ಯೋಜಿತ ಗುರಿ, ಛಲದಿಂದ ಯಶಸ್ಸು : ಬಿಷಪ್
Team Udayavani, Apr 2, 2017, 1:08 PM IST
ಮಂಗಳೂರು: ಯೋಜಿತ ಗುರಿ ಮತ್ತು ಅದನ್ನು ಸಾಧಿಸುವ ಛಲವಿದ್ದಾಗ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದು ಮಂಗಳೂರು ಬಿಷಪ್ ಹಾಗೂ ಫಾದರ್ ಮುಲ್ಲರ್ ಸಂಸ್ಥೆಗಳ ಅಧ್ಯಕ್ಷ ರೆ| ಡಾ| ಅಲೋಶಿಯಸ್ ಪಾವ್ ಡಿ’ಸೋಜಾ ಹೇಳಿದರು.
ಫಾ| ಮುಲ್ಲರ್ ಕನ್ವೆನ್ಶನ್ ಸೆಂಟರ್‌ನಲ್ಲಿ ಶನಿವಾರ ಜರಗಿದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು
ಇತರ ಆರೋಗ್ಯ ವಿಜ್ಞಾನ ಸಂಸ್ಥೆಗಳ ಹಾಗೂ ಫಾದರ್ ಮುಲ್ಲರ್ ವಾಕ್ ಶ್ರವಣ ಕಾಲೇಜಿನ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಣಿಪಾಲ ವಿಶ್ವವಿದ್ಯಾನಿಲಯ ಸಹ ಕುಲಪತಿ ಡಾ| ಜಿ.ಕೆ. ಪ್ರಭು ಅವರು ಪದವಿಪ್ರದಾನ ಮಾಡಿದರು.
ಫಾದರ್ ಮುಲ್ಲರ್ ಸಂಸ್ಥೆಗಳ ಪ್ರಭಾರ ನಿರ್ದೇಶಕ ಫಾ| ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಸ್ವಾಗತಿಸಿದರು. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಇತರ ಆರೋಗ್ಯ ವಿಜ್ಞಾನ ಸಂಸ್ಥೆಗಳ ಡೀನ್ ಡಾ| ಜೆ.ಪಿ. ಆಳ್ವ , ಫಾದರ್ ಮುಲ್ಲರ್ ವಾಕ್‌ಶ್ರವಣ ಕಾಲೇಜಿನ ಪ್ರಾಂಶುಪಾಲ ಅಖೀಲೇಶ್ ಪಿ.ಎಂ. ಅವರು ಪದವೀಧರರ ವಿವರ ನೀಡಿ ಪ್ರತಿಜ್ಞಾವಿಧಿ ಬೋಧಿಸಿದರು.
ಫಾ| ಮುಲ್ಲರ್ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಫಾ| ರುಡೋಲ್ಫ್ ರವಿ ಡೇಸಾ ಉಪಸ್ಥಿತರಿದ್ದರು. ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆ ಇದರ ಆಡಳಿತಾಧಿಕಾರಿ ಫಾ| ರೋಶನ್ ಕ್ರಾಸ್ತಾ, ಫಾದರ್ ಮುಲ್ಲರ್ ಸಂಸ್ಥೆಗಳ ಸಹಾಯಕ ಆಡಳಿತಾಧಿಕಾರಿ ಫಾ| ಅಜಿತ್ ಮಿನೇಜಸ್, ವೈದ್ಯಕೀಯ ಸೇವೆಗಳ ಮುಖ್ಯಸ್ಥ ಡಾ| ಸಂಜೀವ ರೈ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ | ಉದಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
2016ನೇ ಸಾಲಿನ ಅತ್ಯುತ್ತಮ ನಿರ್ಗಮನ ಪದವೀಧರೆ ಡಾ| ಸಹನಾಗೆ ಫಾದರ್ ಮುಲ್ಲರ್ ಸಂಸ್ಥೆಗಳ ಅಧ್ಯಕ್ಷರ ಚಿನ್ನದ ಪದಕ ಪುರಸ್ಕಾರ ಪ್ರದಾನ ಮಾಡಲಾಯಿತು. ವಿವಿಧ ಕ್ಷೇತ್ರಗಳ ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. 294 ಮಂದಿ ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.