ಕಾಶ್ಮೀರ : ಸೇನಾ ವಾಹನದ ಮೇಲೆ ಉಗ್ರರ ದಾಳಿ; 3 ಯೋಧರಿಗೆ ಗಾಯ
Team Udayavani, Apr 1, 2017, 4:16 PM IST
ಶ್ರೀನಗರ : ಜಮ್ಮು ಕಾಶ್ಮೀರದ ಶ್ರೀನಗರದಲ್ಲಿನ ಪಾರಿಂಪೋರಾ – ಪಂಥಾಚೌಕ್ ಬೈಪಾಸ್ ನಲ್ಲಿ ಆಸ್ಪತ್ರೆ ಸಮೀಪ ಸಾಗುತ್ತಿದ್ದ ಮಿಲಿಟರಿ ವಾಹನಗಳ ಸಾಲಿನ ಮೇಲೆ ಉಗ್ರರು ಇಂದು ಶನಿವಾರ ಮಧ್ಯಾಹ್ನ 1.15ರ ಹೊತ್ತಿಗೆ ನಡೆಸಿದ ಹೊಂಚು ದಾಳಿಯಲ್ಲಿ ಕನಿಷ್ಠ ಮೂವರು ಯೋಧರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಉಗ್ರರ ದಾಳಿಗೆ ಯೋಧರು ಕೂಡಲೇ ಗುಂಡಿನ ಪ್ರತ್ಯುತ್ತರ ನೀಡಿದ್ದಾರೆ. ಆದರೆ ಎರಡೂ ಕಡೆಗಳಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಪೊಲೀಸ್ ಅಧಿಕಾರಿಯೋರ್ವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬೇಮಿನಾ ದಲ್ಲಿನ ಸ್ಕಿಮ್ಸ್ ಆಸ್ಪತ್ರೆ ಸಮೀಪ ಮಿಲಿಟರಿ ವಾಹನಗಳ ಸಾಲು ಸಾಗುತ್ತಿದ್ದಾಗ ಉಗ್ರರು ನಡೆಸಿದ ಗುಂಡಿನ ದಾಳಿಗೆ ಸಾಲಲ್ಲಿದ್ದ ಕೊನೆಯ ವಾಹನವು ಗುರಿಯಾಯಿತು. ಗಾಯಗೊಂಡ ಮೂವರು ಸೇನಾ ಸಿಬಂದಿಗಳನ್ನು ಒಡನಯೇ ಚಿಕಿತ್ಸೆಗಾಗಿ ಸಮೀಪದ ಸರಕಾರಿ ಆಸ್ಪತ್ರೆಗೆ ಸೇರಿಸಲಾಯಿತು.
ಘಟನೆ ನಡೆದ ಸ್ಥಳವನ್ನು ಭದ್ರತಾ ಪಡೆಗಳು ಎಲ್ಲ ದಿಕ್ಕುಗಳಿಂದ ಸುತ್ತುವರಿದಿದ್ದು ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಸಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
African Elephants: ವಂಟಾರಕ್ಕೆ ಆಗಮಿಸಲಿವೆ ಆಫ್ರಿಕಾದ 3 ಆನೆಗಳು
Tamil Nadu: ನಮಗೆ ಯಾರೇ ಎದುರಾಳಿಯಾದ್ರೂ 2026ರಲ್ಲಿ ಗೆಲ್ಲೋದು ನಾವೇ: ಡಿಸಿಎಂ ಉದಯನಿಧಿ
BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ
Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
MUST WATCH
ಹೊಸ ಸೇರ್ಪಡೆ
BBK-11: ಮತ್ತೆ ಬಿಗ್ ಬಾಸ್ ಮನೆಯ ಕಿಂಗ್ ಮೇಕರ್ ಆದ ಹನುಮಂತು
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚನೆಗೆ ಯತ್ನ
BMTC: ಬಸ್ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ; ಪ್ರಯಾಣಿಕರ ರಕ್ಷಿಸಿದ ನಿರ್ವಾಹಕ!
US Election: ಸೋಲಿನ ಬೆನ್ನಲ್ಲೇ ಭಾಷಣ ರದ್ದುಪಡಿಸಿದ ಕಮಲಾ ಹ್ಯಾರಿಸ್!
African Elephants: ವಂಟಾರಕ್ಕೆ ಆಗಮಿಸಲಿವೆ ಆಫ್ರಿಕಾದ 3 ಆನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.