ಜನರ ಗುಳೆ ತಪ್ಪಿಸಲು ಮುಂದಾದ ಗ್ರಾಪಂ
Team Udayavani, Apr 5, 2017, 1:23 PM IST
ಮಾಯಕೊಂಡ: ಹೋಬಳಿಯಲ್ಲಿ ಈ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ಬರದ ಛಾಯೆ ಆವರಿಸಿದ್ದು, ಜನರು ಗುಳೆ ಹೋಗುವುದನ್ನು ತಪ್ಪಿಸಲು ಸ್ಥಳೀಯ ಗ್ರಾಪಂ ಸರ್ವ ಸದಸ್ಯರು ಮುಂದಾಗಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಮಾಯಕೊಂಡ ಗ್ರಾಪಂ ಸರ್ವ ಸದಸ್ಯರು ರೈತರಿಗೆ ಕೆಲಸ ನೀಡಲು ಮುಂದಾಗಿದ್ದಾರೆ.
ಗ್ರಾಮದ ಹೊಸ ಕೆರೆಯನ್ನು ಅಭಿವೃಧಿದ್ಧಿಪಡಿಸಲು ಉದ್ಯೋಗ ಖಾತರಿ ಯೋಜನೆಯಡಿ ದುಡುಯುವ ಕೈಗಳಿಗೆ ಕೆಲಸ ನೀಡಲಾಗಿದೆ. ಗ್ರಾಮದಲ್ಲಿ ಮಾರ್ಚ್ 9ರಿಂದ ಕೆರೆ ಹೂಳೆತ್ತೇವ ಕೆಲಸ ಪ್ರಾರಂಭಿಸಲಾಗಿದ್ದು, ಸದ್ಯ 97 ಜನರು ಕೆಲಸ ಮಾಡುತ್ತಿದ್ದಾರೆ. ಕೂಲಿಗಾಗಿ ಇನ್ನು ಹೆಚ್ಚು ಬೇಡಿಕೆಗಳು ಬಂದಿದ್ದು, ಕೆಲಸಗಾರರ ಸಂಖ್ಯೆ ಹೆಚ್ಚಾಗಬಹುದು.
ಕೂಲಿಕಾರರಿಗೆ ಮನವೊಲಿಸಿ ಗ್ರಾಮದ ಕೆರೆಯ ಹೂಳು ತೆಗೆಯಲಾಗಿತ್ತಿದೆ. ಇದರಿಂದಾಗಿ ಅಂತರ್ಜಲ ಹೆಚ್ಚುವಂತೆ ಮಾಡಿ ಬರಗಾಲದಲ್ಲಿ ಕುಡಿಯುವ ನೀರಿನ ಭವಣೆ ಆಗದಂತೆ ನೋಡಿಕೊಳ್ಳಲಾಗುವುದು. ಕೆರೆಯ ಹೂಳನ್ನು ರೈತರ ಜಮೀನುಗಳಿಗೆ ಸಾವಯವ ಗೊಬ್ಬರದಂತೆ ಬಳಸಿಕೊಳ್ಳಲಾಗುತ್ತಿದೆ ಎನ್ನುತ್ತಾರೆ ಪಿಡಿಒ ನಾಗರಾಜು. ಗ್ರಾಮದ ಕೆರೆ ಕೃಷಿ, ಜನ ಜಾನುವಾರುಗಳಿಗೆ ಪಕ್ಷಿಗಳಿಗೆ ಅಭಿವೃದ್ಧಿಯಿಲ್ಲದೇ ಹಾಳಾಗಿದೆ.
ಸಮಗ್ರ ಅಭಿವೃದ್ಧಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆರೆಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. 10 ಲಕ್ಷ ರೂ. ವೆಚ್ಚದಲ್ಲಿ ಕೆರೆ ಹೂಳೆತ್ತುವ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿತ್ತು. ಜನರು ಗುಳ್ಳೆ ಹೋಗಬಾರದು ಎಂದು ಹೂಳೆತ್ತುವ ಕಾಮಗಾರಿ ಆರಂಭಿಸಿದ್ದೇವೆ ಎನ್ನುತ್ತಾರೆ ಗ್ರಾಪಂ ಅಧ್ಯಕ್ಷ ಕೆ.ಆರ್. ಲಕ್ಮಣ್ಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.