ರಾಜ್ಯದ ಕೆಲವೆಡೆ ಮಳೆ, ಸಿಡಿಲಿಗೆ ಇಬ್ಬರ ಬಲಿ
Team Udayavani, Apr 5, 2017, 3:45 AM IST
ಬೆಂಗಳೂರು: ಹಾಸನ, ಸುಳ್ಯ, ಹೊಸದುರ್ಗ ಸೇರಿ ರಾಜ್ಯದ ಕೆಲವೆಡೆ ಮಂಗಳವಾರ ಮಳೆಯಾಗಿದ್ದು, ಹಾಸನ ಜಿಲ್ಲೆಯಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಹಾಸನ ನಗರ ಸೇರಿ ಜಿಲ್ಲೆಯ ವಿವಿಧೆಡೆ ಮಂಗಳವಾರ ಗುಡುಗು-ಸಿಡಿಲು, ಬಿರುಗಾಳಿ ಸಹಿತ ಮಳೆ ಸುರಿಯಿತು. ಹಾಸನ ನಗರದಲ್ಲಿ ಮಧ್ಯಾಹ್ನ 2-15ಕ್ಕೆ ಆರಂಭವಾದ ಮಳೆ ಸುಮಾರು ಅರ್ಧ ಗಂಟೆ ಕಾಲ ಸುರಿಯಿತು. ಬಿರುಗಾಳಿಯಿಂದಾಗಿ ಕೆಲವು ರಸ್ತೆಗಳಲ್ಲಿ ಮರಗಳು ಧರೆಗುರುಳಿ ರಸ್ತೆ ಸಂಚಾರ
ಅಸ್ತವ್ಯಸ್ಥವಾಯಿತು. ಸಂಜೆ 6 ಗಂಟೆಗೆ ಪುನಃ ಆರಂಭವಾದ ಮಳೆಯಿಂದಾಗಿ ಸತತ 2 ಗಂಟೆಗಳ ಕಾಲ ವಿದ್ಯುತ್ ಸ್ಥಗಿತಗೊಂಡು ಹಾಸನ ನಗರ ಕಗ್ಗತ್ತಲಲ್ಲಿ ಮುಳುಗಿತು.
ಈ ವೇಳೆ, ಅರಕಲಗೂಡು ತಾಲೂಕು ಬಸವನಹಳ್ಳಿಯಲ್ಲಿ ಸಿಡಿಲಿಗೆ ಇಬ್ಬರು ಬಲಿಯಾದರು. ಮೃತರನ್ನು ಗ್ರಾಮದ
ಮುರುಳಿ (39) ಹಾಗೂ ವಿಜಯಕುಮಾರ್ (45) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸಕ್ಕೆ ತೆರಳಿದ್ದಾಗ ಸಂಜೆ 5.30ರ ವೇಳೆ ಸಿಡಿಲು ಬಡಿಯಿತು. ಈ ಮಧ್ಯೆ, ಹಾಸನ ತಾಲೂಕು ಹೊಳಲು ಬಾರೆಯಲ್ಲಿ ಸಿಡಿಲು ಬಡಿದು ಮೂರು ಹಸುಗಳು ಅಸುನೀಗಿವೆ. ಬಸವನಹಳ್ಳಿ ಕೊಪ್ಪಲು, ಚಾಮರಾಜನಗರ ತಾಲೂಕಿನ ಹಲವೆಡೆ ಗಾಳಿ, ಮಳೆಗೆ ಮನೆಗಳ ಶೀಟ್‌ಗಳು ಹಾರಿಹೋಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಸುಬ್ರಹ್ಮಣ್ಯ, ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಸುತ್ತಮುತ್ತ ಸಂಜೆಯ ವೇಳೆ ಬಿರುಸಿನ ಮಳೆಯಾಗಿದೆ.
ಈ ಮಧ್ಯೆ, ಮಂಗಳವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ತುಮಕೂರು ಜಿಲ್ಲೆಯ
ಮಧುಗಿರಿಯಲ್ಲಿ 2 ಸೆಂ.ಮೀ.ಮಳೆಯಾದರೆ, ಚಿಕ್ಕಮಗಳೂರು, ವೈ.ಎನ್.ಹೊಸ್ಕೋಟೆ ಮತ್ತು ಹೊಸದುರ್ಗದಲ್ಲಿ ತಲಾ 1 ಸೆಂ. ಮೀ.ಮಳೆ ಸುರಿಯಿತು. ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 41.6 ಡಿ.ಸೆ.ತಾಪಮಾನ ದಾಖಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.