ಕಾಶ್ಮೀರದ ಕಲ್ಲೆಸೆಯುವವರು ರಾಷ್ಟ್ರವಾದಿಗಳು : ಫಾರೂಕ್‌ ಅಬ್ದುಲ್ಲ


Team Udayavani, Apr 5, 2017, 4:28 PM IST

Farooq Abdulla-700.jpg

ಶ್ರೀನಗರ : ಕಾಶ್ಮೀರದಲ್ಲಿ ಕಲ್ಲೆಸೆಯುವವರು ಕಾಶ್ಮೀರ ರಾಷ್ಟ್ರಕ್ಕಾಗಿ ಹೋರಾಡುವವರಾಗಿದ್ದಾರೆ ಎಂದು ಹೇಳುವ ಮೂಲಕ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಶನಲ್‌ ಕಾನ್ಫರೆನ್ಸ್‌ ಪಕ್ಷದ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ ಅವರು ಕಾಶ್ಮೀರದ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು  ಮಾಡಿದ್ದಾರೆ.   ಮಾತ್ರವಲ್ಲ, ಕಾಶ್ಮೀರ ಪ್ರಶ್ನೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಅಮೆರಿಕ ಮಧ್ಯ ಪ್ರವೇಶಿಸುವುದು ತನಗೆ ಸ್ವೀಕಾರಾರ್ಹವಾಗಿದೆ ಎಂದು ಹೇಳಿದ್ದಾರೆ. 

ಎರಡು ದಿನಗಳ ಹಿಂದಷ್ಟೇ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು  ಕಾಶ್ಮೀರ ಕಣಿವೆಯ ಯುವಕರಿಗೆ ಭಯೋತ್ಪಾದನೆಯ ಬದಲು ಪ್ರವಾಸೋದ್ಯಮವನ್ನು ಆಯ್ಕೆ ಮಾಡುವಂತೆ ಕೋರಿದ್ದರು. 

ಇದಕ್ಕೆ ಉತ್ತರವೆಂಬಂತೆ ಫಾರೂಕ್‌ ಅಬ್ದುಲ್ಲ ಅವರು, “ನಮ್ಮ ಹೋರಾಟವು ಧರ್ಮದ ನೆಲೆಯಲ್ಲಿ ನಮ್ಮನ್ನು ವಿಭಜಿಸುವ ಜನರ ವಿರುದ್ಧವಾಗಿದೆ. ನಾನು ಮೋದೀಜಿ ಅವರಿಗೆ ಹೇಳಬಯಸುತ್ತೇನೆ: ಪ್ರವಾಸೋದ್ಯಮವು ಕಾಶ್ಮೀರಿಗಳ ಬದುಕೇ ಆಗಿರುವುದು ನಿಜ; ಆದರೆ ಕಲ್ಲೆಸೆಯುವವರಿಗೆ ಪ್ರವಾಸೋದ್ಯಮ ಬೇಕಾಗಿಲ್ಲ; ಅವರು ಹಸಿವಿನಿಂದ ಸಾಯಲು ಹಿಂಜರಿಯುವುದಿಲ್ಲ, ಆದರೆ ಕಾಶ್ಮೀರ ದೇಶಕ್ಕಾಗಿ ಕಲ್ಲೆಸೆಯಲು ಬಯಸುತ್ತಾರೆ; ನಾವಿದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ’ ಎಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ  ಹೇಳಿದರು. 

“ಭಾರತ – ಪಾಕಿಸ್ಥಾನಕ್ಕೆ ಕಾಶ್ಮೀರ ಪ್ರಶ್ನೆಯನ್ನು ಬಗೆಹರಿಸಲು ಸಾಧ್ಯವಾಗದಿದ್ದರೆ ಅಮೆರಿಕವು ಮುಂದೆ ಬಂದು ಎರಡು ದೇಶಗಳ ನಡುವಿನ ಮಧ್ಯಸ್ಥಿಕೆದಾರನಾಗಿ ನಿಂತು ಸಮಸ್ಯೆಯನ್ನು ಬಗೆಹರಿಸಬೇಕು’ ಎಂದು ಫಾರೂಕ್‌ ಹೇಳಿದರು. 

ಈ ನಡುವೆ ಭಾರತವು, ಕಾಶ್ಮೀರ ವಿಷಯದಲ್ಲಿ ಅಮೆರಿಕ ಮಧ್ಯಸ್ಥಿಕೆ ವಹಿಸುವ ಅಗತ್ಯ ಇಲ್ಲವೆಂದು ಸ್ಪಷ್ಟವಾಗಿ ಹೇಳಿದೆ. 

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.