ಪಾಲಿಟೆಕ್ನಿಕ್‌ಗಳಿಂದ ಉದ್ಯೋಗ ಅವಕಾಶ ಹೆಚ್ಚಲಿ


Team Udayavani, Mar 31, 2017, 3:11 PM IST

gul6.jpg

ಕಲಬುರಗಿ: ವಿದ್ಯಾರ್ಥಿಗಳ ಕಲಿಕೆ ಬಳಿಕ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಅಂತಹ ಸಾಮರ್ಥ್ಯ ಇಮ್ಮಡಿಗೊಳಿಸುವ ನಿಟ್ಟಿನಲ್ಲಿ ಎಲ್ಲ ಸರಕಾರಿ ಪಾಲಿಟೆಕ್ನಿಕ್‌ಗಳು 2020ರೊಳಗೆ ಎನ್‌ಬಿಎ (ರಾಷ್ಟ್ರೀಯ ಮಾನ್ಯತಾ ಮಂಡಳಿ) ಸದಸ್ಯತ್ವ ಪಡೆಯಬೇಕು ಎಂದು ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ಜಂಟಿ ನಿರ್ದೇಶಕಿ ರಶ್ಮಿ ಹೇಳಿದರು. 

ಇಲ್ಲಿನ ಪಿಡಿಎ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಗುರುವಾರ ಸರ್ಕಾರಿ ಪಾಲಿಟೆಕ್ನಿಕ್‌ನ ಬೋಧನಾ ಮಾನ್ಯತೆ ಪಡೆದ ಉಪನ್ಯಾಸಕರು ಎನ್ನುವ ವಿಷಯದ ಮೇಲೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಪ್ರಧಾನ ಭಾಷಣಕಾರರಾಗಿ ಅವರು ಮಾತನಾಡಿದರು. ಇಂತಹ ಸದಸ್ಯತ್ವಗಳು, ಸಂಸ್ಥೆಯ ಗುಣಮಟ್ಟ ವರ್ಧನೆ ಉಪಕ್ರಮಗಳ ಹೆಚ್ಚುವಿಕೆಗೆ ಪ್ರೋತ್ಸಾಹಿಸುತ್ತವೆ. 

ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಗುಣಮಟ್ಟ, ಪ್ರಮಾಣ ಎರಡನ್ನು ಸುಧಾರಿಸುತ್ತವೆ. ಪಾಸಾಗುವ ವಿದ್ಯಾರ್ಥಿಗಳ ಉದ್ಯೋಗವಕಾಶಗಳು ಹೆಚ್ಚಾಗುತ್ತದೆ. ಅಲ್ಲದೆ, ಸಂಸ್ಥೆಗೆ ಕೇಂದ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಧನ ಸಹಾಯ ದೊರಕುತ್ತದೆ ಎಂದರು. 

ಇದಕ್ಕೂ ಮುನ್ನ ಕಾರ್ಯಾಗಾರ ಉದ್ಘಾಟಿಸಿದ ರಾಜ್ಯ ಯೋಜನಾ ಸೌಲಭ್ಯಗಳ ಘಟಕದ (ಸ್ಟೇಟ್‌ ಪ್ರೊಜೆಕ್ಟ್ ಫೆಸಿಲಿಟೇಶನ್‌ ಯೂನಿಟ್‌) ವಿಶೇಷ ಅಧಿಕಾರಿ ಪ್ರೊ| ಮನೋಹರ ನಾಯಕ ಮಾತನಾಡಿ, ಕಾಲೇಜುಗಳು ಕಾಲಹರಣ ಮಾಡದೆ, ಕೂಡಲೇ ಎನ್‌ಬಿಎ ಸದಸ್ಯತ್ವ ಪಡೆಯುವ ನಿಟ್ಟಿನಲ್ಲಿ ಸತತ ಪ್ರಯತ್ನ ಮಾಡಬೇಕು. 

ಇದರಿಂದ ಸಂಸ್ಥೆಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು. ಸತೀಶ ಹುದ್ದಾರ, ಎಚ್‌ಕೆಇ ಸಂಸ್ಥೆ ಉಪಾಧ್ಯಕ್ಷ ಸೂರ್ಯಕಾಂತ ಪಾಟೀಲ ಮುಖ್ಯ ಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಚಾರ್ಯ ಡಾ| ಎಸ್‌.ಎಸ್‌.ಆವಂತಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಗಾರದ ಸಂಚಾಲಕರಾದ ಡಾ| ಮಹಾದೇವಪ್ಪ ಗಾದಗೆ, ಡಾ| ಎಸ್‌.ಬಿ.ಪಾಟೀಲ, ವಾಸು, ಗುರು ಹೂಗಾರ ಹಾಜರಿದ್ದರು.

ಕಾಲೇಜಿನ ಡಾ| ಶ್ರೀದೇವಿ ಸೋಮಾ ನಿರೂಪಿಸಿದರು. ಡಾ| ಮಲ್ಲಿಕಾರ್ಜುನ ವಡ್ಡನಕೇರಿ ಪ್ರಾರ್ಥನಾಗೀತೆ ಹಾಡಿದರು. ಡಾ| ಮಹಾದೇವಪ್ಪ ಗಾದಗೆ ಸ್ವಾಗತಿಸಿದರು. ಡಾ| ಎಸ್‌.ಬಿ. ಪಾಟೀಲ ವಂದಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ| ಸಿದ್ದರಾಮ ಆರ್‌.ಪಾಟೀಲ, ಡಾ| ಎ.ಬಿ. ಹರವಾಳಕರ, ಡಾ| ಓಂಪ್ರಕಾಶ ಹೆಬ್ಟಾಳ, ಪ್ರೊ| ಅವಿನಾಶ ಸಾಂಬ್ರಾಣಿ, ಡಾ| ಬಾಬುರಾವ ಶೇರಿಕಾರ ಹಾಜರಿದ್ದರು. 

ಟಾಪ್ ನ್ಯೂಸ್

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.