ತಿಂಗಳಲ್ಲಿ ಬರಲಿದೆ ವಲಯ ಮರು ವಿಂಗಡಣೆ ಆದೇಶ!


Team Udayavani, Apr 4, 2017, 11:16 AM IST

george.jpg

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹಾಲಿ ಇರುವ ಎಂಟು ವಲಯಗಳನ್ನು 10 ವಲಯಗಳಾಗಿ ವಿಭಜಿಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ಇನ್ನೊಂದು ತಿಂಗಳಲ್ಲಿ ಮರುವಿಂಗಡಣೆ ಆದೇಶ ಹೊರಬೀಳುವ ಸಾಧ್ಯತೆಯಿದೆ. 

ಈ ಸಂಬಂಧ ಬಿಬಿಎಂಪಿ ಪುನಾರಚನೆ ಸಮಿತಿ ಸದಸ್ಯರು, ನಗರದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌, ಸದ್ಯ ಇರುವ ವಲಯ ಅಸಮಾನತೆ ನಿವಾರಿಸಿ ಹೊಸ ವಲಯ ಸೃಷ್ಟಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಪಾಲಿಕೆಯ ವಿಭಜನೆಗೆ ಸಂಬಂಧಿಸಿದಂತೆ ಕರ್ನಾಟಕ ಮುನ್ಸಿಪಲ್‌ ಕಾಯ್ದೆಯ ತಿದ್ದುಪಡಿಗೆ ಸಂಬಂಧಿಸಿದಂತೆ ರಾಷ್ಟ್ರಪತಿಗಳ ನಿರ್ಧಾರ ಹೊರಬೀಳುವ ಮುನ್ನವೇ ರಾಜ್ಯ ಸರ್ಕಾರ ಬಿಬಿಎಂಪಿ ವಲಯಗಳ ಮರು ವಿಂಗಡಣೆಗೆ ಮುಂದಾಗಿದೆ. 

ಹತ್ತು ವಲಯಗಳನ್ನಾಗಿ ಪರಿವರ್ತಿಸಲು ಈ ಹಿಂದೆಯೇ ತೀರ್ಮಾನ ಕೈಗೊಂಡು ಪಟ್ಟಿ ಸಿದ್ಧಪಡಿಸಿದ್ದರೂ, ಪಟ್ಟಿಯಲ್ಲಿ ಸಾಕಷ್ಟು ದೋಷಗಳಿದ್ದ ಕಾರಣ ಮರುಪರಿಶೀಲನೆಗೆ ಸರ್ಕಾರ ಮುಂದಾಗಿತ್ತು. ಇದೀಗ ಪಟ್ಟಿಯನ್ನು ಅಂತಿಮಗೊಳಿಸಿದ್ದು, ತಿಂಗಳಲ್ಲಿ 8 ವಲಯಗಳನ್ನು 10 ವಲಯಗಳನ್ನಾಗಿ ಮರುವಿಂಗಡಿಸುವ ಆದೇಶ ಹೊರಬೀಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ವಲಯ ಪುನಾರಚನೆಗೆ ಸಂಬಂಧಿಸಿದಂತೆ ಬಿಬಿಎಂಪಿ ಪುನಾರಚನಾ ತಜ್ಞರ ಸಮಿತಿ ನೀಡಿದ್ದ ವರದಿಯಲ್ಲಿ, ವಲಯವಷ್ಟೇ ಅಲ್ಲದೆ ಜನಸಂಖ್ಯೆ, ಆದಾಯದಲ್ಲಿನ ಅಸಮತೋಲನ ಗಮನದಲ್ಲಿಟ್ಟು ಕೊಂಡು ವಾರ್ಡ್‌ಗಳನ್ನು ಪುನಾರಚಿಸಬೇಕು ಎಂದು ಸೂಚಿಸಿತ್ತು. ಹಾಗೆಯೇ, ಈಗಿರುವ ಬಿಬಿಎಂಪಿಯನ್ನು 5 ಭಾಗವಾಗಿ ಮಾಡಬೇಕು ಎಂದು ತಿಳಿಸಿ, ಪ್ರತಿ ಪಾಲಿಕೆಗೂ ಎರಡು ವಲಯಗಳಂತೆ 10 ವಲಯಗಳನ್ನು ರಚಿಸಬೇಕು ಎಂದು ತಿಳಿಸಲಾಗಿತ್ತು. ಅದರಂತೆ ಇದೀಗ ವಲಯಗಳನ್ನು ವಿಂಗಡಿಸಲು ನಿರ್ಧರಿಸಲಾಗಿದೆ. 

ಅಸಮಾನತೆ ನಿವಾರಣೆಗೆ ಕ್ರಮ: ಪ್ರಸ್ತುತ ಇರುವ ವಲಯಗಳಲ್ಲಿನ ಅಸಮಾನತೆ ಆಡಳಿತದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ವಲಯಗಳ ಪೈಕಿ ಕನಿಷ್ಠ 4.45 ಲಕ್ಷ ಹಾಗೂ ಗರಿಷ್ಠ 19.6 ಲಕ್ಷ ಜನಸಂಖ್ಯೆ ಇದೆ. ಅದರೊಂದಿಗೆ ಆದಾಯದಲ್ಲೂ ವ್ಯತ್ಯಾಸವಿದೆ. ಈ ಕಾರಣದಿಂದಾಗಿ ವಲಯಗಳನ್ನು ಪುನರ್‌ ವಿಂಗಡಣೆ ಮಾಡುವ ಕುರಿತು 2015ರ ಅಕ್ಟೋಬರ್‌ನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಬಿಎಂಪಿ ಪುನಾರಚನಾ ಸಮಿತಿ ಪ್ರಸ್ತಾವನೆ ಸಲ್ಲಿಸಿತ್ತು. 10 ವಲಯಗಳಿಗೆ 198 ವಾರ್ಡ್‌ಗಳನ್ನು ಸಮಾನವಾಗಿ ಹಂಚುವ ಕುರಿತಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದರು. 

ಪ್ರತಿ ವಲಯಕ್ಕೆ 30 ವಾರ್ಡ್‌?: ಪ್ರತಿ ವಲಯಕ್ಕೆ ಕನಿಷ್ಠ 30 ವಾರ್ಡ್‌ಗಳಿರುವಂತೆ ನೋಡಿಕೊಳ್ಳಲು ತೀರ್ಮಾನಿಸಿದ್ದು, ಅದರೊಂದಿಗೆ ವಿಧಾನಸಭೆ ಕ್ಷೇತ್ರದ ಎಲ್ಲ ವಾರ್ಡ್‌ಗಳು ಒಂದೇ ವಲಯ ವ್ಯಾಪ್ತಿಗೆ ಬರುವಂತೆ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಸೋಮವಾರದ ಸಭೆಯಲ್ಲಿ ಈ ಕುರಿತು ಬಿಬಿಎಂಪಿ ಪುನರ್‌ರಚನಾ ಸಮಿತಿ ಅಧ್ಯಕ್ಷ ಬಿ.ಎಸ್‌.ಪಾಟೀಲ್‌ ಅವರಿಗೆ ಸೂಚನೆ ನೀಡಿರುವ ಸಚಿವ ಕೆ.ಜೆ.ಜಾರ್ಜ್‌, ವಲಯ ಪುನಾರಚನೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಹಿರಿಯ ಅಧಿಕಾರಿಗಳ ನೇಮಕ
ಹೊಸ ವಲಯಗಳಿಗೆ ಅಗತ್ಯವಿರುವ ಅಧಿಕಾರಿಗಳ ನೇಮಕಕ್ಕೆ ಸರ್ಕಾರ ತೀರ್ಮಾನಿಸಿದ್ದು, ಆದೇಶದಂತೆ ಈ ವಲಯಗಳಿಗೆ ಸರ್ಕಾರದಿಂದಲೇ ಉನ್ನತ ಅಧಿಕಾರಿಗಳನ್ನು ನೇಮಿಸುವುದು ಮತ್ತು ಪಾಲಿಕೆಯಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಮುಂಬಡ್ತಿ ನೀಡಲು ತೀರ್ಮಾನಿಸಲಾಗಿದೆ. ಜತೆಗೆ ನೇರ ನೇಮಕಾತಿ ಮೂಲಕ ಹೊಸದಾಗಿ ಅಧಿಕಾರಿಗಳನ್ನು ನೇಮಿಸಲು ಸರ್ಕಾರ ಬಿಬಿಎಂಪಿಗೆ ಸೂಚಿಸಿದ್ದು, ಇದರಿಂದ 1,004 ಹೊಸ ಹುದ್ದೆಗಳು ಸೃಷ್ಟಿಯಾಗಲಿವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಹತ್ತು ವಲಯಗಳು 
ಯಲಹಂಕ, ದಾಸರಹಳ್ಳಿ, ಮಹ ದೇವಪುರ, ಕೆ.ಆರ್‌.ಪುರ, ಗೋವಿಂದ ರಾಜನಗರ, ಪದ್ಮನಾಭನಗರ, ಬೊಮ್ಮನ ಹಳ್ಳಿ, ಜಯನಗರ, ಮಲ್ಲೇಶ್ವರ ಮತ್ತು ರಾಜಾಜಿನಗರ.

ಟಾಪ್ ನ್ಯೂಸ್

IPL 2024: Pant has the ambition to become India’s cricket captain: Parth Jindal

IPL 2024: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-darshan

Renukaswamy case: ದರ್ಶನ್‌ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

10-darshan

Renukaswamy case: ದರ್ಶನ್‌ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ

9-kottigehara

Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ

IPL 2024: Pant has the ambition to become India’s cricket captain: Parth Jindal

IPL 2024: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.