ತಮಿಳುನಾಡಿನಿಂದ ಬಂದು ಕಳ್ಳತನ ಮಾಡುತ್ತಿದ್ದವರ ಸೆರೆ
Team Udayavani, Apr 5, 2017, 12:00 PM IST
ಬೆಂಗಳೂರು: ಬಿಎಂಟಿಸಿ ಬಸ್ ಹಾಗೂ ಮನೆಗಳಲ್ಲಿ ಕಳವು ಮಾಡುತ್ತಿದ್ದ ಇಬ್ಬರು ಮಹಿಳೆ ಸೇರಿದಂತೆ ಐವರು ತಮಿಳುನಾಡು ಮೂಲದ ಕಳ್ಳರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಧಿಡಿನ ಕೃಷ್ಣಗಿರಿ ಜಿಲ್ಲೆಯ ನಾಗರಾಜ್, ಶ್ರೀನಿವಾಸ್, ಭಾಗ್ಯಮ್ಮ, ತಿಮ್ಮಯ್ಯ ಮತ್ತು ಅಮರಾವತಿ ಬಂಧಿತರು. ಆರೋಪಿಗಳಿಂದ 15 ಲಕ್ಷ ಮೌಲ್ಯದ 470 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ತಮಿಳುನಾಡಿನಿಂದ ರೈಲಿನಲ್ಲಿ ಬಂದು ನಿಲ್ದಾಣದಲ್ಲೇ ತಂಗುತ್ತಿದ್ದರು. ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಂಚರಿಸಿ ಮಹಿಳೆಯರ ಪರ್ಸ್‌ನಲ್ಲಿರುವ ಮೊಬೈಲ್ ಚಿನ್ನಾಭರಣ, ನಗದು, ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದರು. ಅಲ್ಲದೆ. ಹಗಲು ವೇಳೆ ಬೀಗ ಹಾಕಿದ್ದ ಮನೆಗಳಿಗೆ ನುಗ್ಗಿ ಕಳವು ಮಾಡುತ್ತಿದ್ದರು. ರಾತ್ರಿ ವೇಳೆ ಕಿಟಕಿ ಮೂಲಕ ಕೈ ಹಾಕಿ ಮಲಗಿದ್ದವರ ಮೈ ಮೇಲಿದ್ದ ಒಡವೆಗಳನ್ನು ಕದಿಯುತ್ತಿದ್ದರು.
ನಕಲಿ ಕೀಯನ್ನು ಬಳಕೆ ಮಾಡಿ ದರೋಡೆ ಮಾಡುವುದನ್ನೆ ವೃತ್ತಿಯನ್ನಾಗಿಸಿಕೊಂಡಿಧಿದ್ದರು. ಕಳ್ಳತನ ಮಾಡಿದ ವಸ್ತುಗಳನ್ನು ಅತ್ತಿಬೆಲೆ, ಜಿಗಣಿ, ಬೇತಮಂಗಲ, ತಮಿಳುನಾಡಿನ ರಾಯಕೋಟೆ, ಸೊಳಗೆರೆ ಅತ್ತಿಕೋಟಂ, ಬೈರಿಕೆ ಮುಂತಾದ ಗಿರವಿ ಅಂಗಡಿಗಳಲ್ಲಿ ಅಡವಿಟ್ಟು ಹಣ ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿªದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.