ಬಿಎಂಟಿಎಫ್ ಅಧಿಕಾರ ವ್ಯಾಪ್ತಿ ಪ್ರಶ್ನಿಸಿದ ಕೋರ್ಟ್
Team Udayavani, Mar 31, 2017, 12:07 PM IST
ಬೆಂಗಳೂರು: ಬಿಬಿಎಂಪಿ ದ್ವಿತೀಯ ದರ್ಜೆ ಸಹಾಯಕ ಮಾಯಣ್ಣ ವಿರುದ್ಧದ 68 ಕೋಟಿ ಅವ್ಯವಹಾರ ಪ್ರಕರಣದ ತನಿಖೆಗೆ ನೀಡಲಾಗಿರುವ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಪ್ರಕರಣ ಸಂಬಂಧ ಬಿಎಂಟಿಎಫ್ ತನಿಖೆಗೆ ನೀಡಲಾಗಿರುವ ಅಧಿಸೂಚನೆಯನ್ನು ಒದಗಿಸಿ ಎಂದು ತಾಕೀತು ಮಾಡಿದೆ.
ಬಿಬಿಎಂಪಿ ಕಾಮಗಾರಿಗಳಲ್ಲಿ ನಡೆದಿರುವ 168 ಕೋಟಿ ರೂ ಅವ್ಯವಹಾರದ ಪೈಕಿ, ದ್ವಿತೀಯ ದರ್ಜೆ ಸಹಾಯಕ ಮಾಯಣ್ಣ ಒಬ್ಬರೇ 68 ಕೋಟಿ ರೂ ಅವ್ಯವಹಾರ ನಡೆಸಿದ್ದಾರೆ ಎಂದು ರಾಬರ್ಟ್ ಎಂಬುವವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಗುರುವಾರ ನಡೆಯಿತು.
ಈ ಅರ್ಜಿ ವಿಚಾರಣೆ ವೇಳೆ ದೂರುದಾರ ರಾಬರ್ಟ್ ಪರ ವಕೀಲ ಶ್ರೀನಿವಾಸ್, ಬಿಬಿಎಂಪಿ ವ್ಯಾಪ್ತಿಯ 198 ವಾರ್ಡುಗಳಲ್ಲಿ 2012ರಿಂದ 2016ರವರೆಗಿನ ಅವಧಿಯಲ್ಲಿ ಪ್ರಮುಖ ರಸ್ತೆಗಳ ಕಾಮಗಾರಿಯಲ್ಲಿ 138 ಕೋಟಿ ಅವ್ಯವಹಾರ ನಡೆದಿರುವ ಆರೋಪವಿದೆ. ಈ ಹಗರಣದ ಆರೋಪಿ ಮಾಯಣ್ಣ 68 ಕೋಟಿ ಅವ್ಯವಹಾರ ನಡೆಸಿರುವುದು ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ. ಈ ಸಂಬಂಧ ಬಿಎಂಟಿಎಫ್ ತನಿಖೆ ನಡೆಸುತ್ತಿದೆ ಎಂದು ವಿವರಿಸಿದರು.
ಈ ವಾದ ಆಲಿಸಿದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠ , ಪ್ರಕರಣದ ತನಿಖೆಗೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿತು. ಅಲ್ಲದೆ ಬಿಎಂಟಿಎಫ್ಗೆ ಇರುವ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿರುವ ಅಧಿಕಾರ ವ್ಯಾಪ್ತಿಯನ್ನು ಮುಂದಿನ ವಿಚಾರಣೆ ವೇಳೆ ತಿಳಿಸಬೇಕು ಎಂದು ಸರ್ಕಾರದಪರ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಏಪ್ರಿಲ್ 3ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.