ತ್ರಿವಳಿ ತಲಾಖ್‌ ವಿಚಾರಣೆ ಸಂವಿಧಾನ ಪೀಠಕ್ಕೆ ವರ್ಗ


Team Udayavani, Mar 31, 2017, 3:02 AM IST

Muslim-Womens-600.jpg

ಹೊಸದಿಲ್ಲಿ: ಮುಸ್ಲಿಮರಲ್ಲಿ ಜಾರಿಯಲ್ಲಿರುವ ತ್ರಿವಳಿ ತಲಾಖ್‌, ನಿಕಾಹ್‌ ಹಲಾಲಾ ಮತ್ತು ಬಹುಪತ್ನಿತ್ವ ಪದ್ಧತಿಗೆ ಸಂಬಂಧಿಸಿದ ವಿಚಾರಣೆ ಇದೀಗ ಸಂವಿಧಾನ ಪೀಠಕ್ಕೆ ವರ್ಗವಾಗಿದೆ. ‘ಇದು ಭಾವನೆಗಳಿಗೆ ಸಂಬಂಧಿಸಿದ ವಿಷಯವಾಗಿದ್ದು, ಇದನ್ನು ವಿಸ್ತೃತವಾಗಿ ವಿಚಾರಣೆ ನಡೆಸಬೇಕಾದ ಅಗತ್ಯವಿದೆ. ಹೀಗಾಗಿ, ಅರ್ಜಿಗಳನ್ನು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿಧಾನ ಪೀಠಕ್ಕೆ ವರ್ಗಾಯಿಸಲಾಗುವುದು. ಮೇ 11ರಿಂದ ಪೀಠವು ವಿಚಾರಣೆ ಆರಂಭಿಸಲಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಜೆ. ಎಸ್‌. ಖೇಹರ್‌ ಹಾಗೂ ನ್ಯಾ| ಡಿ. ವೈ. ಚಂದ್ರಚೂಡ್‌ ಅವರನ್ನೊಳಗೊಂಡ ಪೀಠ ಗುರುವಾರ ಹೇಳಿದೆ. ‘ಇದನ್ನು ನಾವು ಈಗ ತೀರ್ಮಾನಿಸದೇ ಇದ್ದರೆ, ಎಷ್ಟು ವರ್ಷಗಳು ಕಳೆದರೂ ಇದು ಹಾಗೆಯೇ ಉಳಿಯುತ್ತದೆ. ಹಾಗಾಗಿ, ಅರ್ಜಿಗಳನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುತ್ತಿದ್ದೇವೆ. ಮೇ 11ರ ಬಳಿಕ ಬೇಸಗೆ ರಜೆಯಲ್ಲಿ ಶನಿವಾರ, ರವಿವಾರವೂ ವಿಚಾರಣೆ ನಡೆಸಲು ಸಿದ್ಧ’ ಎಂದು ಹೇಳಿದೆ.

ತಲಾಖ್‌, ಬಹುಪತ್ನಿತ್ವ, ನಿಕಾಹ್‌ ಹಲಾಲಾವನ್ನು (ವಿಚ್ಛೇದಿತ ಪತ್ನಿ ಮತ್ತೆ ಆತನನ್ನೇ ಪತಿಯನ್ನಾಗಿ ಸ್ವೀಕರಿಸಬೇಕಿದ್ದರೆ, ಬೇರೊಬ್ಬನನ್ನು ಮರುಮದುವೆಯಾಗಿ ಆತನಿಗೆ ವಿಚ್ಛೇದನ ನೀಡಿದ ಬಳಿಕವೇ ಮಾಜಿ ಪತಿಯನ್ನು ವರಿಸುವ ಪದ್ಧತಿ) ಪ್ರಶ್ನಿಸಿ ಕೆಲವು ಮುಸ್ಲಿಂ ಮಹಿಳೆಯರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಅದರಂತೆ, ನ್ಯಾಯಾಲಯವು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಆದರೆ, ಇದನ್ನು ವಿರೋಧಿಸಿದ್ದ ಅಖೀಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು, ಶರಿಯಾ ಕಾನೂನಿನಲ್ಲಿರುವ ಈ ಪದ್ಧತಿಗಳ ವಿಚಾರದಲ್ಲಿ ನ್ಯಾಯಾಂಗ ಹಸ್ತಕ್ಷೇಪ ಸಲ್ಲ ಎಂದಿತ್ತು. ತ್ರಿವಳಿ ತಲಾಖ್‌ ಸಹಿತ ವಿವಾದಾತ್ಮಕ ಪದ್ಧತಿಯಲ್ಲಿನ ಕಾನೂನಾತ್ಮಕ ವಿಚಾರಗಳನ್ನಷ್ಟೇ ನಾವು ಪರಿಗಣಿಸಿ, ತೀರ್ಪು ನೀಡುತ್ತೇವೆ. ಇತರ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಈ ಹಿಂದೆಯೇ ನ್ಯಾಯಾಲಯ ತಿಳಿಸಿತ್ತು.

ಟಾಪ್ ನ್ಯೂಸ್

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

IFFI: ಪಾಪ್‌ ಸಂಗೀತಗಾರ ರಾಬಿ ವಿಲಿಯಮ್ಸ್‌ ಬೆಟರ್‌ ಮ್ಯಾನ್‌ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ

IFFI: ಪಾಪ್‌ ಸಂಗೀತಗಾರ ರಾಬಿ ವಿಲಿಯಮ್ಸ್‌ ಬೆಟರ್‌ ಮ್ಯಾನ್‌ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

5

Sullia: ಆಡುಮರಿಯನ್ನು ಅಮಾನುಷವಾಗಿ ಎಳೆದೊಯ್ದ ಬಗ್ಗೆ ದೂರು

crimebb

Kasaragod ಅಪರಾಧ ವಾರ್ತೆ; ಆನೆಯ ತುಳಿತಕ್ಕೆ ಮಾವುತ ಸಹಿತ ಇಬ್ಬರ ಸಾವು

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Arrest

Kasaragod: ವಂದೇ ಭಾರತ್‌ಗೆ ಕಲ್ಲೆಸೆತ, ಹಳಿಯಲ್ಲಿ ಕಲ್ಲಿರಿಸಿದ ಇಬ್ಬರ ಬಂಧನ

ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.