ಮಂಗಳೂರು: PFI ಪ್ರತಿಭಟನೆಯ ವೇಳೆ ಲಾಠಿ ಚಾರ್ಜ್; ಹಲವರಿಗೆ ಗಾಯ
Team Udayavani, Apr 4, 2017, 11:30 AM IST
ಮಂಗಳೂರು: ಇಲ್ಲಿನ ಪೊಲೀಸ್ ಆಯುಕ್ತರ ಕಚೇರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು ಮಂಗಳವಾರ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಲಾಠಿ ಚಾರ್ಜ್ ನಡೆದ ಘಟನೆ ನಡೆದಿದೆ.
ಹಿಂದೂ ಪರ ಸಂಘಟನೆಯ ನಾಯಕರ ಹತ್ಯೆಗೆ ಸಂಬಂಧಿಸಿ ಸಂಘಟನೆಯ ಕಾರ್ಯಕರ್ತನನ್ನು ಬಂಧಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆದಿದ್ದು, ಈ ವೇಳೆ ಬಸ್‌ಗಳ ಮೇಲೂ ಕಲ್ಲು ತೂರಾಟ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ನೂರಾರು ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಹಿಗ್ಗಾಮುಗ್ಗಾ ಲಾಠಿ ಬೀಸಿದ್ದಾರೆ.
ಲಾಠಿ ಏಟಿನಿಂದ ಹಲವರು ಗಾಯಗೊಂಡಿದ್ದು , ಓರ್ವ ಪಿಎಫ್ಐ ಕಾರ್ಯಕರ್ತನ ತಲೆಗೆ ಗಂಭೀರ ಗಾಯವಾಗಿ ತೀವ್ರ ಸ್ವರೂಪದಲ್ಲಿ ರಕ್ತಸ್ರಾವವಾಗಿದೆ. ಗಾಯಾಳುಗಳಿಗೆ ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
7 ಮಂದಿ ಪೊಲೀಸ್ ಸಿಬಂದಿಯೂ ಗಾಯಗೊಂಡಿರುವುದಾಗಿ ಆಯುಕ್ತ ಚಂದ್ರಶೇಖರ್ ಅವರು ತಿಳಿಸಿದ್ದಾರೆ.
ಮುತ್ತಿಗೆ ಹಾಕಲು ಯತ್ನಿಸಿದ 60 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ಕರೆಸಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadaba: ಇಂಗ್ಲಿಷ್ ಮಾಧ್ಯಮದಲ್ಲಿ ಕಲಿತರಷ್ಟೇ ಸಾಧನೆ ಸಾಧ್ಯ ಎಂಬುದು ಭ್ರಮೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ
Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.