ರಾಜಕಾಲುವೆಯ ಪಥ ಬದಲಾವಣೆ ಪಾಲಿಕೆ ಸದಸ್ಯೆ, ಅಧಿಕಾರಿ ಪರಿಶೀಲನೆ
Team Udayavani, Apr 5, 2017, 12:19 PM IST
ಮಹದೇವಪುರ: ವೈಟ್‌ಫೀಲ್ಡ್ ಸಮೀ ಪದ ತೂಬರಹಳ್ಳಿ ಬಳಿ ಸಿದ್ದಾಪುರ ಕೆರೆಯಿಂದ ವರ್ತೂರು ಕೆರೆಗೆ ಸಂಪರ್ಕ ಕಲ್ಪಿಸುವ ರಾಜಕಾಲುವೆಯ ಮಾರ್ಗವನ್ನು ಬದಲಿಸಿ ಕೆಲ ಪಟ್ಟಭದ್ರರರು ವಾಣಿಜ್ಯ ಸಂಕೀರ್ಣ ನಿರ್ಮಿಸುತ್ತಿದ್ದು, ಈ ಬಗ್ಗೆ ಪಾಲಿಕೆಯ ಸ್ಥಳೀಯ ಅಕಾರಿಗಳು ಠಾಣೆಗೆ ದೂರು ನೀಡಿದ್ದರೂ, ಕಟ್ಟಡ ನಿರ್ಮಾಣ ಕಾರ್ಯ ಮುಂದುವರಿದ ಹಿನ್ನೆಲೆಯಲ್ಲಿ ಸ್ಥಳೀಯ ಪಾಲಿಕೆ ಸದಸ್ಯೆ ಶ್ವೇತಾ ವಿಜಯ್‌ಕುಮಾರ್ ಮತ್ತು ಬಿಬಿಎಂಪಿ ನೀರುಗಾಲುವೆ ಅಕಾರಿಗಳು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜಕಾಲುವೆ ಪಥ ಬದಲಿಸಿ ಕಟ್ಟಡ ನಿರ್ಮಿಸುತ್ತಿದ್ದ ಬಗ್ಗೆ ಕೇಳಿ ಬಂದಿದ್ದ ಆರೋಪಗಳ ಹಿನ್ನೆಲೆಯಲ್ಲಿ ಕಳೆದ ಹದಿನೈದು ದಿನಗಳ ಹಿಂದೆಯೇ ಪಾಲಿಕೆಯ ಸ್ಥಳೀಯ ಅಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಮೇಲ್ನೋಟಕ್ಕೆ ಅಕ್ರಮ ಕಂಡು ಬಂದ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ವರ್ತೂರು ಠಾಣೆಯಲ್ಲಿ ದೂರು ಕೂಡ ನೀಡಿದ್ದರು.
ಹೀಗಾದರೂ, ಕಟ್ಟಡ ನಿರ್ಮಾಣ ಕಾಮಗಾರಿ ಮುಂದುವರೆದಿತ್ತು. ಈ ಹಿನ್ನೆಲೆಯಲ್ಲಿ ಕಾರ್ಪೋರೇಟರ್ ಮತ್ತು ಅಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ ಸ್ಥಳೀಯ ಪಾಲಿಕೆ ಸದಸ್ಯೆ ಶ್ವೇತ ವಿಜಯ್ ಕುಮಾರ್, “ರಾಜಕಾಲುವೆ ಮಾರ್ಗ ಬದಲಿಸಲು ಸಂಚು ರೂಪಿಸಿರುವ ಅಕ್ರಮ ಬೆಳಕಿಗೆ ಬಂದಿದೆ. ಈ ಬಗ್ಗೆ ಸಂಬಂದಪಟ್ಟ ಅಕಾರಿಗಳಿಗೆ ದೂರು ನೀಡಿ ಕ್ರಮ ಕೈಗೊಳ್ಳುತ್ತೇವೆ,” ಎಂದು ತಿಳಿಸಿದರು.
ಪಾಲಿಕೆಯ ಬೃಹತ್ ನಿರುಗಾಲುವೆ ಇಂಜಿನಿಯರ್ ಪಾಂಡುರಂಗಯ್ಯ “ರಾಜಕಾಲುವೆ ಮಾರ್ಗ ಬದಲಾವಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಕೂಡಲೇ ಸರ್ವೇ ಮಾಡಿಸಿ ರಾಜಕಾಲುವೆಗೆ ಹದ್ದುಬಸ್ತು ಗುರುತಿಸಲಾಗುವುದು,” ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್’
Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ
Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ
Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ
Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್
MUST WATCH
ಹೊಸ ಸೇರ್ಪಡೆ
Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್’
Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ
Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ
Raichur: ವಕ್ಫ್ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ
Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.