ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 24,712 ವಿದ್ಯಾರ್ಥಿಗಳು
Team Udayavani, Mar 31, 2017, 12:48 PM IST
ದಾವಣಗೆರೆ: ಜಿಲ್ಲೆಯ 87 ಕೇಂದ್ರದಲ್ಲಿ ಗುರುವಾರ ದಿಂದ ಪ್ರಾರಂಭವಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ದಿನ ಪ್ರಥಮ ಭಾಷೆ ವಿಷಯ (ಕನ್ನಡ, ಸಂಸ್ಕೃತ ಮತ್ತು ಉರ್ದು)ದಲ್ಲಿ ಒಟ್ಟು 24,712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ದಾವಣಗೆರೆಯ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ 37 ಕಿವುಡ ಮತ್ತು ಮೂಗ ಮಕ್ಕಳು, ಒಬ್ಬರು ವಿಶೇಷಚೇತನ ವಿದ್ಯಾರ್ಥಿ ಹಾಗೂ ದುರ್ಗಾಂಬಿಕಾ ಅಂಧತ್ವ ಶಾಲೆಯ ಅಂಧ ಮಕ್ಕಳು ಸೇರಿದಂತೆ 24,712 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಪರೀಕ್ಷಾ ಅವ್ಯವಹಾರ ನಡೆದಿಲ್ಲ.
ಚನ್ನಗಿರಿ ತಾಲೂಕಿನಲ್ಲಿ 1,979 ಗಂಡು, 2,092 ಹೆಣ್ಣು ಮಕ್ಕಳು ಸೇರಿ ಒಟ್ಟು 4,071 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 136 ಗಂಡು, 61 ಹೆಣ್ಣು ಮಕ್ಕಳು ಒಟ್ಟು 197 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. 3,874 ವಿದ್ಯಾರ್ಥಿಗಳು ಹಾಜರಾಗಿದ್ದರು.
ದಾವಣಗೆರೆ ದಕ್ಷಿಣದಲ್ಲಿ 3,259 ಗಂಡು, 3192 ಹೆಣ್ಣು ಮಕ್ಕಳು ಸೇರಿ ಒಟ್ಟು 6,451 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, 170ಗಂಡು, 62 ಹೆಣ್ಣು ಮಕ್ಕಳು ಸೇರಿ ಒಟ್ಟು 232 ವಿದ್ಯಾರ್ಥಿಗಳು ಗೈರಾಗಿದ್ದರು. 6,219 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ದಾವಣಗೆರೆ ಉತ್ತರದಲ್ಲಿ 1,675 ಗಂಡು, 1,564 ಹೆಣ್ಣುಮಕ್ಕಳು ಸೇರಿ ಒಟ್ಟು 3,239 ನೋಂದಣಿ ಮಾಡಿಸಿದ್ದರು, 79 ಗಂಡು, 54 ಹೆಣ್ಣುಮಕ್ಕಳು ಒಳಗೊಂಡಂತೆ ಒಟ್ಟು 133 ವಿದ್ಯಾರ್ಥಿಗಳು ಗೈರಾಗಿದ್ದರು. 3,106 ವಿದ್ಯಾರ್ಥಿಗಳು ಹಾಜರಾಗಿದ್ದರು.
ಹರಿಹರ ತಾಲೂಕಿನಲ್ಲಿ 1,700 ಗಂಡು, 1,651 ಹೆಣ್ಣು ಮಕ್ಕಳು ಒಳಗೊಂಡಂತೆ ಒಟ್ಟು 3,351 ನೋಂದಣಿಯಾಗಿದ್ದು, 87 ಗಂಡು, 66 ಹೆಣ್ಣು ಮಕ್ಕಳು ಸೇರಿ ಒಟ್ಟು 153 ವಿದ್ಯಾರ್ಥಿಗಳು ಗೈರಾಗಿದ್ದರು. 3,198 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಹೊನ್ನಾಳಿ ತಾಲೂಕಿನಲ್ಲಿ 1,317 ಗಂಡು, 1,411 ಹೆಣ್ಣು ಮಕ್ಕಳು ಒಳಗೊಂಡಂತೆ ನೋಂದಣಿಯಾಗಿದ್ದ ಒಟ್ಟು 2,728 ವಿದ್ಯಾರ್ಥಿಗಳಲ್ಲಿ 40 ಗಂಡು, 34 ಹೆಣ್ಣುಮಕ್ಕಳು ಸೇರಿ ಒಟ್ಟು 74 ವಿದ್ಯಾರ್ಥಿಗಳು ಗೈರಾಗಿದ್ದರು. 2,654 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಹರಪನಹಳ್ಳಿ ತಾಲೂಕಿನಲ್ಲಿ 1,995 ಗಂಡು, 1,733 ಹೆಣ್ಣುಮಕ್ಕಳು ಒಳಗೊಂಡಂತೆ ಒಟ್ಟು 3,728 ವಿದ್ಯಾರ್ಥಿಗಳು ನೋಂದಣಿಯಾಗಿದ್ದು 157 ಗಂಡು, 78 ಹೆಣ್ಣುಮಕ್ಕಳು ಸೇರಿ ಒಟ್ಟು 235 ವಿದ್ಯಾರ್ಥಿಗಳು ಗೈರಾಗಿ, 3,493 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಜಗಳೂರು ತಾಲೂಕಿನಲ್ಲಿ 1,129 ಗಂಡು, 1,132 ಹೆಣ್ಣುಮಕ್ಕಳು ಸೇರಿ ಒಟ್ಟು 2,261 ನೋಂದಣಿಯಾಗಿದ್ದವರಲ್ಲಿ 46 ಗಂಡು, 47 ಹೆಣ್ಣುಮಕ್ಕಳು ಒಳಗೊಂಡಂತೆ ಒಟ್ಟು 93 ವಿದ್ಯಾರ್ಥಿಗಳು ಗೈರಾಗಿದ್ದರು. 2,168 ವಿದ್ಯಾರ್ಥಿಗಳು ಹಾಜರಾಗಿದ್ದರು.
ಎಲ್ಲಾ ಕಡೆ ಶಾಂತಿಯುತವಾಗಿ ಪರೀಕ್ಷೆ ನಡೆದಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಎಚ್. ಎಂ. ಪ್ರೇಮಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.