ಘರ್ಷಣೆಗೆ ತಿರುಗಿದ ಕ್ಷುಲ್ಲಕ ಜಗಳ

Team Udayavani, Mar 31, 2017, 12:46 PM IST

dvg3.jpg

ದಾವಣಗೆರೆ: ಯುವಕರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ, ಗುಂಪುಗಳ ನಡುವಿನ ಘರ್ಷಣೆಗೆ ತಿರುಗಿದ ಘಟನೆ ವಿದ್ಯಾನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಪಾಮೇನಹಳ್ಳಿ- ದಾವಣಗೆರೆ ಪಾಲಿಕೆಯ ಶ್ರೀರಾಮ ನಗರದ ಹುಡುಗರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೇ ಇದೀಗ ಗುಂಪು ಘರ್ಷಣೆಗೆ ಕಾರಣವಾಗಿದೆ. 

ಪಾಮೇನಹಳ್ಳಿ ಗ್ರಾಮದ ವೆಂಕಟೇಶ್‌ ಪೂಜಾರ್‌(32) ಎಂಬ ಯುವಕ ಬ ಶ್ರೀರಾಮ ನಗರದ ಲೋಕಿಕೆರೆಯ ಬಂಕ್‌ನಲ್ಲಿ ಪೆಟ್ರೋಲ್‌ ಹಾಕಿಸಿಕೊಂಡು ಬರಲು ಹೋದಾಗ ಶ್ರೀರಾಮ ನಗರದ ಹರೀಶ್‌ ಮತ್ತವರ ಬೆಂಬಲಿಗರು ವೆಂಕಟೇಶ್‌ ಮೇಲೆ ಹಲ್ಲೆ ಮಾಡಿದ್ದರು. ಪ್ರತಿಯಾಗಿ ಗ್ರಾಮಸ್ಥರು ಗುಂಪು ಕಟ್ಟಿಕೊಂಡು ಹನುಮಂತಪ್ಪ ಮತ್ತು ಆತನ ಸ್ನೇಹಿತರ ಮೇಲೆ ಹಲ್ಲೆಮಾಡಿದ್ದಾರೆ ಎಂಬುದು ಎರಡೂ ಕಡೆಗಳಿಂದ ದೂರು ನೀಡಲಾಗಿದೆ. 

ವೆಂಕಟೇಶ್‌ ಪೆಟ್ರೋಲ್‌ ಹಾಕಿಸಿಕೊಳ್ಳಲು ಹೋದಾಗ ಹರೀಶ್‌ ಮತ್ತು ಹನುಮಂತ ಎಂಬುವರು ವೆಂಕಟೇಶ್‌ನನ್ನು ತಡೆದು, ಏನ್ನಾನದರೂ ಕೊಡಿಸುವಂತೆ ಕೇಳಿದ್ದಾರೆ. ಆಗ ವೆಂಕಟೇಶ್‌ 100 ರೂಪಾಯಿ ಕೊಡಲು ಮುಂದಾಗಿದ್ದಾನೆ. ಇದರಿಂದ ಕುಪಿತರಾದ ಹರೀಶ್‌ ಮತ್ತು ಹನುಮಂತ ವೆಂಕಟೇಶ್‌ ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. 

ಅದೇ ವೇಳೆಗೆ ಸ್ಥಳಕ್ಕೆ ಬಂದ ಹರೀಶ್‌ನ ಸ್ನೇಹಿತರಾದ ಸಂತೋಷ್‌ ಅಲಿಯಾಸ್‌ ಚಾಕಲೇಟ್‌ ಸಂತ, ಅನಿಲ್‌, ಬೀರೇಶ್‌ ಇನ್ನೋರ್ವ ಅಪರಿಚಿತ ಯುವಕ ಸೇರಿ ಹಲ್ಲೆಮಾಡಿದ್ದಾರೆಂದು ವೆಂಕಟೇಶ್‌ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ. ಹನುಮಂತನ ಕಡೆಯವರು ಇನ್ನೊಂದು ದೂರು ದಾಖಲಿಸಿದ್ದು, ಅದರ ಅನ್ವಯ ಹರೀಶ್‌ ಮತ್ತು ಪೂಜಾರ್‌ ವೆಂಕಟೇಶ್‌ ಜಗಳಮಾಡುತ್ತಿದ್ದಾಗ ಹನುಮಂತ ಮತ್ತು ಸ್ನೇಹಿತ ಬೀರೇಶ್‌ ಜಗಳ ಬಿಡಿಸಿದ್ದರಂತೆ.

ವೆಂಕಟೇಶ್‌ ಜಗಳದ ಜಾಗದಿಂದ ತನ್ನೂರು ಪಾಮೇನಹಳ್ಳಿಗೆ ಹೋಗಿ ನಾಗರಾಜ, ಮಂಜುನಾಥ, ಪ್ರಭು, ರಮೇಶ್‌, ರಘು, ಪೂಜಾರ ಮಂಜುನಾಥ, ವೆಂಕಟೇಶ, ಆಟೋ ಬಸವರಾಜ ಸೇರಿದಂತೆ ಸುಮಾರು 40 ಜನ ಹನುಮಂತ ಮತ್ತು ಬೀರೇಶ್‌ ಮೇಲೆ ಹಲ್ಲೆಮಾಡಿದ್ದಾರೆ ಎಂದು ಹೇಳಲಾಗಿದೆ. 

ಟಾಪ್ ನ್ಯೂಸ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.