ನೇತ್ರ ಚಿಕಿತ್ಸೆ ಯಶಸ್ವಿ: ಫಲಾನುಭವಿಗಳ ಸಂತಸ
Team Udayavani, Apr 4, 2017, 1:01 PM IST
ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಚಿತ್ತಕನಪಲ್ಲಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ 350 ಜನರ ನೇತ್ರ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಯಿತು. ಶಿಬಿರದಲ್ಲಿ 27 ಮಹಿಳೆಯರು, 27 ಪುರುಷರು ಹಾಗೂ ನಾಲ್ಕು ವರ್ಷದ ಮಗು ಸೇರಿ 55 ಜನರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ಬಸವೇಶ್ವರ ಆಸ್ಪತ್ರೆಯಲ್ಲಿ ನಡೆಸಿ ಕೃತ್ರಿಮ ಮಸೂರ ಅಳವಡಿಸಲಾಯಿತು.
60 ವರ್ಷಕ್ಕೂ ಮೇಲ್ಪಟ್ಟ ಬಡ ಹಿರಿಯ ನಾಗರಿಕರಲ್ಲಿ ಬಹುತೇಕ ಫಲಾನುಭವಿಗಳು ಅನೇಕ ವರ್ಷದಿಂದ ತೊಂದರೆ ಅನುಭವಿಸುತ್ತಿದ್ದರು. ಅವರ ಮನವೊಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಕ್ಯಾಟರ್ಯಾಕ್ಟ್ ಸರ್ಜರಿಗೆ ಒಳಪಟ್ಟ 55 ಫಲಾನುಭವಿಗಳಿಗೆ ಬಿಡುಗಡೆ ದಿನ ಎಂ ಆರ್ ವೈದ್ಯಕೀಯ ಕಾಲೇಜಿನ ಡೀನ್ ಡಾ| ಎಸ್. ಆರ್.ಹರವಾಳ,
ವೈದ್ಯಕೀಯ ನಿರ್ದೇಶಕ ಡಾ| ಎಸ್.ಕೆ. ಆಂದೋಲಾ, ಬಸವೇಶ್ವರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಶರಣಗೌಡ ಪಾಟೀಲ, ಉಪ ವೈದ್ಯಕೀಯ ಅಧೀಕ್ಷಕ ಡಾ| ಎಂ.ಆರ್. ಪೂಜಾರಿ ಹಾಗೂ ನೇತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ| ವಿಶ್ವನಾಥ ರೆಡ್ಡಿ ಯೋಗಕ್ಷೇಮ ವಿಚಾರಿಸಿದರು.
ನೇತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ| ವಿಶ್ವನಾಥ ರೆಡ್ಡಿ ನೇತೃತ್ವದಲ್ಲಿ ನೇತ್ರ ತಜ್ಞರಾದ ಡಾ| ಎಂ.ಆರ್. ಪೂಜಾರಿ, ಡಾ| ರಾಜಶ್ರೀ ರೆಡ್ಡಿ, ಡಾ| ಪ್ರಜ್ವಲ್‌ರೆಡ್ಡಿ, ಡಾ| ಮಂಜುಳಾ ಮಂಗಾಣಿ, ಡಾ| ಕವಿತಾ ಸಲಗರ, ಡಾ| ಸುಮೀತ ದೇಶಪಾಂಡೆ, ಡಾ| ವೀರೇಶ ಕೋರವಾರ, ಡಾ| ಅಂಬಿಕಾ ಪಾಟೀಲ ಹಾಗೂ ಡಾ| ವಿನೀತ ಬಿಮಶೆಟ್ಟಿ ಹಾಗೂ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ
Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ
RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್ ಅಖ್ತರ್ ಖುಲಾಸೆ
SC: ಬಿಯಾಂತ್ ಹಂತಕ ಬಲ್ವಂತ್ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ
Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.