25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ
Team Udayavani, Apr 5, 2017, 12:41 PM IST
ಮೈಸೂರು: ಬಿಜೆಪಿಗೆ ನೀವೂ ಮತ ಹಾಕಿ, ಉಳಿದವರಿಂದಲೂ ಮತ ಹಾಕಿಸಿ ಎಂದು ಬಿಜೆಪಿಯ ಬೂತ್ ಸಮಿತಿ ಕಾರ್ಯಕರ್ತರಿಗೆ ಬಿಜೆಪಿ ರಾಜಾÂಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿವಿಮಾತು ಹೇಳಿದರು.|
ನಂಜನಗೂಡು ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಬೂತ್ ಸಮಿತಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಾರ್ಯಕರ್ತರು ಎಲ್ಲ ಮತದಾರರ ಮನವೊಲಿಸಿ ನಮ್ಮ ಪಕ್ಷದ ಅಭ್ಯರ್ಥಿ ವಿ.ಶ್ರೀನಿವಾಸ ಪ್ರಸಾದ್ ಅವರು 25 ಸಾವಿರ ಮತಗಳ ಅಂತರದಲ್ಲಿ ಜಯಗಳಿಸುವಂತೆ ಮಾಡಬೇಕು.
ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಫಲಿತಾಂಶ 2018ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆಯ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂಬುದನ್ನು ಮರೆಯಬಾರದು ಎಂದರು. ಮತದಾನದ ದಿನ ನಮ್ಮ ಕಾರ್ಯಕರ್ತರು ಬಹಳ ಎಚ್ಚರಿಕೆಯಿಂದಿರಬೇಕು.
ಕಾಂಗ್ರೆಸ್‌ನವರು ನಡೆಸುವ ಅಕ್ರಮಗಳನ್ನು ಚುನಾವಣಾಧಿಕಾರಿಗಳ ಗಮನಕ್ಕೆ ತಂದು ಚುನಾವಣೆಯು ನ್ಯಾಯಸಮ್ಮತವಾಗಿ ನಡೆಯಲು ಸಹ ಶ್ರಮಿಸಬೇಕು. ಗುಂಡ್ಲುಪೇಟೆ ಮತ್ತು ನಂಜನಗೂಡಿನಲ್ಲಿ ಬಿಜೆಪಿ ಪರವಾದ ವಾತಾವರಣ ಮೂಡಿದ್ದು ಅದನ್ನು ನಮ್ಮ ಪಕ್ಷದ ಗೆಲುವಿಗೆ ಪೂರಕವಾಗಿ ಬಳಸಿಕೊಳ್ಳುವಲ್ಲಿ ವಿಶೇಷ ಆಸಕ್ತಿ ತೋರಿಸಬೇಕು ಎಂದು ತಿಳಿಸಿದರು.
ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ಮಾತನಾಡಿ, ಯಾವ ಪ್ರಮಾಣದಲ್ಲಿ ಬಿಜೆಪಿ ಕಾರ್ಯಕರ್ತರು ಬೂತ್‌ಗಳಿಗೆ ಮತದಾರರನ್ನು ಕರೆತರುತ್ತೀರೋ ಅಷ್ಟೇ ಪ್ರಮಾಣದಲ್ಲಿ ಬಿಜೆಪಿಯ ಗೆಲುವಿಗೆ ಬಹುಮತದ ಕ್ರೋಢೀಕರಣವಾಗಲಿದೆ ಎಂದರು.
ಸಂಸದೆ ಶೋಬಾ ಕರಂದ್ಲಾಜೆ ಮಾತನಾಡಿ, ಬಿಜೆಪಿ ಪರವಾಗಿರುವ ಮತಗಳು ಯಾವುದೇ ಕಾರಣಕ್ಕೂ ತಪ್ಪಿಹೋಗದಂತೆ ನೋಡಿಕೊಳ್ಳುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ನಂಜನಗೂಡು ಕ್ಷೇತ್ರವನ್ನು ಮುಂಬರುವ ದಿನಗಳಲ್ಲಿ ಅಭಿವೃದ್ಧಿಪಡಿಸುವುದಾಗಿ ನಾವು ನೀಡಿರುವ ಭರವಸೆ ಎಂದೂ ಹುಸಿಯಾಗದು ಎಂದರು.
ಮಾಜಿ ಸಚಿವರಾದ ವಿ.ಸೋಮಣ್ಣ, ಬಿ.ಸೋಮಶೇಖರ್, ಬಿಜೆಪಿ ಮುಖಂಡರಾದ ಎನ್.ವಿ.ಪಣೀಶ್, ಎಲ್.ನಾಗೇಂದ್ರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.