ಬಿಆರ್‌-ಗುತ್ತೇದಾರ ಒಂದೇ ನಾಣ್ಯದ ಎರಡು ಮುಖ


Team Udayavani, Mar 31, 2017, 2:59 PM IST

gul2.jpg

ಆಳಂದ: ಕ್ಷೇತ್ರದ ಅಭಿವೃದ್ಧಿಗೆ ಭ್ರಷ್ಟರಿಗೆ ಪಾಠಕಲಿಸಿದರೆ ಆಳಾಗಿ ದುಡಿಯುತ್ತೇನೆ ಎಂದು ಜೆಡಿಎಸ್‌ ಮುಖಂಡ ಸೂರ್ಯಕಾಂತ ಕೊರಳ್ಳಿ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ದೂರದೃಷ್ಟಿಕೋನ ಹೊಂದದೆ ಹಾಗೂ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳದೆ ಚುನಾವಣೆ ಬಂದಾಗಲೊಮ್ಮೆ ಜನತೆಗೆ ಮೋಸ ಮಾಡಿ ನಾನೊಮ್ಮೆ, ನೀನೊಮ್ಮೆ ಎಂದು ಅಧಿಕಾರಕ್ಕೆ ಬರುತ್ತಿರುವ ಶಾಸಕ ಬಿ.ಆರ್‌. ಪಾಟೀಲ ಮತ್ತು ಮಾಜಿ ಶಾಸಕ ಸುಭಾಷ ಗುತ್ತೇದಾರ ಒಂದೇ ನಾಣ್ಯದ ಎರಡು ಮುಖವಿದ್ದಂತೆ ಎಂದು ಟೀಕಿಸಿದರು. 

ತಾಲೂಕಿನಲ್ಲಿ ಮದ್ಯಮಾರಾಟ ಬಂದ್‌ ಮಾಡುತ್ತೇನೆ. ನೂರಾರು ಕೆರೆ ಕಟ್ಟಿ ಹಸಿರು ಕ್ರಾಂತಿ ಮಾಡುತ್ತೇನೆ ಎಂದು ಹೇಳಿ ಅಧಿಕಾರಕ್ಕೆ ಬಂದ ಮೇಲೆ ಇದ್ಯಾವುದನ್ನು ಮಾಡದೆ ರಸ್ತೆಯ ಮೇಲೆ ನಾಟಕೀಯವಾಗಿ ಪ್ರತಿಭಟನೆ, ಹೇಳಿಕೆ, ಕೇಳಿಕೆ ಮಾಡುತ್ತಲೆ ಶಾಸಕರು ಜನತೆಯನ್ನು ಮರಳು ಮಾಡುತ್ತಿದ್ದಾರೆ.

ವಾಸ್ತವ್ಯದಲ್ಲಿ ಯಾವ ಅಭಿವೃದ್ಧಿ ಆಗಿದೆ ಎಂದು ಪ್ರಶ್ನಿಸಿದರು. ಸರ್ಕಾರದಿಂದ ರಸ್ತೆ, ನೀರು, ಶಾಲೆ, ಕಟ್ಟಡಗಳಿಗೆ ಯಾರಿದ್ದರೂ ಅನುದಾನ ಬಂದೇ  ಬರುತ್ತದೆ. ಇದನ್ನು ನಾನೆ ಮಾಡಿಸಿದ್ದೇನೆ, ನಾನೇ ತಂದಿದ್ದೇನೆ ಎಂದು ನಿತ್ಯ ಗುದ್ದಲಿ ಪೂಜೆ ಮಾಡುತ್ತಾ ಹೋದರೆ ಯಾವ ಪುರುಷಾರ್ಥ ಎಂದು ಪ್ರಶ್ನಿಸಿದರು. 

15 ವರ್ಷ  ಆಳ್ವಿಕೆ ಮಾಡಿದ ಮಾಜಿ ಶಾಸಕ ಸುಭಾಷ ಗುತ್ತೇದಾರ ತಾಕತ್ತಿದ್ದರೆ ಸಾರಾಯಿ ಮಾರಾಟ ಬಂದ್‌ ಮಾಡಿ ಎನ್ನುತ್ತಾರೆ. ಇದರರ್ಥ ಏನು? ಜನ ಜಾಣರಾಗಿದ್ದಾರೆ. ಯಾರ ಮಾತಿಗೂ ಕಿವಿಗೊಡುವುದಿಲ್ಲ ಎಂದರು. ಇಂಥ ಶಾಸಕರಿಂದ ಜನರ ಉದ್ಧಾರ ಅಸಾಧ್ಯ. ಸೊನ್ನ ಬ್ಯಾರೇಜ್‌ ನಿಂದ ಅಮರ್ಜಾ ಅಣೆಕಟ್ಟೆಗೆ ನೀರು ತರುವ ಕಾರ್ಯಾನುಷ್ಠಾನ ಆಗಬೇಕು. 

ಇದು ಚುನಾವಣೆ ವಿಷಯ ಆಗಬಾರದು. ಅಫಜಲಪುರ ಮಾಜಿ ಶಾಸಕ ಎಂ.ವೈ. ಪಾಟೀಲ ಮತ್ತವರ ಬೆಂಬಲಿಗರು ನೀರು ಕೊಡಲು ವಿರೋಧಿಸುವುದು ಸರಿಯಲ್ಲ ಎಂದು  ಅಭಿಪ್ರಾಯ ವ್ಯಕ್ತಪಡಿಸಿದರು. ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಜಫರ್‌ ಹುಸೇನ ಇದ್ದರು. 

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.