ಎ. 2: ಪ್ರಥಮ ಹಂತದ ಪಲ್ಸ್‌ ಪೋಲಿಯೊ


Team Udayavani, Mar 31, 2017, 2:22 PM IST

Z-DC-MEETING-1.jpg

ಮಡಿಕೇರಿ: ಪ್ರಥಮ ಹಂತದ ಪಲ್ಸ್‌ ಪೋಲಿಯೊ ಕಾರ್ಯಕ್ರಮ ಎ. 2ರಂದು ನಡೆಯಲಿದ್ದು, ಶೇಕಡಾವಾರು ಯಶಸ್ಸಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬಂದಿಗಳು, ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜಾ ಅವರು ಮನವಿ ಮಾಡಿದ್ದಾರೆ.  
               
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಲ್ಸ್‌ ಪೊಲೀಯೊ ಕಾರ್ಯಕ್ರಮದ ಸಿದ್ಧತೆ ಬಗ್ಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಅಗತ್ಯ ಕ್ರಮಕ್ಕೆ ಸೂಚನೆ ನೀಡಿದರು.  
    
ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್‌ ಪೊಲೀಯೊ ವನ್ನು ಕಡ್ಡಾಯವಾಗಿ ಹಾಕಬೇಕು. ಕೊಡಗು ಜಿಲ್ಲೆಯಿಂದ ಹೊರ ಹೋಗುವ ಹಾಗೂ ಬರುವ ವಲಸೆ ಮಕ್ಕಳು, ಜೊತೆಗೆ ಕಳೆದ ಬಾರಿ ಪಲ್ಸ್‌ ಪೊಲೀಯೊದಿಂದ ಹೊರಗುಳಿದ ಮಕ್ಕಳನ್ನು ಗುರ್ತಿಸಿ ಪಲ್ಸ್‌ ಪೊಲೀಯೊ ಹನಿ ಹಾಕಬೇಕು. ಹಾಗೆಯೇ ಜಿಲ್ಲೆಯ ಜನ ದಟ್ಟಣೆ ಇರುವ ಪ್ರದೇಶಗಳಲ್ಲಿ ತಂಡ ರಚಿಸಿ ಪಲ್ಸ್‌ ಪೊಲೀಯೊ ಹನಿ ಹಾಕುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಧಿಕಾರಿ ನಿರ್ದೇಶನ ನೀಡಿದರು.   

ಜಿಲ್ಲೆಯಲ್ಲಿ ಅಲ್ಲಲ್ಲಿ ಮನೆಗಳು ಇರುವುದರಿಂದ ಮತ್ತು ಕುಗ್ರಾಮಗಳಿಗೆ ಪಲ್ಸ್‌ ಪೊಲೀಯೊ ಪೂರೈಕೆ ಮಾಡಲು ಅಗತ್ಯ ವಾಹನಗಳನ್ನು ಒದಗಿಸಬೇಕು. ಜತೆಗೆ ಪೊಲೀಯೊ ಲಸಿಕೆ ಹಾಳಾಗದಂತೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ನಿರಂತರವಾಗಿ ವಿದ್ಯುತ್‌ ಪೂರೈಕೆ ಮಾಡುವಂತೆ ತಿಳಿಸಿದರು.
ಜಿ.ಪಂ. ಸಿಇಒ ಚಾರುಲತಾ ಸೋಮಲ್‌ ಅವರು ಮಾತ ನಾಡಿ, ಪಲ್ಸ್‌ ಪೊಲೀಯೊ ಜಿಲ್ಲೆಯಲ್ಲಿ ಯಶಸ್ವಿಯಾಗಲು ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಿ ಕಾರ್ಯ ನಿರ್ವಹಿಸಬೇಕೆಂದರು. 
      
ಜಿಲ್ಲೆಯ ವಿವಿಧ ಹಾಡಿಗಳು, ವಲ್ನರೆ‌ಬಲ್‌ ಪ್ರದೇಶ, ಲೈನ್‌ಮನೆಗಳು ಹಾಗೂ ಜನದಟ್ಟಣೆ ಪ್ರದೇಶಗಳಿಗೆ ತೆರಳಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿ ಹಾಕಬೇಕು ಎಂದು ಜಿ.ಪಂ. ಸಿಇಒ ಸಲಹೆ ನೀಡಿದರು. 
  
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್‌ಸಿಎಚ್‌ ಅಧಿಕಾರಿ ಡಾ| ನಿಲೇಶ್‌ ಅವರು ಜಿಲ್ಲೆಯಲ್ಲಿ ಒಟ್ಟು 5,76,086 ಜನಸಂಖ್ಯೆ ಇದ್ದು, ಇವರಲ್ಲಿ 54,735 ಮಂದಿ ನಗರ/ಪಟ್ಟಣ ಪ್ರದೇಶದಲ್ಲಿ ಮತ್ತು 5,21,351 ಗ್ರಾಮೀಣ ಪ್ರದೇಶದಲ್ಲಿ ಜನಸಂಖ್ಯೆ ಇದ್ದಾರೆ. ಇವರಲ್ಲಿ 5 ವರ್ಷದೊಳಗಿನ 45,650 ಮಕ್ಕಳು ಜಿಲ್ಲೆಯಲ್ಲಿದ್ದು, ಇವರಲ್ಲಿ 4,678 ನಗರ ಮತ್ತು 40,972 ಗ್ರಾಮೀಣ ಪ್ರದೇಶದ ಮಕ್ಕಳಿದ್ದಾರೆ. ಹಾಗೆಯೇ ಜಿಲ್ಲೆಯಲ್ಲಿ 2,15,598 ವಲಸಿಗ ಜನಸಂಖ್ಯೆ ಇದ್ದು, ಇವರಲ್ಲಿ 17,660 ಐದು ವರ್ಷದೊಳಗಿನ ಮಕ್ಕಳು ಇದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ 1,24,004 ಕುಟುಂಬಗಳಿವೆ ಎಂದು ತಿಳಿಸಿದರು.

ಪಲ್ಸ್‌ ಪೊಲೀಯೊ ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತ ಒಟ್ಟು 462 ಬೂತ್‌ಗಳನ್ನು ತೆರೆಯಲಾಗಿದೆ. ಅಲ್ಲದೆ 20 ಟ್ರಾನ್ಸಿಸ್ಟ್‌ ತಂಡಗಳು, 6 ಸಂಚಾರಿ ಲಸಿಕಾ ತಂಡ ವ್ಯವಸ್ಥೆ ಮಾಡಲಾಗಿದೆ. 1900 ಮಂದಿ ಲಸಿಕೆ ಹಾಕುವವರು, 90 ಮಂದಿ ಮೇಲ್ವಿಚಾರಕರು, 924 ಮನೆ ಮನೆಗೆ ಭೇಟಿ ನೀಡುವ ತಂಡವನ್ನು ರಚಿಸಲಾಗಿದೆ. ಎರಡು ದಿನ (ಗ್ರಾಮಾಂತರ) ಮೂರು ದಿನ (ಪಟ್ಟಣ ಪ್ರದೇಶ) ಮನೆ ಭೇಟಿ ನೀಡಿ ಪೋಲಿಯೊ ಹನಿ ಹಾಕಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. 
  
ಜಿಲ್ಲೆಯ ಮಡಿಕೇರಿ ತಾಲೂಕಿನ ಭಾಗಮಂಡಲ, ಚೇರಂ ಬಾಣೆ, ಸಂಪಾಜೆ, ಮಡಿಕೇರಿ ನಗರದ ಖಾಸಗಿ ಬಸ್‌ ನಿಲ್ದಾಣ, ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣ, ಜನರಲ್‌ ಕೆ.ಎಸ್‌. ತಿಮ್ಮಯ್ಯ ವೃತ್ತ, ರಾಜಾಸೀಟು, ಸೋಮವಾರಪೇಟೆ ತಾಲೂಕಿನ ಸೋಮವಾರಪೇಟೆ ಖಾಸಗಿ ಬಸ್‌ ನಿಲ್ದಾಣ, ಕುಶಾಲನಗರದ ಖಾಸಗಿ ಬಸ್‌ ನಿಲ್ದಾಣ, ಕೆ.ಎಸ್‌.ಆರ್‌.ಟಿ. ಬಸ್‌ ನಿಲ್ದಾಣ, ನಿಸರ್ಗಧಾಮ, ಕೊಡ್ಲಿಪೇಟೆ ಬಸ್‌ ನಿಲ್ದಾಣ, ಶನಿವಾರಸಂತೆ ಬಸ್‌ ನಿಲ್ದಾಣ. ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪ ಬಸ್‌ ನಿಲ್ದಾಣ, ಮಾಕುಟ್ಟ, ಕುಟ್ಟ ಗೇಟ್‌, ತಿತಿಮತಿ ಆನೆ ಚೌಕೂರು ಗೇಟ್‌, ಮಾಲ್ದಾರೆ ಗೇಟ್‌, ಅಮ್ಮತ್ತಿ ಬಸ್‌ ನಿಲ್ದಾಣ, ಸಿದ್ದಾಪುರ ಬಸ್‌ ನಿಲ್ದಾಣಗಳಲ್ಲಿ ಟ್ರಾನ್ಸಿಸ್ಟ್‌ ತಂಡವನ್ನು ನಿಯೋಜಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಒ.ಆರ್‌. ಶ್ರೀರಂಗಪ್ಪ ಅವರು ಜಿಲ್ಲಾ ಸರ್ಜನ್‌ ಡಾ| ಅಜೀಜ್‌, ಸಾರಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ನಗರ ಸಭೆ ಹೀಗೆ ನಾನಾ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

1-shaa

Success ನಿಮ್ಮನ್ನು ಪ್ರತ್ಯೇಕಿಸಲು ಮತ್ತು ವೈಫಲ್ಯಕ್ಕೆ ಕಾರಣವಾಗಬಹುದು: ಶಾರುಖ್ ಖಾನ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Kasaragod: ಕೇರಳದಿಂದ ಕರ್ನಾಟಕಕ್ಕೆ ಪಲಾಯನಗೊಂಡಿದ್ದ ನಕ್ಸಲರು

police

Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು

Court-1

Kasaragod: ಪಟಾಕಿ ದುರಂತ; ಜಾಮೀನು ರದ್ದಿಗೆ ತಡೆಯಾಜ್ಞೆ

crimebb

Kasaragod ಅಪರಾಧ ವಾರ್ತೆ; ಆನೆಯ ತುಳಿತಕ್ಕೆ ಮಾವುತ ಸಹಿತ ಇಬ್ಬರ ಸಾವು

Arrest

Kasaragod: ವಂದೇ ಭಾರತ್‌ಗೆ ಕಲ್ಲೆಸೆತ, ಹಳಿಯಲ್ಲಿ ಕಲ್ಲಿರಿಸಿದ ಇಬ್ಬರ ಬಂಧನ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.