಾಜ್ಯಗಳ ಸರದಿ!
Team Udayavani, Mar 29, 2017, 2:33 PM IST
ನವದೆಹಲಿ: ಉತ್ತರಪ್ರದೇಶ ಸರ್ಕಾರ ಅಕ್ರಮ ಕಸಾಯಿಖಾನೆ ಮುಚ್ಚಲು ನಿರ್ಧಾರಿಸಿದ ಬೆನ್ನಲ್ಲೇ ಇದೀಗ ಭಾರತೀಯ
ಜನತಾ ಪಕ್ಷ ಆಡಳಿತ ನಡೆಸುತ್ತಿರುವ ರಾಜಸ್ತಾನ್, ಉತ್ತರಾಖಂಡ್, ಚತ್ತೀಸ್ ಗಢ್ ಹಾಗೂ ಮಧ್ಯಪ್ರದೇಶದಲ್ಲಿಯೂ ಅಕ್ರಮ ಕಸಾಯಿಖಾನೆಗೆ ಬೀಗ ಹಾಕಲು ಸಿದ್ಧತೆ ನಡೆಯುತ್ತಿರುವುದಾಗಿ ಮಾಧ್ಯಮದ ವರದಿಯೊಂದು ತಿಳಿಸಿದೆ.
ಉತ್ತರಪ್ರದೇಶದ ನಂತರ ಜಾರ್ಖಂಡ್ ರಾಜ್ಯ ಕೂಡ ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಹರಿದ್ವಾರದಲ್ಲಿನ ಮೂರು ಮಾಂಸದಂಗಡಿಗೆ ಬೀಗ ಜಡಿಯಲಾಗಿದ್ದು, ರಾಯ್ ಪುರದಲ್ಲಿ 11 ಹಾಗೂ ಇಂದೋರ್ ನ 1 ಅಕ್ರಮ ಕಸಾಯಿಖಾನೆ ಬಂದ್ ಮಾಡುವಂತೆ ಸೂಚಿಸಲಾಗಿದೆ.
ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಜೈಪುರದಲ್ಲಿ ಅಂದಾಜು 4 ಸಾವಿರ ಅಕ್ರಮ ಕಸಾಯಿಖಾನೆ ಬಂದ್ ನ ಭೀತಿಗೆ ಸಿಲುಕಿರುವುದಾಗಿ ತಿಳಿಸಿದೆ. ಏಪ್ರಿಲ್ ನಿಂದ ಅಕ್ರಮ ಕಸಾಯಿ ಖಾನೆಗಳನ್ನು ಬಂದ್ ಮಾಡುವುದಾಗಿ ಜೈಪುರ್ ಮುನ್ಸಿಪಲ್ ಕಾರ್ಪೋರೇಷನ್ ಘೋಷಿಸಿದೆ. ಆದರೆ 2016ರ ಮಾರ್ಚ್ 31ರ ನಂತರ ಜೈಪುರ್ ಮುನ್ಸಿಪಲ್ ಕಾರ್ಪೋರೇಷನ್ ಯಾವುದೇ ಹೊಸ ಲೈಸೆನ್ಸ್ ಅನ್ನು ಕೊಡಲೂ ಇಲ್ಲ, ನವೀಕರಿಸಲೂ ಇಲ್ಲ ಎಂದು ಮಾಂಸದ ಅಂಗಡಿ ವ್ಯಾಪಾರಿಗಳು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.